Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 5:4 - ಕನ್ನಡ ಸಮಕಾಲಿಕ ಅನುವಾದ

4 ‘ನಾನು ಶಾಪವನ್ನು ಕಳುಹಿಸುತ್ತೇನೆ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರಿನಿಂದ ಸುಳ್ಳಾಗಿ ಆಣೆ ಇಡುವವನ ಮನೆಯಲ್ಲಿಯೂ ಪ್ರವೇಶಿಸಿ, ಅವನ ಮನೆಯಲ್ಲಿ ನಿಂತು, ಅದನ್ನೂ, ಅದರ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರೆತ್ತಿ ಸುಳ್ಳು ಸಾಕ್ಷಿಹೇಳುವವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ನಾನು ಶಾಪವನ್ನು ಕಳುಹಿಸುತ್ತೇನೆ. ಅದು ಕಳ್ಳನ ಮನೆಯನ್ನೂ ನನ್ನ ಹೆಸರೆತ್ತಿ ಸುಳ್ಳಾಣೆಯಿಡುವವನ ಮನೆಯನ್ನೂ ಹೊಕ್ಕು, ಅಲ್ಲಿ ತಂಗಿದ್ದು ಅದನ್ನು ಕಲ್ಲುಮರ ಸಹಿತ ಸಂಪೂರ್ಣವಾಗಿ ಭಸ್ಮಮಾಡುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಅಪ್ಪಣೆಯಂತೆ ಇದು ಹೊರಟು ಕಳ್ಳನ ಮನೆಯೊಳಗೂ ನನ್ನ ಹೆಸರೆತ್ತಿ ಸುಳ್ಳುಸಾಕ್ಷಿ ಹೇಳುವವನ ಮನೆಯೊಳಗೂ ನುಗ್ಗಿ ನಟ್ಟನಡುವೆ ನೆಲೆಗೊಂಡು ಅದನ್ನು ಕಲ್ಲುಮರ ಸಹಿತವಾಗಿ ನಾಶಮಾಡುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 5:4
19 ತಿಳಿವುಗಳ ಹೋಲಿಕೆ  

ದುಷ್ಟರ ಮನೆಯ ಮೇಲೆ ದೈವಶಾಪವಿದೆ. ಆದರೆ ನೀತಿವಂತರ ನಿವಾಸದ ಮೇಲೆ ದೈವಾಶೀರ್ವಾದವಿರುವುದು.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಬೆಂಕಿಯು ಅವನ ಮನೆಯನ್ನು ಸುಡುವುದು; ಅವನ ಮನೆಯ ಮೇಲೆ ಗಂಧಕವನ್ನು ಎರಚಲಾಗುವುದು.


ನೀವು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿಮ್ಮ ಮನೆಗೆ ತೆಗೆದುಕೊಂಡು ಬರಬಾರದು. ಅದನ್ನು ಕೆಟ್ಟದಾಗಿ ಪರಿಗಣಿಸಿ ಮತ್ತು ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು, ಏಕೆಂದರೆ ಅದು ಶಾಪಗ್ರಸ್ತವಾದದ್ದು.


ಅವನ ನಿಕ್ಷೇಪಗಳಲ್ಲಿ ಅಂಧಕಾರವು ಪೂರ್ಣವಾಗಿ ಕವಿಯುವುದು; ಯಾರೂ ಹೊತ್ತಿಸದ ಬೆಂಕಿ ಅವನನ್ನು ದಹಿಸುವುದು; ಅವನ ಗುಡಾರದಲ್ಲಿ ಉಳಿದದ್ದೆಲ್ಲ ನಾಶವಾಗುವುದು.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ. ಅದರಲ್ಲಿ ವಾಸವಾಗಿರುವವರು ದಂಡನೆಗೆ ಒಳಗಾಗಿದ್ದಾರೆ. ಆದ್ದರಿಂದ ಭೂನಿವಾಸಿಗಳು ಸುಟ್ಟು ಹೋಗಿ, ಕೆಲವರು ಮಾತ್ರ ಉಳಿದಿದ್ದಾರೆ.


“ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲ್ ಜನರಿಗೆ ನಾಚಿಕೆ ಆಯಿತು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು.


ಶಪಿಸುವದೂ, ಸುಳ್ಳು ಹೇಳುವುದೂ, ಕೊಲ್ಲುವುದು, ಕದಿಯುವುದೂ, ವ್ಯಭಿಚಾರ ಮಾಡುವುದೂ ಹೆಚ್ಚಾಗಿ ಬಿಟ್ಟಿವೆ. ಅವರು ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ದೇಶವೆಲ್ಲಾ ರಕ್ತಮಯವಾಗಿದೆ.


ಆದ್ದರಿಂದ ದೇಶವು ದುಃಖಪಡುತ್ತಿದೆ. ಅದರಲ್ಲಿ ವಾಸಿಸುವ ಪ್ರತಿಯೊಬ್ಬನು ಕುಗ್ಗಿಹೋಗಿದ್ದಾನೆ. ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ, ಸಮುದ್ರ ಮೀನುಗಳು ನಶಿಸಿ ಹೋಗುತ್ತಿವೆ.


“ತಮ್ಮ ಕೋಟೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರಿಗೆ, ನ್ಯಾಯ ನೀತಿಯನ್ನು ಮಾಡುವುದಕ್ಕೆ ತಿಳಿಯುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ದೂತನು ನನಗೆ, “ಭೂಮಿಯ ಮೇಲೆಲ್ಲಾ ಹರಡುವ ಶಾಪವು ಇದೇ. ಈ ದಿಕ್ಕಿನಲ್ಲಿ ಬರೆದಿರುವ ಪ್ರಕಾರ ಕಳ್ಳತನ ಮಾಡುವವರೆಲ್ಲರನ್ನು ತೆಗೆದುಹಾಕಲಾಗುವುದು. ಸುಳ್ಳಾಣೆ ಇಡುವವರೆಲ್ಲರನ್ನು ಆ ಕಡೆಯಲ್ಲಿ ಬರೆದಿರುವ ಪ್ರಕಾರ ತೆಗೆದುಹಾಕಲಾಗುವುದು.


ನಿಮ್ಮ ಹೃದಯಗಳಲ್ಲಿ ನೆರೆಯವನ ವಿರುದ್ಧವಾಗಿ ಕೇಡನ್ನು ಕಲ್ಪಿಸದಿರಿ. ಸುಳ್ಳು ಪ್ರಮಾಣವನ್ನು ಪ್ರೀತಿಸಬೇಡಿರಿ. ಏಕೆಂದರೆ ಇವುಗಳನ್ನೆಲ್ಲಾ ನಾನು ಹಗೆಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಿಮಗೆ ಪಟ್ಟಣದಲ್ಲಿಯೂ ಶಾಪ, ಹೊಲದಲ್ಲಿಯೂ ನಿಮಗೆ ಶಾಪ.


ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಉಳಿಸಬೇಕು. ಆದರೆ ನಾವು ಅವರಿಗೆ ಹೀಗೆ ಮಾಡೋಣ.


ಅಂಥಾ ಮನೆ ಮೇಲೆ ಒರಗಿಕೊಂಡರೆ, ಅದು ನಿಲ್ಲದು; ಅದನ್ನು ಬಿಗಿಹಿಡಿದರೆ, ಅದು ತಡೆಯಲಾರದು.


ನಿನ್ನ ಶತ್ರುಗಳಿಗೆ ನಾಚಿಕೆಯಾಗುವುದು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು