Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:4 - ಕನ್ನಡ ಸಮಕಾಲಿಕ ಅನುವಾದ

4 ಆಗ ದೇವದೂತನು ತನ್ನ ಮುಂದೆ ನಿಂತವರಿಗೆ, “ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದುಹಾಕಿರಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ಪಾಪವನ್ನು ತೆಗೆದುಹಾಕಿದ್ದೇನೆ. ಬದಲಾಗಿ ಶ್ರೇಷ್ಠ ವಸ್ತ್ರಗಳನ್ನು ನಿನಗೆ ತೊಡಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತನ್ನ ಮುಂದೆ ನಿಂತಿದ್ದ ಸೇವಕರಿಗೆ ಆ ದೂತನು, “ಈತನ ಮಲಿನವಾದ ಬಟ್ಟೆಗಳನ್ನು ತೆಗೆದುಬಿಡಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ದೋಷವನ್ನು ತೊಲಗಿಸಿದ್ದೇನೆ. ಶ್ರೇಷ್ಠವಾದ ಬಟ್ಟೆಗಳನ್ನು ನಿನಗೆ ತೊಡಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವದೂತನು ತನ್ನ ಸೇವಕರಿಗೆ - ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ ಎಂದು ಅಪ್ಪಣೆಕೊಟ್ಟು ಅವನಿಗೆ - ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರಗಳನ್ನು ತೊಡಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಆ ದೂತನು ಪಕ್ಕದಲ್ಲಿ ನಿಂತಿದ್ದ ಬೇರೆ ದೂತರನ್ನುದ್ದೇಶಿಸಿ, “ಯೆಹೋಶುವನ ಮೇಲಿರುವ ಮೈಲಿಗೆ ವಸ್ತ್ರವನ್ನು ತೆಗೆಯಿರಿ” ಎಂದು ಹೇಳಿದನು. ಆಗ ದೂತನು ಯೆಹೋಶುವನಿಗೆ, “ನಾನು ನಿನ್ನ ದೋಷಗಳನ್ನು ತೊಳೆದುಬಿಟ್ಟಿರುವೆ. ಈಗ ನಾನು ನಿನಗೆ ಹೊಸ ಬಟ್ಟೆಗಳನ್ನು ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:4
34 ತಿಳಿವುಗಳ ಹೋಲಿಕೆ  

“ಆದರೆ ತಂದೆಯು ತನ್ನ ಸೇವಕರಿಗೆ, ‘ಶ್ರೇಷ್ಠವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಇವನ ಬೆರಳಿಗೆ ಉಂಗುರವನ್ನು ತೊಡಿಸಿರಿ, ಪಾದಗಳಿಗೆ ಪಾದರಕ್ಷೆಗಳನ್ನೂ ಮೆಟ್ಟಿಸಿರಿ.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


“ನಾನಾಗಿ ನಾನೇ, ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಗಳನ್ನು ಕೈಗೊಂಡರೆ, ಆಗ ನೀನು ನನ್ನ ಆಲಯಕ್ಕೂ ನ್ಯಾಯತೀರಿಸಿ, ನನ್ನ ಅಂಗಳಗಳನ್ನೂ ಕಾಯುವೆ. ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ಹಕ್ಕನ್ನು ನಿನಗೆ ಕೊಡುವೆನು.’


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ, ಎಂದು ಕರ್ತದೇವರು ನುಡಿಯುತ್ತಾರೆ.”


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಆ ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವಂತೆ ನಾನು ಅದರ ಮೇಲೆ ಒಂದು ಶಾಸನವನ್ನು ಕೆತ್ತಿಸುವೆನು. ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆ ದೇಶದ ಅಪರಾಧವನ್ನು ಒಂದೇ ದಿವಸದಲ್ಲಿ ತೊಲಗಿಸುವೆನು.


ನನ್ನ ಪಾಪಗಳಿಗೆ ನಿಮ್ಮ ಮುಖವನ್ನು ಮರೆಮಾಡಿಕೊಳ್ಳಿರಿ; ನನ್ನ ಅಧರ್ಮಗಳನ್ನೆಲ್ಲಾ ಅಳಿಸಿಬಿಡಿರಿ.


ಸೃಷ್ಟಿಕರ್ತನ ಸ್ವರೂಪವನ್ನು, ತಿಳುವಳಿಕೆಯಲ್ಲಿ ನವೀಕರಣ ಹೊಂದುತ್ತಿರುವ ಆ ನೂತನ ಸ್ವಭಾವವನ್ನೇ ಧರಿಸಿಕೊಂಡವರಾಗಿದ್ದೀರಲ್ಲಾ.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ಅದಕ್ಕೆ ಆ ದೂತನು ಉತ್ತರವಾಗಿ, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು. ನಿನ್ನ ಸಂಗಡ ಮಾತನಾಡುವುದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾರೆ.


ಆತನು ನನಗೆ, ಯೆಹೋವ ದೇವರ ದೂತನ ಮುಂದೆ ನಿಂತಿರುವ ಮಹಾಯಾಜಕನಾದ ಯೆಹೋಶುವನನ್ನೂ, ಅವನ ಮೇಲೆ ದೂರು ಹೇಳುವುದಕ್ಕೆ ಅವನ ಬಲಗಡೆಯಲ್ಲಿ ನಿಂತ ಸೈತಾನನನ್ನೂ ತೋರಿಸಿದನು.


ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ವೈಭವದ ಉಡುಪುಗಳನ್ನು ಹಾಕಿಕೋ ಏಕೆಂದರೆ ಇಂದಿನಿಂದ ಸುನ್ನತಿ ಇಲ್ಲದವರೂ, ಅಶುದ್ಧರೂ ನಿನ್ನೊಳಗೆ ಬರುವುದಿಲ್ಲ.


ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು: ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ, ಎಡಗಡೆ ಮತ್ತು ಸುತ್ತಲೂ ನಿಂತಿರುವುದನ್ನೂ ನಾನು ಕಂಡೆನು.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.


ಇದಲ್ಲದೆ ನಾನು ನೋಡಲಾಗಿ, ಸಿಂಹಾಸನದ ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


“ಅನಂತರ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದಾಗ, ಅಲ್ಲಿ ಮದುವೆಯ ವಸ್ತ್ರವಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಕಂಡನು.


ಯಾಜಕರು ಅವುಗಳಲ್ಲಿ ಪ್ರವೇಶಿಸುವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು. ಏಕೆಂದರೆ ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸಮೀಪಿಸಬೇಕು,” ಎಂದನು.


ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ನಮ್ಮ ಪಾಪಗಳನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವನು.


ನಾನು ನಿನ್ನ ದ್ರೋಹಗಳನ್ನು ಮೋಡದಂತೆ ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಮುಂಜಾನೆಯ ಮಂಜಿನಂತೆ ಹಾರಿಸಿದ್ದೇನೆ. ನನ್ನ ಕಡೆಗೆ ತಿರುಗಿಕೋ. ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದ್ದೇನೆ.”


ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು