ಜೆಕರ್ಯ 2:11 - ಕನ್ನಡ ಸಮಕಾಲಿಕ ಅನುವಾದ11 “ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು ನನ್ನನ್ನು ನೋಡಲು ಬರುವರು. ಅವರು ನನ್ನ ಜನರಾಗುವರು. ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.” ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿ |