ಜೆಕರ್ಯ 14:10 - ಕನ್ನಡ ಸಮಕಾಲಿಕ ಅನುವಾದ10 ಗೆಬ ಮೊದಲುಗೊಂಡು ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೂ ದೇಶವೆಲ್ಲಾ ಅರಾಬಾದ ಹಾಗೆ ಮಾರ್ಪಡುವುದು. ಯೆರೂಸಲೇಮ್ ತನ್ನ ಸ್ಥಳದಲ್ಲಿ ಬೆನ್ಯಾಮೀನನ ಬಾಗಿಲು ಮೊದಲುಗೊಂಡು, ಮೊದಲನೆಯ ಬಾಗಿಲಿನ ಸ್ಥಳದವರೆಗೂ, ಮೂಲೆ ಬಾಗಿಲಿನವರೆಗೂ, ಹನನೇಲನ ಗೋಪುರ ಮೊದಲುಗೊಂಡು ಅರಸನ ದ್ರಾಕ್ಷಿ ಆಲೆಗಳವರೆಗೂ ಎತ್ತರದಲ್ಲಿ ನಿವಾಸವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಉತ್ತರದಲ್ಲಿರುವ ಗೆಬದಿಂದ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ನಾಡೆಲ್ಲ ಸಮತಟ್ಟಾಗಿರುವುದು. ಜೆರುಸಲೇಮ್ ನಗರ ಮಾತ್ರ ಸುತ್ತಮುತ್ತಲಿನ ಪ್ರದೇಶಗಳಿಗಿಂತ ಎತ್ತರವಾಗಿ ನಿಲ್ಲುವುದು. ಒಂದು ಕಡೆ ಬೆನ್ಯಾಮಿನ್ ಬಾಗಿಲಿನಿಂದ ಪೂರ್ವಕಾಲದ ಮೂಲೆಯ ಬಾಗಿಲ ತನಕವೂ ಹನನೇಲಿನ ಗೋಪುರದಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತವೂ ಹರಡಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ದೇಶವು ಗೆಬದಿಂದ ಯೆರೂಸಲೇವಿುಗೆ ತೆಂಕಲಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತ ಇದ್ದ ಕಡೆಯೇ ಎತ್ತರದಲ್ಲಿ ನಿಂತಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು. ಅಧ್ಯಾಯವನ್ನು ನೋಡಿ |