Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:4 - ಕನ್ನಡ ಸಮಕಾಲಿಕ ಅನುವಾದ

4 ಆ ದಿವಸದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವದಿಕ್ಕಿನಲ್ಲಿರುವ ಓಲಿವ್ ಮರಗಳ ಗುಡ್ಡದ ಮೇಲೆ ನಿಲ್ಲುವುವು. ಆ ಗುಡ್ಡವು, ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವುದು. ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರ ಪಾದಗಳು ಜೆರುಸಲೇಮಿಗೆ ಪೂರ್ವಕ್ಕಿರುವ ಓಲಿವ್ ಗುಡ್ಡದ ಮೇಲೆ ನಿಲ್ಲುವುದು. ಆ ಗುಡ್ಡವು ಇಬ್ಭಾಗವಾಗಿ ಪೂರ್ವಪಶ್ಚಿಮದ ಉದ್ದಕ್ಕೂ ಇನ್ನರ್ಧ ಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆರೂಸಲೇವಿುಗೆ ಮೂಡಲಲ್ಲಿ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು ಆ ಗುಡ್ಡವು ಮೂಡಲಿಂದ ಪಡುವಲಿಗೆ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವದು; ಗುಡ್ಡದ ಅರ್ಧಭಾಗವು ಬಡಗಲಿಗೆ, ಅರ್ಧಭಾಗವು ತೆಂಕಲಿಗೆ ಸರಿದುಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದೇ ಸಮಯದಲ್ಲಿ ಜೆರುಸಲೇಮಿಗೆ ಪೂರ್ವದಲ್ಲಿರುವ ಆಲೀವ್ ಮರಗಳ ಬೆಟ್ಟದ ಮೇಲೆ ನಿಂತುಕೊಳ್ಳುವನು. ಆ ಬೆಟ್ಟವು ಇಬ್ಭಾಗವಾಗುವದು. ಅದರ ಒಂದು ಭಾಗವು ಉತ್ತರಕ್ಕೆ ಹೋಗುವದು, ಇನ್ನೊಂದು ಭಾಗವು ದಕ್ಷಿಣದ ಕಡೆಗೆ ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:4
16 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ, ಪಟ್ಟಣದ ಪೂರ್ವದಿಕ್ಕಿನಲ್ಲಿರುವ ಪರ್ವತದ ಮೇಲೆ ನಿಂತಿತು.


ಗೆಬ ಮೊದಲುಗೊಂಡು ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೂ ದೇಶವೆಲ್ಲಾ ಅರಾಬಾದ ಹಾಗೆ ಮಾರ್ಪಡುವುದು. ಯೆರೂಸಲೇಮ್ ತನ್ನ ಸ್ಥಳದಲ್ಲಿ ಬೆನ್ಯಾಮೀನನ ಬಾಗಿಲು ಮೊದಲುಗೊಂಡು, ಮೊದಲನೆಯ ಬಾಗಿಲಿನ ಸ್ಥಳದವರೆಗೂ, ಮೂಲೆ ಬಾಗಿಲಿನವರೆಗೂ, ಹನನೇಲನ ಗೋಪುರ ಮೊದಲುಗೊಂಡು ಅರಸನ ದ್ರಾಕ್ಷಿ ಆಲೆಗಳವರೆಗೂ ಎತ್ತರದಲ್ಲಿ ನಿವಾಸವಾಗುವುದು.


ಆದರೆ ಅದು ಒಂದು ವಿಶಿಷ್ಟ ದಿವಸವಾಗಿರುವುದು. ಯೆಹೋವ ದೇವರಿಗೆ ಮಾತ್ರ ತಿಳಿದಿರುವ ಒಂದು ದಿನ ಇರುವುದು. ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ. ಆದರೆ, ಸಾಯಂಕಾಲದ ಸಮಯದಲ್ಲಿ ಬೆಳಕು ಇರುವುದು.


“ಪರಾಕ್ರಮದ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬಯಲಾಗುವೆ. ಅವನು ಕಲಶದ ಕಲ್ಲನ್ನು ಸ್ಥಾಪಿಸಿ, ‘ದೇವರು ಇದನ್ನು ಆಶೀರ್ವದಿಸಲಿ! ದೇವರು ಇದನ್ನು ಆಶೀರ್ವದಿಸಲಿ!’ ಎಂದು ಘೋಷಿಸುವನು.”


ಅವರು ನಿಂತುಕೊಂಡು ಭೂಮಿಯನ್ನು ನಡುಗಿಸಿದರು. ಅವರು ನೋಡಿ ಜನಾಂಗಗಳನ್ನು ನಡುಗುವಂತೆ ಮಾಡಿದರು. ಪುರಾತನ ಪರ್ವತಗಳು ಸೀಳಿಹೋದವು. ಹಳೆಯ ಕಾಲದ ಗುಡ್ಡಗಳು ಬಿದ್ದು ಹೋದವು. ಅವರ ಮಾರ್ಗಗಳು ನಿತ್ಯವಾದವುಗಳೇ.


ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವಮಾರ್ಗವಾಗಿ ಬಂದಿತು ಮತ್ತು ಅವರ ಧ್ವನಿಯು ಹರಿಯುವ ನೀರಿನ ಘರ್ಜನೆಯಂತಿತ್ತು; ಭೂಮಿಯು ಅವರ ಮಹಿಮೆಯಿಂದ ಪ್ರಕಾಶಿಸುತ್ತಿತ್ತು.


ಏಕೆಂದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ಹೇಳಿ ತಮ್ಮ ಹೃದಯದಲ್ಲಿ ಸಂಶಯಪಡದೆ ತಾವು ಹೇಳಿದಂತೆಯೇ ಆಗುವುದೆಂದು ನಂಬಿದರೆ ಅವರು ಹೇಳಿದಂತೆಯೇ ಅವರಿಗೆ ಆಗುವುದು.


ಆಗ ಸಮುದ್ರದ ಮೀನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವುವು; ಪರ್ವತಗಳು ಉರುಳಿಹೋಗುವುವು. ಝರಿಗಳು ಕವಚಿಕೊಳ್ಳುತ್ತಾ, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವುದು.


ಆ ದಿವಸದಲ್ಲಿ ಆಗುವುದೇನೆಂದರೆ: ಯೆರೂಸಲೇಮಿನೊಳಗಿಂದ ಜೀವವುಳ್ಳ ಪ್ರವಾಹವು ಹೊರಡುವುದು. ಅದರಲ್ಲಿ ಅರ್ಧಭಾಗವು ಪೂರ್ವದ ಉಪ್ಪು ಸಮುದ್ರಕ್ಕೆ ಮತ್ತು ಅರ್ಧಭಾಗವು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೆ ಹರಿಯುತ್ತದೆ. ಅದು ಬೇಸಿಗೆ ಕಾಲದಲ್ಲಿಯೂ, ಚಳಿಗಾಲದಲ್ಲಿಯೂ ಇರುವುದು.


ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು