ಜೆಕರ್ಯ 13:3 - ಕನ್ನಡ ಸಮಕಾಲಿಕ ಅನುವಾದ3 ಯಾವನಾದರೂ ಇನ್ನು ಪ್ರವಾದಿಸಿದರೆ, ಅವನ ಹೆತ್ತವರಾದ ತಂದೆತಾಯಿಗಳು ಅವನಿಗೆ, ‘ನೀನು ಬದುಕಬಾರದು, ಏಕೆಂದರೆ ಯೆಹೋವ ದೇವರ ಹೆಸರಿನಲ್ಲಿ ಸುಳ್ಳು ಹೇಳುತ್ತೀ,’ ಎಂದು ಹೇಳುವರು. ಅವನು ಪ್ರವಾದಿಸುವಾಗ ಅವನ ತಂದೆತಾಯಿಗಳು ಅವನನ್ನು ಇರಿದುಬಿಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯಾವನಾದರೂ ಪ್ರವಾದನೆ ಮಾಡಲು ಯತ್ನಿಸಿದರೆ, ಅವನ ತಾಯಿತಂದೆಗಳೇ, “ಇವನು ಸರ್ವೇಶ್ವರಸ್ವಾಮಿಯ ಹೆಸರೆತ್ತಿ ಸುಳ್ಳಾಡುವುದರಿಂದ ಅವನು ಬದುಕಬಾರದು,” ಎಂದು ಹೇಳುವರು. ಅಷ್ಟೇ ಅಲ್ಲ, ಅವನು ಮಾಡಿದ ಪ್ರವಾದನೆಯ ನಿಮಿತ್ತ ಅವರೇ ಅವನನ್ನು ತಿವಿದು ಕೊಂದುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ - ನೀನುಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತೀ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿವಿುತ್ತ ಅವನನ್ನು ಇರಿದುಬಿಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯಾವನಾದರೂ ಪ್ರವಾದಿಸುವದನ್ನು ಮಂದುವರಿಸಿದರೆ ಅವನು ಶಿಕ್ಷೆಗೆ ಗುರಿಯಾಗುವನು. ‘ನೀನು ಯೆಹೋವನ ಹೆಸರಿನಲ್ಲಿ ಸುಳ್ಳನ್ನು ಹೇಳಿರುವೆ. ಆದ್ದರಿಂದ ನೀನು ಸಾಯಲೇಬೇಕು’ ಎಂದು ಅವನ ಸ್ವಂತ ತಂದೆತಾಯಿಗಳು ಅವನಿಗೆ ಹೇಳುವರು. ಅವನ ಸ್ವಂತ ತಂದೆ ತಾಯಿಗಳು ಅವನು ಸುಳ್ಳು ಪ್ರವಾದನೆ ಹೇಳಿದ್ದಕ್ಕೆ ಅವನನ್ನು ಖಡ್ಗದಿಂದ ಕೊಲ್ಲಿಸುವರು. ಅಧ್ಯಾಯವನ್ನು ನೋಡಿ |
ಅವರು ನನಗೆ, “ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ನನ್ನ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲರ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಎಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರದಿಂದಲೂ ಅವರ ಅರಸರ ಮರಣದ ಸಮಯದಲ್ಲಿ ಅವರ ಅಂತ್ಯಕ್ರಿಯೆಯ ವಿಧಿಗಳ ಅರ್ಪಣೆಯಿಂದ ಅಪವಿತ್ರಗೊಳಿಸುವುದಿಲ್ಲ.