ಜೆಕರ್ಯ 3:5 - ಕನ್ನಡ ಸಮಕಾಲಿಕ ಅನುವಾದ5 ಆಗ ನಾನು, “ಅವನ ತಲೆಯ ಮೇಲೆ ಶುದ್ಧ ಮುಂಡಾಸನ್ನು ಇಡಿರಿ,” ಎಂದೆನು. ಆಗ ಸೇವಕರು ಯೆಹೋಶುವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು, ಅವನಿಗೆ ವಸ್ತ್ರಗಳನ್ನು ಧರಿಸಿದರು. ಯೆಹೋವ ದೇವರ ದೂತನು ಪಕ್ಕದಲ್ಲಿ ನಿಂತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ಇವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿರಿ” ಎಂದು ನಾನು ಅಪ್ಪಣೆಕೊಡಲು ಅವರು ಅವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿ ಅವನಿಗೆ ವಸ್ತ್ರಗಳನ್ನು ತೊಡಿಸಿದರು, ಆಗ ಯೆಹೋವನ ದೂತನು ಎದ್ದು ನಿಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಇವನ ತಲೆಗೆ ಶುಭ್ರವಾದ ಪೇಟವನ್ನು ಸುತ್ತಿರಿ,” ಎಂದು ಆ ದೂತನು ಅಪ್ಪಣೆಮಾಡಲು, ಸೇವಕರು ಯೆಹೋಶುವನ ತಲೆಗೆ ಪೇಟವನ್ನು ಸುತ್ತಿ ಶುಭ್ರ ವಸ್ತ್ರಗಳನ್ನು ತೊಡಿಸಿದರು. ದೇವದೂತನು ಅಲ್ಲಿಯೇ ನಿಂತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿರಿ ಎಂದು ಅವನು ಅಪ್ಪಣೆಕೊಡಲು ಅವರು ಅವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿ ಅವನಿಗೆ ವಸ್ತ್ರಗಳನ್ನು ಹಾಕಿದರು; ಆಗ ಯೆಹೋವನ ದೂತನು ಎದ್ದು ನಿಂತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ನಾನು, “ಅವನ ತಲೆಯ ಮೇಲೆ ಶುಚಿಯಾದ ಪೇಟವನ್ನಿಡಿರಿ” ಎಂದು ಹೇಳಿದಾಗ ಅವರು ಅವನಿಗೆ ಶುಭ್ರವಾದ ಪೇಟವನ್ನು ಇಟ್ಟರು. ಯೆಹೋವನ ದೂತನು ಅಲ್ಲಿ ನಿಂತಿದ್ದಾಗಲೇ ಅವನಿಗೆ ನಿರ್ಮಲವಾದ ಬಟ್ಟೆಗಳನ್ನು ಧರಿಸಲು ಕೊಟ್ಟರು. ಅಧ್ಯಾಯವನ್ನು ನೋಡಿ |