Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:1 - ಕನ್ನಡ ಸಮಕಾಲಿಕ ಅನುವಾದ

1 ಆತನು ನನಗೆ, ಯೆಹೋವ ದೇವರ ದೂತನ ಮುಂದೆ ನಿಂತಿರುವ ಮಹಾಯಾಜಕನಾದ ಯೆಹೋಶುವನನ್ನೂ, ಅವನ ಮೇಲೆ ದೂರು ಹೇಳುವುದಕ್ಕೆ ಅವನ ಬಲಗಡೆಯಲ್ಲಿ ನಿಂತ ಸೈತಾನನನ್ನೂ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮತ್ತೊಂದು ದರ್ಶನದಲ್ಲಿ ಪ್ರಧಾನ ಯಾಜಕನಾದ ಯೆಹೋಶುವನು ದೂತನ ಮುಂದೆ ನಿಂತಿರುವುದನ್ನು ಸರ್ವೇಶ್ವರ ನನಗೆ ತೋರಿಸಿದರು. ಯೆಹೋಶುವನಿಗೆ ಪ್ರತಿವಾದಿಯಾಗಿ ಸೈತಾನನು ಅವನ ಪಕ್ಕದಲ್ಲಿ ನಿಂತಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವದನ್ನು ಯೆಹೋವನು ನನಗೆ ತೋರಿಸಿದನು; ಸೈತಾನನು ಯೆಹೋಶುವನಿಗೆ ಪ್ರತಿಕಕ್ಷಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವದೂತನು ನನಗೆ ಪ್ರಧಾನ ಯಾಜಕನಾದ ಯೆಹೋಶುವನನ್ನು ತೋರಿಸಿದನು. ಅವನು ಯೆಹೋವನ ದೂತನ ಮುಂದೆ ನಿಂತಿದ್ದನು. ಸೈತಾನನು ಯೆಹೋಶುವನ ಬಲಗಡೆಯಲ್ಲಿ ನಿಂತಿದ್ದನು. ಯೆಹೋಶುವನು ಕೆಟ್ಟಕೃತ್ಯಗಳನ್ನು ಮಾಡಿದ್ದಾನೆಂದು ದೂರು ಹೇಳುವದಕ್ಕಾಗಿ ಸೈತಾನನು ಅಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:1
36 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


“ಸೀಮೋನನೇ, ಸೀಮೋನನೇ, ಇಗೋ, ಸೈತಾನನು ನಿಮ್ಮೆಲ್ಲರನ್ನೂ ಗೋಧಿಯಂತೆ ತೂರಬೇಕೆಂದು ಅಪ್ಪಣೆ ಕೇಳಿದ್ದಾನೆ.


ದುಷ್ಟನು ನನ್ನ ವೈರಿಯ ಮೇಲೆ ನೇಮಕವಾಗಲಿ; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.


ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ,” ಎಂದರು.


“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:


ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.


ಅಲ್ಲಿ ಬೆಳ್ಳಿ, ಬಂಗಾರವನ್ನು ತೆಗೆದುಕೊಂಡು, ಕಿರೀಟಗಳನ್ನು ಮಾಡಿ, ಅವುಗಳನ್ನು ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನ ತಲೆಯ ಮೇಲೆ ಇಟ್ಟು,


“ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ. ಅವರು ಆಶ್ಚರ್ಯವನ್ನುಂಟುಮಾಡುವ ಮನುಷ್ಯರಾಗಿದ್ದಾರೆ. ನಾನು ‘ರೆಂಬೆ’ ಎಂಬ ನನ್ನ ಸೇವಕನನ್ನು ಬರಮಾಡುವೆನು ಎಂಬುದಕ್ಕೆ ಇವರೇ ಮುಂಗುರುತು.


ಆದರೂ ಈಗ ಯೆಹೋವ ದೇವರು ಹೀಗೆ ಹೇಳಿದರು: ‘ಜೆರುಬ್ಬಾಬೆಲನೇ, ಬಲವಾಗಿರು. ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನೇ, ಬಲವಾಗಿರು. ದೇಶದ ಜನರೆಲ್ಲರೇ, ಬಲವಾಗಿರಿ,’ ಕೆಲಸಮಾಡಿರಿ. ‘ನಾನು ನಿಮ್ಮ ಸಂಗಡ ಇದ್ದೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನೂ ಜನರಲ್ಲಿ ಉಳಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರ ಮಾತನ್ನೂ ತಮ್ಮ ದೇವರಾದ ಯೆಹೋವ ದೇವರು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು. ಜನರು ಯೆಹೋವ ದೇವರಿಗೆ ಭಯಪಟ್ಟರು.


ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ. ಏಕೆಂದರೆ ತಮ್ಮ ಸಮ್ಮುಖದಲ್ಲಿ ನಿಲ್ಲುವುದಕ್ಕೂ, ತಮ್ಮನ್ನು ಸೇವಿಸುವುದಕ್ಕೂ, ತಮಗೆ ಸೇವಕರಾಗಿರುವುದಕ್ಕೂ, ತಮಗೆ ಧೂಪವನ್ನು ಸುಡುವುದಕ್ಕೂ ಯೆಹೋವ ದೇವರು ನಿಮ್ಮನ್ನು ಆಯ್ದುಕೊಂಡಿದ್ದಾರೆ,” ಎಂದನು.


ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”


ನನ್ನ ಸಂಗಡ ಮಾತನಾಡಿದ ದೂತನು ಬರುತ್ತಿರಲು, ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು,


ಆಗ ನನ್ನ ಸಂಗಡ ಮಾತನಾಡಿದ ದೂತನಿಗೆ ನಾನು, “ಇದೇನು?” ಎಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನೂ ಚದರಿಸಿದ ಕೊಂಬುಗಳು,” ಎಂದನು.


ಆಗ ಯೆಹೋವ ದೇವರು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೆಯ ಮಾತುಗಳಿಂದಲೂ, ಆದರಣೆಯ ಮಾತುಗಳಿಂದಲೂ ಉತ್ತರಕೊಟ್ಟರು.


ಆಗ ನಾನು, “ನನ್ನ ಒಡೆಯನೇ, ಇವೇನು?” ಎಂದೆನು. ಆಗ ನನ್ನ ಸಂಗಡ ಮಾತನಾಡಿದ ದೇವದೂತನು, “ಇವೇನೆಂದು ನಿನಗೆ ತೋರಿಸುತ್ತೇನೆ,” ಎಂದನು.


“ ‘ಆದರೆ ಇಸ್ರಾಯೇಲರು ನನ್ನನ್ನು ಬಿಟ್ಟುಹೋದಾಗ ನನ್ನ ಪರಿಶುದ್ಧಸ್ಥಳದ ಕಾಯಿದೆಯನ್ನು ಪಾಲಿಸಿದ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವಂತೆ ನನ್ನ ಸಮೀಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿಸುವವರಾಗಿರುವರು. ಆಲಯದ ಬಾಗಿಲುಗಳ ಮೇಲ್ವಿಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು. ಅವರು ಜನರಿಗೋಸ್ಕರ ದಹನಬಲಿಯನ್ನೂ ಸಮಾಧಾನ ಬಲಿಯನ್ನೂ ಮಾಡಿ ಅವರಿಗೆ ಸೇವೆ ಮಾಡುವ ಹಾಗೆ ಅವರ ಮುಂದೆ ನಿಲ್ಲುವರು.


ಆದಕಾರಣ ಯೆಹೋವ ದೇವರು ಹೀಗೆನ್ನುತ್ತಾರೆ: ನೀನು ಮಾನಸಾಂತರಪಟ್ಟರೆ, ನೀನು ನನಗೆ ಸೇವೆಮಾಡುವಂತೆ ನಾನು ನಿನ್ನನ್ನು ಪುನಃಸ್ಥಾಪಿಸುವೆನು. ನೀನು ತುಚ್ಛವಾದವುಗಳಿಗೆ ಬದಲಾಗಿ ಅಮೂಲ್ಯವಾದವುಗಳನ್ನೇ ಮಾತನಾಡುತ್ತಿದ್ದರೆ, ನೀನು ನನ್ನ ಬಾಯಿಯ ಹಾಗಿರುವೆ. ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂದಿರುಗಬೇಡ.


ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. ಆದರೆ ಅವರು ಆಯ್ದುಕೊಂಡ ಮೋಶೆಯು, ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು.


ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಿಸಲು ಪ್ರಾರಂಭಿಸಿದರು. ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.


ಯೆಹೋವ ದೇವರು ತಮ್ಮಲ್ಲಿ ದೊಡ್ಡ ನಾಶನಮಾಡಿದ್ದರಿಂದ, ಬೇತ್ ಷೆಮೆಷ್ ಊರಿನವರು ದುಃಖಪಟ್ಟು, “ಈ ಪರಿಶುದ್ಧ ದೇವರಾದ ಯೆಹೋವ ದೇವರ ಮುಂದೆ ನಿಲ್ಲತಕ್ಕವನ್ಯಾರು? ಇಲ್ಲಿಂದ ಮಂಜೂಷವು ಎಲ್ಲಿಗೆ ಹೋಗುವುದು?” ಎಂದು ಹೇಳಿದರು.


ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಿಮ್ಮ ಸಹೋದರರ ನಡುವೆಯಿಂದ ಎಬ್ಬಿಸುವರು. ಆ ಪ್ರವಾದಿಯ ಮಾತನ್ನು ನೀವು ಕೇಳಬೇಕು.


ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಯಾಜಕರ ವಂಶಜರಲ್ಲಿ ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು ಯಾರೆಂದರೆ: ಯೋಚಾದಾಕನ ಮಗ ಯೇಷೂವನು ಮತ್ತು ಅವನ ಸಹೋದರರಲ್ಲಿ: ಮಾಸೇಯನು, ಎಲೀಯೆಜೆರನು, ಯಾರೀಬನು, ಗೆದಲ್ಯನು.


ಆಗ ಅವನು, “ಇವು ಸಮಸ್ತ ಭೂಮಿಯ ಕರ್ತ ಆಗಿರುವವರ ಸನ್ನಿಧಿಸೇವೆ ಮಾಡಲು ಅಭಿಷೇಕ ಹೊಂದಿರುವ ಇಬ್ಬರು ಸೇವಕರನ್ನು ಸೂಚಿಸುತ್ತದೆ,” ಎಂದನು.


ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಹಾಗೂ ಬಾಣ. ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು