Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:7 - ಕನ್ನಡ ಸಮಕಾಲಿಕ ಅನುವಾದ

7 ಕೆಂಪು ಕುದುರೆಗಳ ರಥ ಹೊರಟು ಲೋಕದಲ್ಲಿ ಸಂಚಾರ ಮಾಡಲು ಹೋಗುವುದಕ್ಕೆ ನೋಡಿದವು. ಆಗ ಅವನು, “ಹೋಗಿ ಲೋಕದಲ್ಲಿ ಅತ್ತಿತ್ತ ನಡೆದಾಡುವುದಕ್ಕೆ ಇಲ್ಲಿಂದ ಹೋಗಿರಿ,” ಎಂದನು. ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕೆಂಪು ಕುದುರೆಗಳು ಬಂದು ಲೋಕದಲ್ಲಿ ಸಂಚರಿಸುವುದಕ್ಕೆ ಹೊರಡಬೇಕೆಂದು ತ್ವರೆಪಟ್ಟವು; ಆಗ ಅವನು, “ಹೊರಡಿರಿ, ಲೋಕದಲ್ಲಿ ಸಂಚರಿಸಿರಿ” ಎಂದು ಅಪ್ಪಣೆ ಮಾಡಲು ಅವು ಲೋಕದಲ್ಲಿ ಸಂಚರಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಕೆಂಪು ಕುದುರೆಗಳು ಲೋಕದಲ್ಲೆಲ್ಲ ಗಸ್ತು ತಿರುಗಿ,” ಎಂದು ಅಪ್ಪಣೆಮಾಡಲು, ಅವು ಅಂತೆಯೇ ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕೆಂಪು ಕುದುರೆಗಳು ಬಂದು ಲೋಕದಲ್ಲಿ ಸಂಚರಿಸುವದಕ್ಕೆ ಹೊರಡಬೇಕೆಂದು ತ್ವರೆಪಟ್ಟವು; ಅವನು - ಹೊರಡಿರಿ, ಲೋಕದಲ್ಲಿ ಸಂಚರಿಸಿರಿ ಎಂದಪ್ಪಣೆಮಾಡಲು ಅವು ಲೋಕದಲ್ಲಿ ಸಂಚರಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೆಂಪು ಮಚ್ಚೆ ಇರುವ ಕುದುರೆಗಳು ತಮಗೆ ನೇಮಕವಾದ ಜಾಗಕ್ಕೆ ಹೋಗಿ ಅದನ್ನು ನೋಡಲು ಆತುರಗೊಂಡಿದ್ದವು. ಆಗ ದೂತನು ಅವುಗಳಿಗೆ, “ಹೋಗಿ, ಭೂಮಿಯ ಮೇಲೆ ಹೋಗಿ ಬನ್ನಿ” ಎಂದು ಹೇಳಿದಾಗ ಅವುಗಳು ಹೋಗಿ ತಮ್ಮ ಪ್ರಾಂತ್ಯದಲ್ಲಿ ನಡೆದಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:7
8 ತಿಳಿವುಗಳ ಹೋಲಿಕೆ  

ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು, “ಇವರು ಭೂಮಿಯ ಸುತ್ತಲೂ ನಡೆದಾಡುವುದಕ್ಕೆ ಯೆಹೋವ ದೇವರಿಂದ ಕಳುಹಿಸಲಾದವರು,” ಎಂದನು.


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ಆ ಹತ್ತು ಕೊಂಬುಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸರು. ಅನಂತರ ಇನ್ನೊಬ್ಬ ಅರಸನು ಹುಟ್ಟುವನು. ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.


“ಆಮೇಲೆ ನಾಲ್ಕನೆಯ ಮೃಗವು ಎಲ್ಲದರಲ್ಲಿ ವ್ಯತ್ಯಾಸವಾಗಿಯೂ, ಅತಿ ಭಯಂಕರವಾಗಿಯೂ, ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ, ಕಂಚಿನ ಉಗುರುಗಳುಳ್ಳದ್ದಾಗಿಯೂ ತುಂಡುತುಂಡು ಮಾಡಿ, ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥದ್ದೂ ಆಗಿದೆ.


ಎದ್ದು ದೇಶದ ಉದ್ದಗಲಕ್ಕೂ ನಡೆದಾಡು. ನಾನು ನಿನಗೆ ಅದನ್ನು ಕೊಡುವೆನು,” ಎಂದರು.


ಅವರು ಹೋರ್ ಎಂಬ ಬೆಟ್ಟದಿಂದ ಹೊರಟು, ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಆದರೆ ಜನರು ಈ ಪ್ರಯಾಣದಿಂದ ಆಯಾಸವಾಗಿ ಬಹಳ ಕುಂದಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು