ಜೆಕರ್ಯ 2:13 - ಕನ್ನಡ ಸಮಕಾಲಿಕ ಅನುವಾದ13 ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಪ್ರಾಣಿಗಳೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಎಲ್ಲರೂ ಮೌನವಾಗಿರಿ. ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಹೊರಬರುತ್ತಿದ್ದಾನೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.
ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”