Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:12 - ಕನ್ನಡ ಸಮಕಾಲಿಕ ಅನುವಾದ

12 ಬೀಜವು ವೃದ್ಧಿಯಾಗುವುದು. ದ್ರಾಕ್ಷಿಬಳ್ಳಿ ತನ್ನ ಫಲವನ್ನು ಕೊಡುವುದು. ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವುದು. ಆಕಾಶಗಳು ತಮ್ಮ ಮಂಜನ್ನು ಕೊಡುವುವು. ಈ ಜನರಲ್ಲಿ ಉಳಿದವರು, ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೆಮ್ಮದಿಯ ಬೆಳೆಯಾಗುವದು; ದ್ರಾಕ್ಷಾಲತೆಯು ಹಣ್ಣುಬಿಡುವದು, ಭೂವಿುಯು ಧಾನ್ಯವನ್ನೀಯುವದು, ಆಕಾಶವು ಇಬ್ಬನಿಯನ್ನು ಸುರಿಸುವದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಈ ಜನರು ನೆಮ್ಮದಿಯಿಂದ ಭೂಮಿಯ ಮೇಲೆ ನಡೆಯುವರು. ಅವರ ದ್ರಾಕ್ಷಾಲತೆಗಳು ದ್ರಾಕ್ಷಿಹಣ್ಣನ್ನು ಕೊಡುವವು. ದೇಶವು ಸಮೃದ್ಧಿಯಾದ ಬೆಳೆಯನ್ನು ಕೊಡುವದು. ಆಕಾಶವು ಮಳೆಯನ್ನು ಸುರಿಸುವದು. ಇವೆಲ್ಲವನ್ನು ನಾನು ನನ್ನ ಜನರಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:12
39 ತಿಳಿವುಗಳ ಹೋಲಿಕೆ  

ಯೋಸೇಫನ ವಿಷಯವಾಗಿ ಹೇಳಿದ್ದೇನೆಂದರೆ: “ಅವನ ದೇಶವು ಆಕಾಶದ ಅಮೂಲ್ಯವಾದ ಮಂಜಿನಿಂದಲೂ, ಕೆಳಗೆ ಸಾಗರ ಸೆಲೆಯಿಂದಲೂ ಯೆಹೋವ ದೇವರ ಆಶೀರ್ವಾದ ಹೊಂದಲಿ.


ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯವನ್ನೂ ಹೊಸ ದ್ರಾಕ್ಷಾರಸವನ್ನೂ ಕೊಡಲಿ.


ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇದು ಈ ದಿವಸಗಳಲ್ಲಿ ಉಳಿದ ಈ ಜನರ ದೃಷ್ಟಿಗೆ ಆಶ್ಚರ್ಯವಾಗಿ ತೋರಿದರೂ, ನನ್ನ ಕಣ್ಣುಗಳಿಗೆ ಸಹ ಆಶ್ಚರ್ಯವಾಗಿ ತೋರುವುದೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಬೀಜವು ಇನ್ನು ಕಣಜದಲ್ಲಿ ಉಂಟೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಎಣ್ಣೆಮರಗಳು ಇನ್ನೂ ಫಲಿಸಲಿಲ್ಲವಲ್ಲಾ. “ಈ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು,” ಎಂದರು.


ಆದ್ದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.


ಕಾಡುಮೃಗಗಳೇ, ಭಯಪಡಬೇಡಿರಿ. ಏಕೆಂದರೆ, ಅಡವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ. ಮರಗಳು ತಮ್ಮ ಫಲವನ್ನು ಫಲಿಸುತ್ತವೆ. ಅಂಜೂರದ ಗಿಡವೂ ದ್ರಾಕ್ಷಿ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.


ಸಮಾಧಾನ ಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುತ್ತಾರೆ.


ಆದಕಾರಣ ಇನ್ನು ಮೇಲೆ ನಾಯಕರ ಬಗ್ಗೆ ಯಾರೂ ಹೊಗಳುವುದು ಬೇಡ! ಏಕೆಂದರೆ ಸಮಸ್ತವೂ ನಿಮ್ಮದು.


ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು. ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಆಳಕ್ಕೆ ಹರಡುವನು.


ಜನಾಂಗಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನೂ ಹೆಚ್ಚಿಸುವೆನು.


ನಿಮ್ಮ ನಾಚಿಕೆಗೆ ಬದಲಾಗಿ ಮಾನವು ಎರಡರಷ್ಟಾಗುವುದು. ಅವಮಾನಕ್ಕೆ ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು. ಆದ್ದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನಮಾಡಿಕೊಳ್ಳುವರು. ನಿತ್ಯವಾದ ಸಂತೋಷವು ನಿಮಗೆ ಆಗುವುದು.


ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ಇಸಾಕನು ಆ ದೇಶದಲ್ಲಿ ಬಿತ್ತಿದ ವರ್ಷದಲ್ಲಿಯೇ ನೂರರಷ್ಟು ಬೆಳೆಯನ್ನು ಹೊಂದಿದನು. ಯೆಹೋವ ದೇವರು ಅವನನ್ನು ಆಶೀರ್ವದಿಸಿದರು.


ನನ್ನ ಜನರಾದ ಇಸ್ರಾಯೇಲ್ಯರನ್ನು ನಿಮ್ಮಲ್ಲಿ ವಾಸಿಸುವಂತೆ ಮಾಡುವೆನು. ಅವರು ನಿನ್ನನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ನೀವು ಅವರ ಸೊತ್ತಾಗಿರುವಿರಿ; ನೀವು ಎಂದಿಗೂ ಅವರ ಮಕ್ಕಳಿಂದ ವಂಚಿತರಾಗುವುದಿಲ್ಲ.


ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.


ಬೆಟ್ಟಗುಡ್ಡಗಳಿಂದ ಸಮೃದ್ಧಿಯೂ ನೀತಿಯ ಫಲವೂ ಜನರಿಗೆ ಬರಲಿ.


ಆದಕಾರಣ ಆಕಾಶದಿಂದ ಮಂಜನ್ನು ಸುರಿಯುವ, ಧಾನ್ಯ, ಹೊಸ ದ್ರಾಕ್ಷಾರಸ ಸಮೃದ್ಧಿಯಾಗಿರುವ ನಾಡಿನಲ್ಲಿ, ಯಾಕೋಬನ ವಂಶದವರು ಸುರಕ್ಷಿತರಾದರು. ಇಸ್ರಾಯೇಲರು ನಿರ್ಭಯವಾಗಿ ವಾಸಿಸುವವರಾದರು.


ನನ್ನ ಬೋಧನೆ ಮಳೆಯಂತೆ ಸುರಿಯುವುದು. ನನ್ನ ಮಾತು ಮಂಜಿನಂತೆಯೂ, ಹುಲ್ಲಿನ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವುದು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.


“ ‘ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು, ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳಂತೆ ನಡೆದರೆ,


ಯೆಹೋವ ದೇವರು ಒಳ್ಳೆಯದನ್ನು ಕೊಡುವರು. ನಮ್ಮ ಭೂಮಿಯು ತನ್ನ ಸುಗ್ಗಿಯನ್ನು ಕೊಡುವುದು.


ಆದ್ದರಿಂದ ಅವರು ಪ್ರಾತಃಕಾಲದ ಮಂಜಿನ ಹಾಗೆಯೂ, ಬೇಗನೆ ಮಾಯವಾಗುವ ಇಬ್ಬನಿಯ ಹಾಗೆಯೂ, ಸುಳಿಗಾಳಿಯು ಕಣದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ, ಚಿಮಿಣಿಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.


ಚೆನ್ನಾಗಿ ನೆನಪಿಗೆ ತಂದುಕೊಳ್ಳಿರಿ. ಇಂದಿನಿಂದ ಇದಕ್ಕೆ ಮುಂಚೆ ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ, ಯೆಹೋವ ದೇವರ ಮಂದಿರದ ಅಸ್ತಿವಾರವು ಹಾಕಲಾದ ದಿನದಿಂದ ಸೂಕ್ಷ್ಮವಾಗಿ ಯೋಚಿಸಿಕೊಳ್ಳಿರಿ.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವ ದೇವರು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದಂತೆ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಮುಂದೆ ದುಃಖಪಡುವುದಿಲ್ಲ.


ಅವರು ಇನ್ನು ಮೇಲೆ ಇತರ ಜನಾಂಗಗಳಿಗೆ ಕೊಳ್ಳೆಯಾಗುವುದಿಲ್ಲ; ಕಾಡುಮೃಗಗಳು ಅವರನ್ನು ತಿನ್ನುವುದಿಲ್ಲ. ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯವಾಗಿ ವಾಸಿಸುವರು.


ನಾನು ನಿಮ್ಮವನಾಗಿದ್ದೇನೆ ನಾನು ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನಿಮ್ಮಲ್ಲಿ ಉಳುಮೆ ಮಾಡಿ ಬಿತ್ತಲಾಗುತ್ತದೆ.


ಯೆಹೋವ ದೇವರು ತನ್ನ ಜನರಿಗೆ ಉತ್ತರಕೊಟ್ಟು, ನಾನು ನಿಮಗೆ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ನಿಮಗೆ ಸಾಕಾಗುವಷ್ಟು ಕಳುಹಿಸಿ, ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತರಾಗಿ ಇಡುವುದಿಲ್ಲ.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯ ಮಾಡರು; ಸುಳ್ಳಾಡರು, ಅವರ ಬಾಯಲ್ಲಿ ಮೋಸವಿರದು. ಅವರು ಮಂದೆಯಂತೆ ಮೇದು ಮಲಗುವರು. ಅವರನ್ನು ಭಯಪಡಿಸುವವನು ಒಬ್ಬನೂ ಇರುವುದಿಲ್ಲ.”


“ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು