ಜೆಕರ್ಯ 6:14 - ಕನ್ನಡ ಸಮಕಾಲಿಕ ಅನುವಾದ14 ಆ ಕಿರೀಟಗಳು ಹೇಲೆಮ್, ತೋಬೀಯ, ಯೆದಾಯ ಮತ್ತು ಜೆಫನ್ಯನ ಮಗ ಹೇನ್ ಇವರ ಜ್ಞಾಪಕಾರ್ಥವಾಗಿ ಯೆಹೋವ ದೇವರ ಆಲಯದಲ್ಲಿ ಇರುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “‘ಆ ಕಿರೀಟವು ಹೇಲೆಮ್, ತೋಬೀಯ, ಯೆದಾಯ, ಚೆಫನ್ಯನ ಮಗನಾದ ಯೋಷೀಯ ಇವರ ಜ್ಞಾಪಕಾರ್ಥವಾಗಿ ಯೆಹೋವನ ಆಲಯದಲ್ಲಿ ಇಡಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವರ ಕಿರೀಟವು ಹೇಲಮ್, ತೊಬೀಯ, ಯೆದಾಯ ಮತ್ತು ಜೆಫನ್ಯನ ಮಗ ಹೇನ್ - ಇವರ ಜ್ಞಾಪಕಾರ್ಥವಾಗಿ ಆಲಯದಲ್ಲೇ ಇರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆ ಕಿರೀಟವು ಹೇಲೆಮ್, ತೋಬೀಯ, ಯೆದಾಯ, ಚೆಫನ್ಯನ ಮಗನಾದ ಹೇನ್, ಇವರ ಜ್ಞಾಪಕಾರ್ಥವಾಗಿ ಯೆಹೋವನ ಆಲಯದಲ್ಲಿ ಇಟ್ಟಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಜನರು ಸ್ಮರಿಸಿಕೊಳ್ಳುವಂತೆ ಅವರು ಆ ಕಿರೀಟವನ್ನು ಆಲಯದೊಳಗೆ ಇಡುವರು. ಅದು ಹೆಲ್ದಾಯ, ತೋಬೀಯ, ಯೆದಾಯ ಮತ್ತು ಚೆಫನ್ಯನ ಮಗನಾದ ಹೇನ್‌ನಿಗೆ ಘನತೆಯನ್ನು ತರುವುದು.” ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.