Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:16 - ಕನ್ನಡ ಸಮಕಾಲಿಕ ಅನುವಾದ

16 ನೀವು ಮಾಡತಕ್ಕ ಕಾರ್ಯಗಳು ಇವೇ: ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಮಾತನಾಡಲಿ. ನಿಮ್ಮ ನ್ಯಾಯಾಲಯಗಳಲ್ಲಿ ಸತ್ಯವೂ ನ್ಯಾಯವೂ ಶಾಂತಿಯ ಸಾಧನವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ನೀವು ಮಾಡಬೇಕಾದುದು ಏನೆಂದರೆ: ಪ್ರತಿಯೊಬ್ಬನು ತನ್ನ ನೆರೆಯವನೊಡನೆ ಸತ್ಯವನ್ನೇ ಆಡಲಿ. ನ್ಯಾಯಾಲಯಗಳಲ್ಲಿ ನಿಮ್ಮ ತೀರ್ಪು ನ್ಯಾಯಸಮ್ಮತವಾಗಿರಲಿ, ಶಾಂತಿಯ ಸಾಧನ ಆಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀವು ಮಾಡಬೇಕಾದ ಕಾರ್ಯಗಳು ಇವೇ - ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ ಸಮಾಧಾನಪ್ರದನ್ಯಾಯವನ್ನೂ ಸ್ಥಾಪಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ನೀವು ಮಾಡಬೇಕಾದದ್ದೇನೆಂದರೆ, ನಿಮ್ಮ ನೆರೆಯವರ ಸಂಗಡ ಸತ್ಯವನ್ನೇ ಆಡಿರಿ. ನಿಮ್ಮ ನಗರಗಳಲ್ಲಿ ಯಾವುದೇ ತೀರ್ಮಾನಗಳನ್ನು ಮಾಡುವುದಾಗಿದ್ದರೂ ಅವು ನ್ಯಾಯವಾದವುಗಳಾಗಿಯೂ ಸತ್ಯವಾದವುಗಳಾಗಿಯೂ ಸಮಾಧಾನವನ್ನು ತರುವಂಥವುಗಳಾಗಿಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:16
29 ತಿಳಿವುಗಳ ಹೋಲಿಕೆ  

ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.


“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ;


ದೋಷವಿಲ್ಲದವರಾಗಿ ಜೀವಿಸಿ, ನೀತಿಯನ್ನು ನಡೆಸಿ, ತಮ್ಮ ಹೃದಯದಿಂದ ಸತ್ಯವನ್ನಾಡುವವರೇ;


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾಲ್ಕನೆಯ, ಐದನೆಯ, ಏಳನೆಯ, ಹತ್ತನೆಯ ತಿಂಗಳಿನ ಉಪವಾಸವು ಯೆಹೂದದ ಮನೆತನದವರಿಗೆ ಸಂತೋಷಕರ, ಸಂಭ್ರಮ ಕಾಲವೂ, ಆನಂದಕರವಾದ ಹಬ್ಬಗಳೂ ಆಗುವುವು. ಆದರೆ ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.”


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ಸತ್ಯದ ತುಟಿಯು ಸದಾ ಸ್ಥಿರಗೊಳ್ಳುವುದು, ಸುಳ್ಳಾಡುವ ನಾಲಿಗೆಯು ಕ್ಷಣಿಕ.


ಒಬ್ಬ ಪ್ರಾಮಾಣಿಕ ಸಾಕ್ಷಿ ಸತ್ಯವನ್ನು ಹೇಳುತ್ತಾನೆ, ಆದರೆ ಸುಳ್ಳುಸಾಕ್ಷಿಯು ಸುಳ್ಳನ್ನು ಹೇಳುತ್ತಾನೆ.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.


ಆದ್ದರಿಂದ, ಯೆಹೂದ್ಯರಲ್ಲದವರು ವ್ಯರ್ಥ ಆಲೋಚನೆಯುಳ್ಳವರಾಗಿ ಬಾಳುವ ರೀತಿಯಲ್ಲಿ ನೀವು ಇನ್ನು ಮೇಲೆ ಬಾಳದಂತೆ, ಕರ್ತನಲ್ಲಿ ನಾನು ನಿಮಗೆ ಸಾಕ್ಷಿಕೊಟ್ಟು ಹೇಳುತ್ತೇನೆ.


ಸಮಾಧಾನ ಪಡಿಸುವವರು ಧನ್ಯರು, ಅವರು ದೇವರ ಮಕ್ಕಳೆನಿಸಿಕೊಳ್ಳುವರು.


ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿದ್ದಾರೆ. ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವರಾಗಿದ್ದಾರೆ. ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.


ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.


“ ‘ಕದಿಯಬಾರದು. “ ‘ಸುಳ್ಳಾಡಬಾರದು. “ ‘ಒಬ್ಬರಿಗೊಬ್ಬರು ಮೋಸಮಾಡಬಾರದು.


ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ.


ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನೂ ಸುಲಿಗೆಯನ್ನೂ ಬಿಡಿರಿ. ನ್ಯಾಯವನ್ನೂ ನೀತಿಯನ್ನೂ ನಡೆಸಿರಿ. ನನ್ನ ಜನರನ್ನು ಓಡಿಸಬೇಡಿರಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯ ಮಾಡರು; ಸುಳ್ಳಾಡರು, ಅವರ ಬಾಯಲ್ಲಿ ಮೋಸವಿರದು. ಅವರು ಮಂದೆಯಂತೆ ಮೇದು ಮಲಗುವರು. ಅವರನ್ನು ಭಯಪಡಿಸುವವನು ಒಬ್ಬನೂ ಇರುವುದಿಲ್ಲ.”


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಚೀಯೋನಿಗೆ ನಾನು ತಿರುಗಿಕೊಂಡು, ನಾನು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು. ಆಗ ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೇನಾಧೀಶ್ವರ ಯೆಹೋವ ದೇವರ ಪರ್ವತವು ಪರಿಶುದ್ಧ ಪರ್ವತವೆಂದೂ ಕರೆಯಿಸಿಕೊಳ್ಳುವುದು.”


ನೀತಿವಂತರ ಮೇಲೆ ಯೆಹೋವ ದೇವರು ದೃಷ್ಟಿ ಇಡುತ್ತಾರೆ, ಅವರು ಮೊರೆಯಿಡುವಾಗ ದೇವರು ಕಿವಿಗೊಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು