Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:8 - ಕನ್ನಡ ಸಮಕಾಲಿಕ ಅನುವಾದ

8 “ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ. ಅವರು ಆಶ್ಚರ್ಯವನ್ನುಂಟುಮಾಡುವ ಮನುಷ್ಯರಾಗಿದ್ದಾರೆ. ನಾನು ‘ರೆಂಬೆ’ ಎಂಬ ನನ್ನ ಸೇವಕನನ್ನು ಬರಮಾಡುವೆನು ಎಂಬುದಕ್ಕೆ ಇವರೇ ಮುಂಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಧಾನ ಯಾಜಕನಾದ ಯೆಹೋಶುವನೇ, ನೀನೂ ಮತ್ತು ನಿನ್ನ ಜೊತೆಯಲ್ಲಿ ಉಪಸ್ಥಿತರಾದ ಸಹಯಾಜಕರೂ, ಕೇಳಲಿ: ನೀವು ಶುಭದಿನಗಳ ಮುಂಗುರುತು. ‘ಮೊಳಕೆ’ ಎಂಬಸೇವಕನೊಬ್ಬನು ಕಾಣಿಸಿಕೊಳ್ಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮಹಾಯಾಜಕನಾದ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಹಕಾರಿಗಳೂ ಕೇಳಿರಿ; ಇಗೋ, ಮೊಳಿಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೇನೆಂಬದಕ್ಕೆ ಇವರೇ ಮುಂಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರಧಾನ ಯಾಜಕನಾದ ಯೆಹೋಶುವನೇ, ಅವನೊಂದಿಗೆ ಸೇವೆಮಾಡುವ ಇತರ ಯಾಜಕರೇ, ನನ್ನ ಮಾತಿಗೆ ಕಿವಿಗೊಡಿರಿ. ಈ ಗಂಡಸರು ಮುಂದೆ ಏನಾಗಬಹುದೆಂಬುದಕ್ಕೆ ನಿದರ್ಶನವಾಗಿದ್ದಾರೆ. ಆಗ ನಾನು ನನ್ನ ವಿಶೇಷ ಸೇವಕನನ್ನು ಕರೆತರುವೆನು. ಆತನ ಹೆಸರು ಕೊಂಬೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:8
24 ತಿಳಿವುಗಳ ಹೋಲಿಕೆ  

“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಕೊಂಬೆಯು ಫಲಕೊಡುವುದು.


ಅವನಿಗೆ ಹೇಳತಕ್ಕದ್ದೇನೆಂದರೆ: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ರೆಂಬೆ,’ ಎಂದು ಹೆಸರುಳ್ಳ ಮನುಷ್ಯನು, ತನ್ನ ಸ್ಥಳದೊಳಗಿಂದ ರೆಂಬೆಯನ್ನು ತೆಗೆದುಹಾಕಿ, ಯೆಹೋವ ದೇವರ ಆಲಯವನ್ನು ಕಟ್ಟುವನು.


“ ‘ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು. ಆತನು ದೇಶದಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ಅವನು ಚಿಗುರಿನಂತೆಯೂ, ಒಣ ನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಯೆಹೋವ ದೇವರ ಮುಂದೆ ಬೆಳೆಯುವನು. ಅವನಿಗೆ ಯಾವ ಸೌಂದರ್ಯವಾಗಲಿ ಇಲ್ಲವೆ ಘನತೆಯಾಗಲಿ ಇರಲಿಲ್ಲ. ನಾವು ಅವನನ್ನು ನೋಡಿದಾಗ, ಅವನಲ್ಲಿ ಆಕರ್ಷಿಸತಕ್ಕ ಯಾವ ಚಂದವು ಇರಲಿಲ್ಲ.


“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.


ಆಗ ಯೆಹೋವ ದೇವರು, “ನನ್ನ ಸೇವಕನಾದ ಯೆಶಾಯನು ಈಜಿಪ್ಟ್ ಮತ್ತು ಕೂಷಿಗು, ಗುರುತಾಗಿಯೂ, ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.


ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.


ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಗುರುತಾಗಿದ್ದೇನೆ.’ “ನಾನು ಮಾಡಿದ ಹಾಗೆ ಅವರಿಗೆ ಮಾಡಲಾಗುವುದು. ಅವರು ಗುಲಾಮರಾಗಿ ಸೆರೆಗೆ ಹೋಗುವರು.


ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.


ನನ್ನ ಸೇವಕನು ವಿವೇಕಿಯಾಗಿ ಕಾರ್ಯವನ್ನು ಸಾಧಿಸಿ, ಅವನು ಉನ್ನತನಾಗಿ ಮೇಲೆಕ್ಕೇರಿ ಮಹೋನ್ನತನಾಗಿರುವನು.


ಈಗ ಯೆಹೋವ ದೇವರು ಹೀಗೆ ಹೇಳುತ್ತಾರೆ, ಯಾಕೋಬ್ಯರನ್ನು ತನ್ನ ಬಳಿಗೆ ಕರೆತರುವಂತೆಯೂ, ಇಸ್ರಾಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳುವಂತೆಯೂ ದೇವರು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಯೆಹೋವ ದೇವರ ದೃಷ್ಟಿಯಲ್ಲಿ ಮಾನ್ಯನಾಗಿರುವೆನು. ನನ್ನ ದೇವರೇ ನನಗೆ ಬಲವು.


ಇಗೋ, ನಾನೂ ಯೆಹೋವ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.


ನಮ್ಮ ದೇವರ ಮಮತೆಯ ಕರುಣೆಯಿಂದಲೇ, ಸ್ವರ್ಗದಿಂದ ನಮಗೆ ಅರುಣೋದಯವು ಉಂಟಾಗಿ


“ ‘ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು. ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು; ನನ್ನ ನ್ಯಾಯಗಳನ್ನು ಅನುಸರಿಸಿ, ನನ್ನ ನಿಯಮಗಳನ್ನು ಪಾಲಿಸುವಂತೆ ಮಾಡುವೆನು.


ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು. ಇನ್ನು ಮೇಲೆ ಅವರು ದೇಶದಲ್ಲಿ ಬರಗಾಲದಿಂದ ನಾಶವಾಗುವುದಿಲ್ಲ. ಅವರು ಇತರ ಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವುದೇ ಇಲ್ಲ.


ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವು ಮಾಡುವಿರಿ. ಈ ರೀತಿ ಆದಾಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ತಿಳಿಯುವಿರಿ.’


ಆತನು ನನಗೆ, “ನೀನು ನನ್ನ ಸೇವಕನು. ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ!” ಎಂದು ಹೇಳಿದನು.


ಅನೇಕರು ನನ್ನ ಸ್ಥಿತಿಯನ್ನು ಕಂಡು ಆಶ್ಚರ್ಯ ಪಡುತ್ತಾರೆ. ಆದರೆ ನೀವು ನನ್ನ ಬಲವಾದ ಆಶ್ರಯವಾಗಿದ್ದೀರಿ.


ಅವರ ಕಣ್ಣುಗಳ ಮುಂದೆ ಸಲಕರಣೆಗಳನ್ನು ಹೆಗಲಿನ ಮೇಲೆ ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೋಗಬೇಕು; ನೆಲವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು