Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:1 - ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ದಾರ್ಯಾವೆಷನ ನಾಲ್ಕನೆಯ ವರ್ಷದಲ್ಲಿ ಒಂಬತ್ತನೆಯ ತಿಂಗಳಿನ ಅಂದರೆ ಕಿಸ್ಲೇವ್ ತಿಂಗಳಿನ ನಾಲ್ಕನೆಯ ದಿವಸದಲ್ಲಿ ಯೆಹೋವ ದೇವರ ವಾಕ್ಯವು ಜೆಕರ್ಯನಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನಾದ ದಾರ್ಯಾವೆಷನ ಆಳ್ವಿಕೆಯ ನಾಲ್ಕನೆಯ ವರ್ಷದ ಕಿಸ್ಲೇವ್ ಎಂಬ ಒಂಭತ್ತನೆಯ ತಿಂಗಳಿನ ನಾಲ್ಕನೆಯ ದಿನದಲ್ಲಿ ಯೆಹೋವನು ಜೆಕರ್ಯನಿಗೆ ಒಂದು ವಾಕ್ಯವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರಸನಾದ ಡೇರಿಯಸನ ಆಳ್ವಿಕೆಯ ನಾಲ್ಕನೆಯ ವರ್ಷದ ಒಂಭತ್ತನೆಯ ತಿಂಗಳ (ಅಂದರೆ ಕಿಸ್ಲೇವ್ ತಿಂಗಳಿನ) ನಾಲ್ಕನೆಯ ದಿನದಲ್ಲಿ ಸರ್ವೇಶ್ವರ ಜೆಕರ್ಯನಿಗೆ ಒಂದು ಸಂದೇಶವನ್ನು ಅನುಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಸನಾದ ದಾರ್ಯಾವೆಷನ ಆಳಿಕೆಯ ನಾಲ್ಕನೆಯ ವರುಷದ ಕಿಸ್ಲೇವ್ ಎಂಬ ಒಂಭತ್ತನೆಯ ತಿಂಗಳಿನ ನಾಲ್ಕನೆಯ ದಿನದಲ್ಲಿ ಯೆಹೋವನು ಜೆಕರ್ಯನಿಗೆ ಒಂದು ವಾಕ್ಯವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪರ್ಶಿಯದ ಅರಸನಾದ ದಾರ್ಯಾವೆಷನ ಆಳ್ವಿಕೆಯ ನಾಲ್ಕನೇ ವರ್ಷದ ಒಂಭತ್ತನೇ ತಿಂಗಳಿನ (ಕಿಸ್ಲೇವ್) ನಾಲ್ಕನೇ ದಿವಸದಲ್ಲಿ ಯೆಹೋವನ ಸಂದೇಶವನ್ನು ಜೆಕರ್ಯನು ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:1
6 ತಿಳಿವುಗಳ ಹೋಲಿಕೆ  

ಹಕಲ್ಯನ ಮಗ ನೆಹೆಮೀಯನ ಮಾತುಗಳು: ಇಪ್ಪತ್ತನೆಯ ವರ್ಷದ, ಕಿಸ್ಲೇವ್ ಎಂಬ ಮಾರ್ಗಶಿರ ತಿಂಗಳಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದೆನು.


ಪರ್ಷಿಯಾದ ಅರಸ ದಾರ್ಯಾವೆಷನ ಎರಡನೆಯ ವರ್ಷ, ಎಂಟನೆಯ ತಿಂಗಳಿನಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು:


ದಾರ್ಯಾವೆಷನ ಎರಡನೆಯ ವರ್ಷದ, ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು:


ಎರಡನೆಯ ಸಾರಿ ಯೆಹೋವ ದೇವರ ವಾಕ್ಯವು, ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ, ಹಗ್ಗಾಯನಿಗೆ ಬಂದಿತು.


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು