ಜೆಕರ್ಯ 13:8 - ಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಹೀಗೆ ಹೇಳುತ್ತಾರೆ, ಸಮಸ್ತ ದೇಶದಲ್ಲಿ ಮೂರರಲ್ಲಿ ಎರಡು ಪಾಲು ಹತರಾಗಿ ನಾಶವಾಗುವರು. ಆದರೆ ಮೂರನೆಯ ಪಾಲು, ಅದರಲ್ಲಿ ಉಳಿಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹತರಾಗುವರು ನಾಡಿನ ಮೂರರಲ್ಲೆರಡು ಭಾಗದವರು, ಮೂರನೆಯ ಭಾಗದವರು ಉಳಿಯುವರಲ್ಲಿ, ಸರ್ವೇಶ್ವರಸ್ವಾಮಿಯ ನುಡಿಯಿದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೇಶದ ಮೂರನೇ ಎರಡು ಪಾಲಷ್ಟು ಜನರು ಗಾಯಗೊಂಡು ಸಾಯುವರು. ಒಂದು ಪಾಲಷ್ಟು ಜನರು ಬದುಕಿ ಉಳಿಯುವರು. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.