Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:8 - ಕನ್ನಡ ಸಮಕಾಲಿಕ ಅನುವಾದ

8 ಆ ದಿವಸದಲ್ಲಿ ಆಗುವುದೇನೆಂದರೆ: ಯೆರೂಸಲೇಮಿನೊಳಗಿಂದ ಜೀವವುಳ್ಳ ಪ್ರವಾಹವು ಹೊರಡುವುದು. ಅದರಲ್ಲಿ ಅರ್ಧಭಾಗವು ಪೂರ್ವದ ಉಪ್ಪು ಸಮುದ್ರಕ್ಕೆ ಮತ್ತು ಅರ್ಧಭಾಗವು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೆ ಹರಿಯುತ್ತದೆ. ಅದು ಬೇಸಿಗೆ ಕಾಲದಲ್ಲಿಯೂ, ಚಳಿಗಾಲದಲ್ಲಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ದಿನ ಬಂದಾಗ ಜೀವಜಲವು ಜೆರುಸಲೇಮಿನಿಂದ ಹರಿಯುವುದು. ಅದರ ಅರ್ಧಭಾಗ ಪೂರ್ವದ ಸಮುದ್ರಕ್ಕೂ ಇನ್ನರ್ಧಭಾಗ ಪಶ್ಚಿಮದ ಸಮುದ್ರಕ್ಕೂ ಹರಿಯುವುದು. ಮಳೆ, ಬೇಸಿಗೆ ಎನ್ನದೆ ಪ್ರವಾಹ ಹರಿಯುತ್ತಲೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇವಿುನೊಳಗಿಂದ ಹೊರಡುವದು; ಅರ್ಧಭಾಗವು ಪೂರ್ವಸಮುದ್ರಕ್ಕೂ ಅರ್ಧಭಾಗವು ಪಶ್ಚಿಮಸಮುದ್ರಕ್ಕೂ ಹರಿಯುವದು; ಬೇಸಿಗೆಕಾಲದಲ್ಲಿಯೂ ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಸಮಯದಲ್ಲಿ ಜೆರುಸಲೇಮಿನಿಂದ ನೀರು ಹರಿಯುತ್ತಲೇ ಇರುವದು. ಆ ನದಿಯು ಇಬ್ಭಾಗವಾಗಿ ಒಂದು ಭಾಗ ಪೂರ್ವಕ್ಕೆ ಹರಿಯುವದು. ಇನ್ನೊಂದು ಭಾಗ ಪಶ್ಚಿಮಕ್ಕೆ ಹರಿದು ಮೆಡಿಟರೇನಿಯನ್ ಸಮುದ್ರವನ್ನು ಸೇರುವದು. ಈ ನದಿಯು ಎಲ್ಲಾ ಕಾಲದಲ್ಲಿಯೂ ಬೇಸಿಗೆ, ಹಿಮಕಾಲವೆನ್ನದೆ ಹರಿಯುತ್ತಲೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:8
18 ತಿಳಿವುಗಳ ಹೋಲಿಕೆ  

ಪವಿತ್ರ ವೇದವು ಹೇಳಿದ ಪ್ರಕಾರ ನನ್ನಲ್ಲಿ ನಂಬಿಕೆಯಿಡುವವರ ಅಂತರಂಗದಿಂದ ಜೀವಜಲದ ಹೊಳೆಗಳು ಹರಿಯುವವು,” ಎಂದು ಕೂಗಿ ಹೇಳಿದರು.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು.


ಆ ದಿವಸದಲ್ಲಿ ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವುವು. ಗುಡ್ಡಗಳು ಹಾಲಿನಿಂದ ಹರಿಯುವುವು. ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವುವು. ಯೆಹೋವ ದೇವರ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ಕಣಿವೆಗೆ ಜಲ ಕೊಡುವುದು.


“ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮಿಂದ ದೂರಮಾಡಿ, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ, ಅದರ ಮುಂಭಾಗವನ್ನು ಪೂರ್ವದ ಉಪ್ಪು ಸಮುದ್ರಕ್ಕೂ ಅದರ ಹಿಂಭಾಗವನ್ನು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೂ ಓಡಿಸಿಬಿಡುವೆನು. ಅದರ ದುರ್ವಾಸನೆಯು ಏರುವುದು. ಅದು ಗಬ್ಬು ನಾರುವುದು.” ಏಕೆಂದರೆ, ಆತನು ಮಹಾಕಾರ್ಯಗಳನ್ನು ಮಾಡಿದ್ದಾರೆ.


ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಇರದು. ಝಳವೂ, ಬಿಸಿಲೂ ಬಡಿಯದು. ಏಕೆಂದರೆ ಅವರನ್ನು ಕರುಣಿಸುವ ದೇವರು ಅವರನ್ನು ನಡೆಸುತ್ತಾ, ನೀರುಕ್ಕುವ ಒರತೆಗಳ ಬಳಿಗೆ ತರುವರು.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ಒಣ ನೆಲವು ಸರೋವರವಾಗುವುದು, ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗುವುದು. ನರಿಗಳು ವಾಸಿಸುವ ಪ್ರತಿಯೊಂದು ಮಲಗುವ ಸ್ಥಳದಲ್ಲಿ ಹುಲ್ಲು, ಜೊಂಡು, ಆಪು ಹುಲ್ಲುಗಳಿಂದ ತುಂಬಿರುವುದು.


ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


ಯೆಹೋವ ದೇವರು ನಿನ್ನನ್ನು ನಿತ್ಯವೂ ನಡೆಸುತ್ತಾ, ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ, ನಿನ್ನ ಎಲುಬುಗಳನ್ನು ಬಲಪಡಿಸುವರು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಇರುವೆ. ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ


ನೀನು ತೋಟದ ಬುಗ್ಗೆಯೂ ಉಕ್ಕಿಬರುವ ಒರತೆಯೂ ಲೆಬನೋನಿನಿಂದ ಹರಿಯುವ ಹೊಳೆಯೂ ಆಗಿರುವೆ.


ಅನೇಕ ಜನಾಂಗಗಳು ಬಂದು ಹೀಗೆಂದು ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ಅವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು. ನಾವು ಅವರ ದಾರಿಗಳಲ್ಲಿ ನಡೆಯುವೆವು. ಚೀಯೋನಿನಿಂದ ದೇವರ ನಿಯಮವೂ ಯೆರೂಸಲೇಮಿನಿಂದ ದೇವರ ವಾಕ್ಯವೂ ಹೊರಡುವುವು.”


ಆ ದಿವಸದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವದಿಕ್ಕಿನಲ್ಲಿರುವ ಓಲಿವ್ ಮರಗಳ ಗುಡ್ಡದ ಮೇಲೆ ನಿಲ್ಲುವುವು. ಆ ಗುಡ್ಡವು, ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವುದು. ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದುಕೊಳ್ಳುವುದು.


ಏಕೆಂದರೆ ಕೆಲವೊಮ್ಮೆ ದೇವದೂತನು ಇಳಿದುಬಂದು ನೀರನ್ನು ಕಲಕುತ್ತಿದ್ದನು. ನೀರು ಕಲಕಿದೊಡನೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಅದು ಗುಣವಾಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು