ಜೆಕರ್ಯ 6:10 - ಕನ್ನಡ ಸಮಕಾಲಿಕ ಅನುವಾದ10 “ಆ ಸೆರೆಯವರಿಂದ, ಅಂದರೆ ಬಾಬಿಲೋನಿನಿಂದ ಬಂದಿರುವ ಹೆಲ್ದಾಯನಿಂದಲೂ, ತೋಬೀಯನಿಂದಲೂ, ಯೆದಾಯನಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು, ಅದೇ ದಿವಸದಲ್ಲಿ ನೀನು ಜೆಫನ್ಯನ ಮಗ ಯೋಷೀಯನ ಮನೆಗೆ ಹೋಗು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇನ್ನು ಸೆರೆಯಲ್ಲಿರುವವರೊಳಗೆ ಸೇರಿದವರಾದ ಹೆಲ್ದಾಯ, ತೋಬೀಯ ಮತ್ತು ಯೆದಾಯ ಎಂಬುವರ ಕೈಯಿಂದ ಬೆಳ್ಳಿ ಬಂಗಾರಗಳನ್ನು ತೆಗೆದುಕೋ; ಈ ದಿನವೇ ನೀನು ಹೋಗಿ ಬಾಬೆಲಿನಿಂದ ಬಂದು, ಇವರು ಇಳಿದುಕೊಂಡಿರುವ ಚೆಫನ್ಯನ ಮಗನಾದ ಯೋಷಿಯನ ಮನೆಗೆ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಈ ದಿನವೇ ಜೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗು, ಬಾಬಿಲೋನಿಗೆ ಸೆರೆಹೋಗಿ ಮರಳಿ ಬಂದಿಳಿದಿರುವ ಹೆಲ್ದಾಯ, ತೊಬೀಯ, ಯೆದಾಯ ಎಂಬವರಿಂದ ಕಾಣಿಕೆಯನ್ನು ಸ್ವೀಕರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇನ್ನು ಸೆರೆಯಲ್ಲಿರುವವರೊಳಗೆ ಸೇರಿದವರಾದ ಹೆಲ್ದಾಯ, ತೋಬೀಯ, ಯೆದಾಯ ಎಂಬವರ ಕೈಯಿಂದ ಬೆಳ್ಳಿಬಂಗಾರಗಳನ್ನು ಈಸಿಕೋ; ಈ ದಿವಸವೇ ನೀನು ಹೋಗಿ ಬಾಬೆಲಿನಿಂದ ಬಂದ ಇವರು ಇಳಿದಿರುವ ಚೆಫನ್ಯನ ಮಗನಾದ ಯೋಷೀಯನ ಮನೆಯನ್ನು ಸೇರಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆತನು ಹೇಳಿದ್ದೇನೆಂದರೆ, “ಹೆಲ್ದಾಯ, ತೋಬೀಯ ಮತ್ತು ಯೆದಾಯ ಇವರು ಬಾಬಿಲೋನಿನಿಂದ ಸೆರೆಯಾಳುಗಳಾಗಿ ಬಂದಿರುತ್ತಾರೆ. ಅವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿರಿ. ಅಧ್ಯಾಯವನ್ನು ನೋಡಿ |