ಜೆಕರ್ಯ 8:11 - ಕನ್ನಡ ಸಮಕಾಲಿಕ ಅನುವಾದ11 ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇಂದಿನಿಂದಲೋ ಈ ಜನಶೇಷದವರ ವಿಷಯದಲ್ಲಿ ನಾನು ಪೂರ್ವಕಾಲದಲ್ಲಿ ಇದ್ದಂತೆ ಇರುವುದಿಲ್ಲ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇನ್ನು ಮೇಲಾದರೋ, ಅಳಿದುಳಿದ ಜನರಿಗೆ ಹಾಗೆ ಮಾಡೆನು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇಂದಿನಿಂದಲೋ ಈ ಜನಶೇಷದವರ ವಿಷಯದಲ್ಲಿ ನಾನು ಪೂರ್ವಕಾಲದಲ್ಲಿ ಇದ್ದಂತೆ ಇರೆನು; ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ಈಗ ಹಾಗಿಲ್ಲ. ಅಳಿಯದೆ ಉಳಿದವರಿಗೆ ಹಾಗೆ ಆಗುವದಿಲ್ಲ. ಇದು ಸರ್ವಶಕ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |