Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:11 - ಕನ್ನಡ ಸಮಕಾಲಿಕ ಅನುವಾದ

11 ಅದರಲ್ಲಿ ಜನರು ವಾಸವಾಗಿರುವರು. ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು. ಆದರೆ ಯೆರೂಸಲೇಮು ಭದ್ರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪಕ್ಕೆ ತುತ್ತಾಗದೆ ಜನರು ನೆಮ್ಮದಿಯಾಗಿ ನೆಲೆಗೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದರಲ್ಲಿ ಜನರು [ತುಂಬಾ] ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮು ನೆಮ್ಮದಿಯಾಗಿ ನೆಲೆಗೊಂಡಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜನರು ಅಲ್ಲಿಗೆ ವಾಸಿಸಲು ಹೋಗುವರು. ಇನ್ನು ಮುಂದೆ ಯಾವ ಶತ್ರುವೂ ಅವರನ್ನು ನಾಶಮಾಡಲು ಬರುವುದಿಲ್ಲ. ಜೆರುಸಲೇಮ್ ಸುರಕ್ಷಿತವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:11
21 ತಿಳಿವುಗಳ ಹೋಲಿಕೆ  

ಇನ್ನು ಯಾವ ಶಾಪವೂ ಇರುವುದಿಲ್ಲ. ಅದರಲ್ಲಿ ದೇವರ ಮತ್ತು ಕುರಿಮರಿಯಾದವರ ಸಿಂಹಾಸನವಿರುವುದು. ದೇವರ ದಾಸರು ಅವರಿಗೆ ಸೇವೆಮಾಡುವರು.


ನಾನು ಇಸ್ರಾಯೇಲರನ್ನು ಅವರ ದೇಶದಲ್ಲಿ ನೆಡುವೆನು. ನಾನು ಅವರಿಗೆ ಕೊಟ್ಟಿರುವ ದೇಶದಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕರು,” ಎಂದು ನಿಮ್ಮ ದೇವರಾದ ಯೆಹೋವ ದೇವರು ಹೇಳುತ್ತಾರೆ.


‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು.


ನಾನು ಅವರನ್ನು ತರುವೆನು. ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು. ನಾನು ಅವರಿಗೆ ನಂಬಿಗಸ್ತನೂ, ನೀತಿವಂತನೂ ಆದ ದೇವರಾಗಿರುವೆನು.”


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ವೃದ್ಧರೂ, ಮುದುಕಿಯರೂ ವಾಸವಾಗಿರುವರು. ವೃದ್ದಾಪ್ಯದಿಂದ ಒಬ್ಬೊಬ್ಬರ ಕೈಯಲ್ಲಿ ಅವರವರ ಕೋಲು ಇರುವುದು.


“ಓಡಿಹೋಗಿ ಈ ಯೌವನಸ್ಥನಿಗೆ, ‘ಯೆರೂಸಲೇಮು, ಅದರಲ್ಲಿರುವ ಮನುಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾಗಿರುವುದು. ಯೆರೂಸಲೇಮು ಗೋಡೆ ಇಲ್ಲದ ಊರುಗಳಂತೆ ಇರುವುದು.


ಯೆಹೂದವು ಎಂದೆಂದಿಗೂ ಜನಭರಿತವಾಗುವುದು. ಯೆರೂಸಲೇಮು ಸಹ ತಲತಲಾಂತರಕ್ಕೂ ನಿಲ್ಲುವುದು.


ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.


ಇದಾದ ಮೇಲೆ ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿರುವುದು. ನಾನು ಅವರನ್ನು ನೆಲೆಗೊಳಿಸಿ ವೃದ್ಧಿಗೊಳಿಸುವೆನು. ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.


ಹೆಣ ಹೂಣುವ ಮತ್ತು ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಈ ಪಟ್ಟಣವು ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”


“ನಾನು ಉಂಟುಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ, ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗುವುದು,” ಎಂದು ಯೆಹೋವ ದೇವರು ಘೋಷಿಸುತ್ತಾರೆ.


ಬಲಾತ್ಕಾರವೂ, ನಿನ್ನ ದೇಶದೊಳಗೆ ಹಾಳಾದದ್ದೂ, ನಾಶವೂ, ನಿನ್ನ ಮೇರೆಗಳಲ್ಲಿ ಕೇಳಿಬರುವುದಿಲ್ಲ. ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ, ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿಡುವೆ.


ಆ ದಿವಸದಲ್ಲಿ ಯೆಹೂದ ದೇಶದಲ್ಲಿ ಈ ಹಾಡನ್ನು ಹಾಡುವರು: ನಮಗೆ ಬಲವಾದ ಪಟ್ಟಣವಿದೆ, ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ದೇವರು ಮಾಡುವರು.


ಆಗ ಯೆಹೋವ ದೇವರು ಇಸ್ರಾಯೇಲರ ಧ್ವನಿಯನ್ನು ಕೇಳಿ ಕಾನಾನ್ಯರನ್ನು ಒಪ್ಪಿಸಿಕೊಟ್ಟನು. ಇಸ್ರಾಯೇಲರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.


ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.


ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ, ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ, ಭಯಪಡಬೇಡಿರಿ, ನಿಮ್ಮ ಕೈಗಳು ಬಲವಾಗಿರಲಿ.


ಆದಕಾರಣ ಆಕಾಶದಿಂದ ಮಂಜನ್ನು ಸುರಿಯುವ, ಧಾನ್ಯ, ಹೊಸ ದ್ರಾಕ್ಷಾರಸ ಸಮೃದ್ಧಿಯಾಗಿರುವ ನಾಡಿನಲ್ಲಿ, ಯಾಕೋಬನ ವಂಶದವರು ಸುರಕ್ಷಿತರಾದರು. ಇಸ್ರಾಯೇಲರು ನಿರ್ಭಯವಾಗಿ ವಾಸಿಸುವವರಾದರು.


“ಆ ದಿವಸದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ, ಸಿವುಡುಗಳಲ್ಲಿರುವ ಬೆಂಕಿಯ ಪಂಜಿನ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ, ಎಡಗಡೆಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನೂ ನುಂಗಿಬಿಡುವರು. ಆದರೆ ಯೆರೂಸಲೇಮಿನವರು ತಿರುಗಿ ತನ್ನ ಸ್ಥಳದಲ್ಲಿ ಯೆರೂಸಲೇಮಿನಲ್ಲಿಯೇ ಸುರಕ್ಷಿತವಾಗಿ ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು