Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:21 - ಕನ್ನಡ ಸಮಕಾಲಿಕ ಅನುವಾದ

21 ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಪ್ರತಿಯೊಂದು ಪಾತ್ರೆಯು ಸೇನಾಧೀಶ್ವರ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು. ಆ ದಿವಸದಲ್ಲಿ, ಕಾನಾನ್ಯನು ಸೇನಾಧೀಶ್ವರ ಯೆಹೋವ ದೇವರ ಆಲಯದಲ್ಲಿ ಇನ್ನು ಮೇಲೆ ಇರುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಲ್ಲದೆ ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಆ ಪಾತ್ರೆಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಜೆರುಸಲೇಮಿನಲ್ಲಿಯೂ ಜುದೇಯದಲ್ಲಿಯೂ ಇರುವ ಸಕಲ ಅಡಿಗೆಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಸಮರ್ಪಿತವಾಗಿರುವುವು. ಬಲಿಯನ್ನರ್ಪಿಸಲು ಬರುವವರೆಲ್ಲರೂ ಬಲಿಪಶುವಿನ ಮಾಂಸವನ್ನು ಬೇಯಿಸಲು ಈ ಪಾತ್ರೆಗಳನ್ನು ಬಳಸುವರು. ಆ ದಿನ ಬಂದಾಗ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಯಾವ ವರ್ತಕನೂ ಇರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಲ್ಲದೆ ಯೆರೂಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ವಾಸ್ತವವಾಗಿ ಜೆರುಸಲೇಮಿನ ಮತ್ತು ಯೆಹೊದದ ಪ್ರತಿಯೊಂದು ಪಾತ್ರೆಯ ಮೇಲೆ, “ಸರ್ವಶಕ್ತನಾದ ಯೆಹೋವನಿಗೆ ಮೀಸಲಾಗಿದೆ” ಎಂದು ಬರೆದಿರುತ್ತದೆ. ಯಜ್ಞಗಳನ್ನರ್ಪಿಸಲು ಬರುವ ಜನರೆಲ್ಲರೂ ಆ ಪಾತ್ರೆಗಳನ್ನು ತೆಗೆದುಕೊಂಡು ಅವುಗಳಲ್ಲಿ ವಿಶೇಷ ಅಡಿಗೆಯನ್ನು ಮಾಡುವರು. ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನ ಆಲಯದೊಳಗೆ ಯಾವ ವರ್ತಕನೂ ವ್ಯಾಪಾರ ನಡೆಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:21
27 ತಿಳಿವುಗಳ ಹೋಲಿಕೆ  

ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲರೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಬಾರದು.


ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.


ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.


ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?


ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.


ಆ ದಿವಸದಲ್ಲಿ, ಕುದುರೆಗಳ ಘಂಟೆಗಳ ಮೇಲೆ ಯೆಹೋವ ದೇವರಿಗೆ ಪರಿಶುದ್ಧವು ಎಂದಿರುವುದು. ಯೆಹೋವ ದೇವರ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವುವು.


ನೀವು ಉಂಡು ಕುಡಿಯುತ್ತಿದ್ದಾಗ, ನಿಮಗಾಗಿಯೇ ಉಂಡು ಕುಡಿದಿರಲ್ಲಾ?


ಅವನು ವ್ಯಾಪಾರಿಯಾಗಿದ್ದು, ಅವನ ಕೈಯಲ್ಲಿ ಮೋಸದ ತಕ್ಕಡಿ ಇದೆ. ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅವನ ದುರಾಶೆ.


ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.


ಹೀಗಿರುವಲ್ಲಿ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಹಾಗೂ ಯೆರೂಸಲೇಮಿನಲ್ಲಿ ವಾಸಿಸುವವರೆಂದೂ ದಾಖಲೆಗೊಂಡ ಪ್ರತಿಯೊಬ್ಬರೂ ಪವಿತ್ರರು ಎಂದು ಕರೆಯಲಾಗುವರು.


ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಅಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಉಂಡು, ನಿಮ್ಮ ಕುಟುಂಬಗಳ ಸಂಗಡ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ್ದರಿಂದ, ನೀವು ಸಾಧಿಸಿದ ಎಲ್ಲಾ ಕಾರ್ಯಗಳ ಬಗ್ಗೆ ಸಂತೋಷ ಪಡಬೇಕು.


ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ವೈಭವದ ಉಡುಪುಗಳನ್ನು ಹಾಕಿಕೋ ಏಕೆಂದರೆ ಇಂದಿನಿಂದ ಸುನ್ನತಿ ಇಲ್ಲದವರೂ, ಅಶುದ್ಧರೂ ನಿನ್ನೊಳಗೆ ಬರುವುದಿಲ್ಲ.


“ ‘ಇದಲ್ಲದೆ ನೀವು ದೇಶವನ್ನು ಚೀಟುಹಾಕಿ ಸೊತ್ತಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಯೆಹೋವ ದೇವರಿಗೆ ಕಾಣಿಕೆಯಾಗಿ ಕೊಡಬೇಕು. ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ. ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ.


ಮಾರುಕಟ್ಟೆಗಳ ಜಿಲ್ಲೆಯಲ್ಲಿ ವಾಸಿಸುವವರೇ, ಗೋಳಾಡಿರಿ. ಏಕೆಂದರೆ ವರ್ತಕರ ಜನರೆಲ್ಲಾ ಸಂಹಾರವಾದರು. ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು