Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:20 - ಕನ್ನಡ ಸಮಕಾಲಿಕ ಅನುವಾದ

20 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅನೇಕ ಜನರೂ, ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನೂ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇನ್ನು ಮುಂದೆ ಜನಾಂಗಗಳೂ ಹಲವು ನಗರ ನಿವಾಸಿಗಳೂ ಜೆರುಸಲೇಮಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇನ್ನು ಮುಂದೆ ಜನಾಂಗಗಳೂ ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಮುಂದಿನ ದಿವಸಗಳಲ್ಲಿ ಬೇರೆಬೇರೆ ನಗರದ ಜನರು ಜೆರುಸಲೇಮಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:20
31 ತಿಳಿವುಗಳ ಹೋಲಿಕೆ  

“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಅನೇಕರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು, ಪರಲೋಕ ರಾಜ್ಯದಲ್ಲಿ ಅಬ್ರಹಾಮ್, ಇಸಾಕ್, ಯಾಕೋಬರೊಂದಿಗೆ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆಗ ಅವರು ಎದೋಮಿನ ಮಿಕ್ಕ ಭಾಗವನ್ನೂ, ನನ್ನ ಹೆಸರಿನಿಂದ ಕರೆಯಲಾಗುವ ಎಲ್ಲಾ ಜನಾಂಗಗಳನ್ನೂ ಸ್ವಾಧೀನ ಮಾಡಿಕೊಳ್ಳುವೆನು, ಎಂಬುದಾಗಿ ಇದನ್ನು ಮಾಡುವವರಾದ ಯೆಹೋವ ದೇವರು ಹೇಳುತ್ತಾರೆ.


ನಾನು ದೇಶದಲ್ಲಿ ಆಕೆಯನ್ನು ನನಗಾಗಿ ಬಿತ್ತಿಕೊಳ್ಳುವೆನು. ‘ನನ್ನ ಪ್ರಿಯರಲ್ಲ’ ಎಂದು ಕರೆದವರಿಗೆ, ನಾನು ನನ್ನ ಪ್ರೀತಿಯನ್ನು ತೋರಿಸುವೆನು. ನಾನು, ‘ನೀವು ನನ್ನ ಜನರಲ್ಲ’ ಎಂದು ಹೇಳಿದವರನ್ನು, ‘ನೀವು ನನ್ನ ಜನರು,’ ಎಂದು ಹೇಳುವೆನು. ಅವರು, ‘ನೀವು ನಮ್ಮ ದೇವರು’ ” ಎಂದು ಹೇಳುವರು.


“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.


ನೀವು ಸಮುದ್ರದ ಏರುವಿಕೆಯನ್ನು ಆಳುತ್ತೀರಿ. ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀರಿ.


ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ.


ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು; ಜನಾಂಗಗಳ ಕುಟುಂಬಗಳೆಲ್ಲಾ ದೇವರ ಮುಂದೆ ಅಡ್ಡಬೀಳುವವು.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.


“ನಿಮ್ಮ ಜನರಾದ ಇಸ್ರಾಯೇಲಿನವನಲ್ಲದೆ ನಿಮ್ಮ ನಾಮದ ನಿಮಿತ್ತ ದೂರದೇಶದಿಂದ ಬಂದ ಪರದೇಶಿಯ ವಿಷಯದಲ್ಲಿ ಬೇಡಿಕೊಳ್ಳುತ್ತೇನೆ.


ಎಂದು ನಿತ್ಯತ್ವವನ್ನು ತಿಳಿದಿರುವವರೂ ಇವುಗಳನ್ನೆಲ್ಲಾ ಮಾಡುವವರೂ ಆಗಿರುವ ದೇವರು ಹೇಳುತ್ತಾರೆ.


ದೇವರು ಯೆಹೂದ್ಯರಲ್ಲದವರೊಳಗಿಂದ ತಮ್ಮ ಹೆಸರಿಗಾಗಿ ಜನರನ್ನು ಆರಿಸಿಕೊಳ್ಳಲು ಹೇಗೆ ದಯೆತೋರಿಸಿದರೆಂದು ಸೀಮೋನನು ಈಗಾಗಲೇ ನಮಗೆ ವಿವರಿಸಿದ್ದಾನೆ.


ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವ ದೇವರನ್ನು ಸೇವಿಸುತ್ತವೆ, ಎಂದು ಹೇಳಲಾಗುವುದು.


ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ”


ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗಗಳಿಗೆ ತೀರ್ಪುಕೊಡುವನು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ. ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು