ಜೆಕರ್ಯ 5:3 - ಕನ್ನಡ ಸಮಕಾಲಿಕ ಅನುವಾದ3 ಆಗ ದೂತನು ನನಗೆ, “ಭೂಮಿಯ ಮೇಲೆಲ್ಲಾ ಹರಡುವ ಶಾಪವು ಇದೇ. ಈ ದಿಕ್ಕಿನಲ್ಲಿ ಬರೆದಿರುವ ಪ್ರಕಾರ ಕಳ್ಳತನ ಮಾಡುವವರೆಲ್ಲರನ್ನು ತೆಗೆದುಹಾಕಲಾಗುವುದು. ಸುಳ್ಳಾಣೆ ಇಡುವವರೆಲ್ಲರನ್ನು ಆ ಕಡೆಯಲ್ಲಿ ಬರೆದಿರುವ ಪ್ರಕಾರ ತೆಗೆದುಹಾಕಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ದೂತನು ನನಗೆ, “ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪವು ಇದೇ. ಕಳ್ಳತನ ಮಾಡುವ ಪ್ರತಿಯೊಬ್ಬರೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವರು. ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳು ಸಾಕ್ಷಿಯೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಅವನು ನನಗೆ “ನಾಡಿನ ಮೇಲೆ ಬಂದೆರಗಲಿರುವ ಶಾಪ ಅದರಲ್ಲಿ ಲಿಖಿತ ಆಗಿದೆ. ಒಂದು ಕಡೆ ಬರೆದಿರುವಂತೆ, ಪ್ರತಿಯೊಬ್ಬ ಕಳ್ಳನನ್ನು ನಾಡಿನಿಂದ ಹೊರದೂಡಲಾಗುವುದು. ಮತ್ತೊಂದು ಕಡೆ ಬರೆದಿರುವಂತೆ, ಸುಳ್ಳಾಣೆ ಇಡುವ ಪ್ರತಿಯೊಬ್ಬನನ್ನೂ ನಾಡಿನಿಂದ ಹೊರದೂಡಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಅವನು ನನಗೆ - ಇದು ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪ; ಇದಕ್ಕೆ ತಕ್ಕಂತೆ ಪ್ರತಿಯೊಬ್ಬ ಕಳ್ಳನು ದೇಶದಿಂದ ತೊಡೆಯಲ್ಪಡುವನು; ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳುಸಾಕ್ಷಿಯೂ ದೇಶದಿಂದ ತೊಡೆಯಲ್ಪಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ದೇವದೂತನು ನನಗೆ ಹೇಳಿದ್ದೇನೆಂದರೆ, “ಈ ಸುರುಳಿಯಲ್ಲಿ ಶಾಪವು ಬರೆಯಲ್ಪಟ್ಟಿದೆ. ಸುರುಳಿಯ ಒಂದು ಬದಿಯಲ್ಲಿ ಕದಿಯುವ ಜನರಿಗೆ ಶಾಪ ಬರೆಯಲ್ಪಟ್ಟಿದೆ. ಅದರ ಇನ್ನೊಂದು ಬದಿಯಲ್ಲಿ ವಾಗ್ದಾನ ಮಾಡಿಯೂ ಅದನ್ನು ಪಾಲಿಸದೆ ಸುಳ್ಳಾಡುವವರಿಗೆ ಶಾಪ ಬರೆಯಲ್ಪಟ್ಟಿದೆ. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.