Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:17 - ಕನ್ನಡ ಸಮಕಾಲಿಕ ಅನುವಾದ

17 ಭೂಮಿಯ ಜನಾಂಗಗಳಲ್ಲಿ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಹೋಗದಿದ್ದರೆ, ಅವರ ಮೇಲೆ ಮಳೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರನಾದ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಬರುವುದಿಲ್ಲವೋ ಅವರಿಗೆ ಮಳೆಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜನಾಂಗಗಳಲ್ಲಿ ಯಾರಾದರೂ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸಲು ಬರದೆಹೋದರೆ, ಅವರಿಗೆ ಮಳೆಯೇ ಬರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವದಕ್ಕೆ ಬರುವದಿಲ್ಲವೋ ಅವರಿಗೆ ಮಳೆ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ರಾಜನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಭೂಲೋಕದ ಕುಟುಂಬಗಳ ಯಾವ ಜನರಾದರೂ ಜೆರುಸಲೇಮಿಗೆ ಹೋಗದಿದ್ದಲ್ಲಿ ಅವರ ರಾಜ್ಯಗಳಲ್ಲಿ ಮಳೆಗೆರೆಯುವದು ನಿಂತುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:17
27 ತಿಳಿವುಗಳ ಹೋಲಿಕೆ  

ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಿರಾಶರಾಗಿ ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.


ನಿನ್ನನ್ನು ಸೇವಿಸದ ಜನಾಂಗವೂ, ರಾಜ್ಯವೂ ನಾಶವಾಗುವುದು. ಆ ಜನಾಂಗಗಳು ಸಂಪೂರ್ಣವಾಗಿ ಹಾಳಾಗುವುವು.


ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ.


ಎಲೀಯನು ನಮ್ಮಂಥ ಮಾನವ ಸ್ವಭಾವವುಳ್ಳವನಾಗಿದ್ದನು. ಅವನು ಮಳೆ ಬರಬಾರದೆಂದು ಆಸಕ್ತಿಯಿಂದ ಪ್ರಾರ್ಥಿಸಲು, ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.


ಇಲ್ಲದಿದ್ದರೆ, ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯಲು ಅವರು ಮಳೆಯಾಗದಂತೆ ಮಾಡುವರು. ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡುವರು. ಯೆಹೋವ ದೇವರು ನಿಮಗೆ ಕೊಡುವ ಆ ಒಳ್ಳೆಯ ದೇಶದಲ್ಲಿ ನೀವು ಬೇಗ ನಾಶವಾಗಿಹೋಗುವಿರಿ, ಎಚ್ಚರಿಕೆ.


ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗಗಳಲ್ಲಿ ಉಳಿದವರೆಲ್ಲಾ ವರ್ಷ ವರ್ಷಕ್ಕೆ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೂ ಹೋಗುವರು.


“ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ಆರಿಸಿಕೊಂಡಿದ್ದೇನೆ. ಆದ್ದರಿಂದ ನಾನು ನಿಮ್ಮ ಎಲ್ಲಾ ಪಾಪಗಳಿಗಾಗಿ ಶಿಕ್ಷಿಸುತ್ತೇನೆ.”


ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.


“ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ,


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.


ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”


ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರವಾಗಿ ನೋಹನ ಪುತ್ರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ಹರಡಿಕೊಂಡವು.


ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.


ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ. ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ. ಅದು ಹಿಂದಿರುಗದು. ಪ್ರತಿಯೊಬ್ಬರು ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ಪ್ರತಿಜ್ಞೆ ಮಾಡುವುದು.


ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”


“ಮಳೆಯಿಲ್ಲದಂತೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದುಬಿಡಲು ಮಿಡತೆಗಳಿಗೆ ಆಜ್ಞಾಪಿಸಿದರೂ, ಇಲ್ಲವೆ ನನ್ನ ಜನರ ಮಧ್ಯದಲ್ಲಿ ಘೋರ ವ್ಯಾಧಿಯನ್ನು ಕಳುಹಿಸಿದರೂ,


“ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ,


ಆಗ ಎತ್ತರವಾದ ಹಾಗೂ ನುಣುಪು ಚರ್ಮವುಳ್ಳ ಜನರಿಂದಲೂ, ಸರ್ವರಿಗೂ ಭಯಪ್ರಧರಾದ ಜನರಿಂದಲೂ, ವಿಚಿತ್ರ ಭಾಷೆಯಿಂದ ಹಾಗೂ ನದಿಗಳಿಂದ ವಿಂಗಡವಾಗಿರುವ ಆಕ್ರಮಣಕಾರಿ ಜನರಿಂದಲೂ ಸರ್ವಶಕ್ತರಾದ ಯೆಹೋವ ದೇವರಿಗೆ ಕಾಣಿಕೆಗಳು ತರಲಾಗುವುದು. ಹೌದು, ಸೇನಾಧೀಶ್ವರ ಯೆಹೋವ ದೇವರ ಹೆಸರುಳ್ಳ ಚೀಯೋನ್ ಪರ್ವತಕ್ಕೆ ಕಾಣಿಕೆಗಳು ತರಲಾಗುವುದು.


ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.


ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು