ಜೆಕರ್ಯ 14:9 - ಕನ್ನಡ ಸಮಕಾಲಿಕ ಅನುವಾದ9 ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಸಮಯದಲ್ಲಿ ಯೆಹೋವನು ಇಡೀ ಭೂಲೋಕದ ಅರಸನಾಗುವನು. ಆತನು ಒಬ್ಬನೇ. ಆತನ ಹೆಸರು ಒಂದೇ. ಅಧ್ಯಾಯವನ್ನು ನೋಡಿ |