Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:16 - ಕನ್ನಡ ಸಮಕಾಲಿಕ ಅನುವಾದ

16 ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗಗಳಲ್ಲಿ ಉಳಿದವರೆಲ್ಲಾ ವರ್ಷ ವರ್ಷಕ್ಕೆ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೂ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅನಂತರ ಜೆರುಸಲೇಮಿಗೆ ಮುತ್ತಿಗೆ ಹಾಕಿದ ರಾಷ್ಟ್ರಗಳಲ್ಲಿ ಅಳಿದುಳಿದವರೆಲ್ಲರು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸುವುದಕ್ಕೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷ ಅಲ್ಲಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅನಂತರ ಯೆರೂಸಲೇವಿುನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವದಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೂ ಪ್ರತಿವರುಷವು ಹೊರಟುಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜೆರುಸಲೇಮಿನೊಂದಿಗೆ ಯುದ್ಧಮಾಡಲು ಬಂದವರಲ್ಲಿ ಕೆಲವರು ಸಾಯದೆ ಉಳಿಯುವರು. ಅವರೆಲ್ಲರು ಪ್ರತಿವರ್ಷ ಅರಸನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಜೆರುಸಲೇಮಿಗೆ ಬರುವರು. ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:16
42 ತಿಳಿವುಗಳ ಹೋಲಿಕೆ  

ಇದಾದ ಮೇಲೆ, “ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವುದಕ್ಕೆ ಬರುವರು” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು. ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಅನೇಕರಿಗೆ ಮುಕ್ತಿ ದೊರಕುವುದು. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


ಅದೇ ಗಳಿಗೆಯಲ್ಲಿ, ಮಹಾ ಭೂಕಂಪ ಉಂಟಾಗಿ ಆ ಪಟ್ಟಣದ ಹತ್ತರಲ್ಲೊಂದು ಭಾಗವು ಬಿದ್ದುಹೋಯಿತು. ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರಿಗೆ ಮಹಿಮೆಯನ್ನು ಸಲ್ಲಿಸಿದರು.


ಹೀಗೆ ಪವಿತ್ರ ವೇದದಲ್ಲಿ ಬರೆದಿರುವಂತೆ, ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು: “ವಿಮೋಚಿಸುವವರು ಒಬ್ಬರು ಚೀಯೋನಿನಿಂದ ಬರುತ್ತಾರೆ, ಅವರು ಯಾಕೋಬನ ಸಂತತಿಯಲ್ಲಿ ದೇವರನ್ನು ಅಲ್ಲಗಳೆಯುವ ಸ್ವಭಾವನ್ನು ತಾವೇ ತೆಗೆದುಹಾಕುವರು.


ಪ್ರಥಮಫಲವಾಗಿ ಹಿಟ್ಟಿನಲ್ಲಿ ದೇವರಿಗೆ ಭಾಗವನ್ನು ಸಮರ್ಪಿಸಿದ್ದು ಪವಿತ್ರವಾಗಿದ್ದರೆ, ಹಿಟ್ಟೆಲ್ಲಾ ಪವಿತ್ರವಾಗಿರುತ್ತದೆ. ಬೇರು ಪವಿತ್ರವಾಗಿದ್ದರೆ, ಕೊಂಬೆಗಳೂ ಪವಿತ್ರವಾಗಿರುತ್ತವೆ?


ಅದೇ ರೀತಿಯಲ್ಲಿ, ಈ ಕಾಲದಲ್ಲಿಯೂ ಕೃಪೆಯಿಂದ ಆಯ್ಕೆಯಾದ ಇಸ್ರಾಯೇಲರಲ್ಲಿ ಕೆಲವರು ಉಳಿದಿದ್ದಾರೆ.


ಆಗ ಉಳಿದಿರುವ ಜನರಲ್ಲಿ ಯೆಹೂದ್ಯರಲ್ಲದವರೂ ನನ್ನ ಹೆಸರೆತ್ತಿ ಕರೆಯುವವರೂ ಸಹ ಕರ್ತದೇವರನ್ನು ಹುಡುಕುವರು,’


ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.


ಅದಕ್ಕೆ ನತಾನಯೇಲನು, “ಗುರುವೇ, ನೀವು ದೇವಪುತ್ರ; ಇಸ್ರಾಯೇಲಿನ ಅರಸ ನೀವೇ,” ಎಂದನು.


“ಕರ್ತದೇವರ ಹೆಸರಿನಲ್ಲಿ ಬರುವ ಅರಸನು ಆಶೀರ್ವಾದ ಹೊಂದಲಿ!” “ಪರಲೋಕದಲ್ಲಿ ಸಮಾಧಾನ, ಅತ್ಯುನ್ನತದಲ್ಲಿ ಮಹಿಮೆ!”


“ಆದರೆ ತನ್ನ ಮಂದೆಯಲ್ಲಿ ದೋಷವಿಲ್ಲದ ಗಂಡು ಪಶು ಇರಲಾಗಿ ಅದನ್ನು ಅರ್ಪಿಸಲು ಪ್ರಮಾಣಮಾಡಿ, ಯೆಹೋವ ದೇವರಿಗೆ ದೋಷವುಳ್ಳದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ, ಏಕೆಂದರೆ ನಾನು ಮಹಾ ಅರಸನು, ನನ್ನ ಹೆಸರು ಇತರ ಜನಾಂಗಗಳಲ್ಲಿ ಭಯಭಕ್ತಿಯುಳ್ಳದ್ದಾಗಿರಬೇಕು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅವರ ರಕ್ತವನ್ನು ಅವರ ಬಾಯೊಳಗಿಂದಲೂ, ಅವರು ಕಚ್ಚುವ ಅಸಹ್ಯ ಪದಾರ್ಥಗಳನ್ನು ನಾನು ತೆಗೆದುಹಾಕಿಬಿಡುವೆನು. ಅವರು ಸಹ ನಮ್ಮ ದೇವರಿಗಾಗಿ ಉಳಿಯುವರು. ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವರು. ಎಕ್ರೋನು ಯೆಬೂಸಿಯನ ಹಾಗೆ ಇರುವರು.


ಆದರೆ ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದಲೂ, ನಿನ್ನ ದೇವರಾಗಿರುವ ಯೆಹೋವ ದೇವರಾದ ನಾನು, ಜಾತ್ರೆಯ ದಿನಗಳಲ್ಲಿ ನೀವು ವನವಾಸ ಮಾಡಿದಂತೆ, ನಿಮ್ಮನ್ನು ಪುನಃ ಗುಡಾರದ ವಾಸಕ್ಕೆ ಗುರಿಪಡಿಸುವೆನು.


ಇದಲ್ಲದೆ ನಾನು ಅವಳ ಪ್ರಧಾನರನ್ನೂ, ಅವಳ ಜ್ಞಾನಿಗಳನ್ನೂ, ಅವಳ ಅಧಿಪತಿಗಳನ್ನೂ, ಅವಳ ಅಧಿಕಾರಿಗಳನ್ನೂ, ಅವಳ ಪರಾಕ್ರಮಶಾಲಿಗಳನ್ನೂ ಮತ್ತರಾಗಿ ಮಾಡುತ್ತೇನೆ. ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಎಂಬ ಹೆಸರುಳ್ಳ ರಾಜಾಧಿರಾಜರು ಸಾರುತ್ತಾರೆ.


ಮೋವಾಬು ಸೂರೆಯಾಯಿತು. ಅದರ ಪಟ್ಟಣಗಳು ಏರಿ ಹೋದವು, ಅದರ ಶ್ರೇಷ್ಠ ಯೌವನಸ್ಥರು ಹತರಾಗುವುದಕ್ಕೆ ಹೋಗಿದ್ದಾರೆ,” ಎಂದು ಸರ್ವಶಕ್ತ ಯೆಹೋವ ಎಂಬ ಹೆಸರುಳ್ಳ ರಾಜಾಧಿರಾಜರ ನುಡಿ.


“ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು.


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ಇದಲ್ಲದೆ ದೇವರ ನಿಯಮದಲ್ಲಿ ಬರೆದಿರುವಂತೆ ಅವರು ಗುಡಾರಗಳ ಹಬ್ಬವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ಪ್ರತಿದಿನದ ದಹನಬಲಿಗಳನ್ನು ಅರ್ಪಿಸಿದರು.


ದಿನಂಪ್ರತಿ ಮೋಶೆಯ ಆಜ್ಞೆಯ ಪ್ರಕಾರ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಯೂ ವರುಷಕ್ಕೆ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಗುಡಾರಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.


ಭೂಮಿಯೆಲ್ಲಾ ನಿಮ್ಮನ್ನು ಆರಾಧಿಸುವುದು. ನಿಮ್ಮನ್ನು ಕೀರ್ತಿಸುತ್ತಾ ಲೋಕವು ನಿಮ್ಮ ನಾಮವನ್ನು ಕೀರ್ತಿಸುತ್ತಿರುವುದು,” ಎಂದು ಹೇಳಿರಿ.


ಆಗ ಎತ್ತರವಾದ ಹಾಗೂ ನುಣುಪು ಚರ್ಮವುಳ್ಳ ಜನರಿಂದಲೂ, ಸರ್ವರಿಗೂ ಭಯಪ್ರಧರಾದ ಜನರಿಂದಲೂ, ವಿಚಿತ್ರ ಭಾಷೆಯಿಂದ ಹಾಗೂ ನದಿಗಳಿಂದ ವಿಂಗಡವಾಗಿರುವ ಆಕ್ರಮಣಕಾರಿ ಜನರಿಂದಲೂ ಸರ್ವಶಕ್ತರಾದ ಯೆಹೋವ ದೇವರಿಗೆ ಕಾಣಿಕೆಗಳು ತರಲಾಗುವುದು. ಹೌದು, ಸೇನಾಧೀಶ್ವರ ಯೆಹೋವ ದೇವರ ಹೆಸರುಳ್ಳ ಚೀಯೋನ್ ಪರ್ವತಕ್ಕೆ ಕಾಣಿಕೆಗಳು ತರಲಾಗುವುದು.


ಯೆಹೋವ ದೇವರು ತಮ್ಮನ್ನು ಈಜಿಪ್ಟಿನವರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವ ದೇವರನ್ನು ತಿಳಿದುಕೊಳ್ಳುವರು ಮತ್ತು ಬಲಿಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಯೆಹೋವ ದೇವರಿಗೆ ಪ್ರಮಾಣ ಮಾಡಿಕೊಂಡು ನೆರವೇರಿಸುವರು.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


ಅನೇಕ ಜನಾಂಗಗಳು ಬಂದು ಹೀಗೆಂದು ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ಅವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು. ನಾವು ಅವರ ದಾರಿಗಳಲ್ಲಿ ನಡೆಯುವೆವು. ಚೀಯೋನಿನಿಂದ ದೇವರ ನಿಯಮವೂ ಯೆರೂಸಲೇಮಿನಿಂದ ದೇವರ ವಾಕ್ಯವೂ ಹೊರಡುವುವು.”


ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು