Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:22 - ಕನ್ನಡ ಸಮಕಾಲಿಕ ಅನುವಾದ

22 ಅನೇಕ ಜನರೂ, ಬಲವಾದ ಜನಾಂಗಗಳೂ ಯೆರೂಸಲೇಮಿಗೆ ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕುವುದಕ್ಕೂ, ಯೆಹೋವ ದೇವರ ಮುಂದೆ ಬೇಡಿಕೊಳ್ಳುವುದಕ್ಕೂ ಬರುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ನಾನಾದೇಶಗಳಿಂದ, ಪ್ರಬಲ ರಾಷ್ಟ್ರಗಳಿಂದ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ಆರಾಧಿಸಿ, ಅವರ ಆಶೀರ್ವಾದವನ್ನು ಕೋರಲು ಜನರು ಜೆರುಸಲೇಮಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗೆ ಬಹು ದೇಶಗಳವರೂ ಬಲವಾದ ಜನಾಂಗಗಳವರೂ ಯೆರೂಸಲೇವಿುನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವದಕ್ಕೂ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಎಷ್ಟೋ ಜನರು, ಎಷ್ಟೋ ಬಲಶಾಲಿ ಜನಾಂಗಗಳು ಜೆರುಸಲೇಮಿಗೆ ಸರ್ವಶಕ್ತನಾದ ಯೆಹೋವನನ್ನು ಕಂಡುಕೊಳ್ಳಲೂ ಆತನನ್ನು ಆರಾಧಿಸಲೂ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:22
18 ತಿಳಿವುಗಳ ಹೋಲಿಕೆ  

ಒಂದು ಪಟ್ಟಣದ ನಿವಾಸಿಗಳು ಮತ್ತೊಂದಕ್ಕೆ ಹೋಗಿ, ‘ನಾವು ಯೆಹೋವ ದೇವರ ಮುಂದೆ ಬೇಡಿಕೊಳ್ಳುವುದಕ್ಕೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕುವುದಕ್ಕೂ ಬೇಗ ಹೋಗೋಣ. ನಾನು ಕೂಡ ಹೋಗುತ್ತೇನೆ,’ ಎಂದು ಹೇಳುವರು.


ಅದರ ಬೆಳಕಿನಲ್ಲಿ ಎಲ್ಲಾ ಜನರು ನಡೆಯುವರು. ಭೂರಾಜರು ತಮ್ಮ ಮಹಿಮೆಯನ್ನು ಅಲ್ಲಿಗೆ ತರುವರು.


ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,” ಎಂದು ಹೇಳಿದರು.


ಸಮಸ್ತ ಜನಾಂಗಗಳನ್ನು ಮುಚ್ಚಿರುವ ಪರದೆಯನ್ನೂ, ಸಕಲ ದೇಶದವರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವರು.


ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.


ಎಲ್ಲಾ ಜನಾಂಗಗಳನ್ನು ನಡುಗಿಸುವೆನು. ಎಲ್ಲಾ ಜನಾಂಗಗಳ ಇಷ್ಟ ವಸ್ತುಗಳು ಬಂದು ಒದಗಲು, ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗಗಳಿಗೆ ತೀರ್ಪುಕೊಡುವನು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ. ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”


ಇದಾದ ಮೇಲೆ, “ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವುದಕ್ಕೆ ಬರುವರು” ಎಂದು ಯೆಹೋವ ದೇವರು ಹೇಳುತ್ತಾರೆ.


ನಿನ್ನ ದೇವರಾದ ಯೆಹೋವ ದೇವರ ನಿಮಿತ್ತವೂ, ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆಯುವೆ, ಏಕೆಂದರೆ ಆತನು ನಿನಗೆ ಕೊಟ್ಟ ವೈಭವದಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವುವು.


ಆ ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಎಲ್ಲಾ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ, ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ದೇವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು, ನಾವು ಅವರ ದಾರಿಗಳಲ್ಲಿ ನಡೆಯುವೆವು.” ಏಕೆಂದರೆ ಚೀಯೋನಿನಿಂದ ದೇವರ ನಿಯಮವೂ, ಯೆರೂಸಲೇಮಿನಿಂದ ಯೆಹೋವ ದೇವರ ವಾಕ್ಯವೂ ಹೊರಡುವುವು.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ಸಾರ್ವಭೌಮ ಯೆಹೋವ ದೇವರು, ಇಂತೆನ್ನುತ್ತಾರೆ, “ಇಗೋ, ನಾನು ರಾಷ್ಟ್ರಗಳ ಕಡೆಗೆ ಕೈಯೆತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಪುತ್ರರನ್ನು ಕೈಹಿಡಿದು ತರುವರು. ನಿನ್ನ ಪುತ್ರಿಯರನ್ನು ಹೆಗಲ ಮೇಲೆ ತರುವರು.


ಆಪು ಹುಲ್ಲಿನ ಮಧ್ಯದಲ್ಲಿರುವ ಕಾಡುಮೃಗಗಳ ಹಾಗೆಯೂ ಕರುಗಳ ಮಧ್ಯದಲ್ಲಿರುವ ಹೋರಿಗಳ ಹಾಗೆಯೂ ಇರುವ ಜನಾಂಗವನ್ನು ಗದರಿಸಿರಿ. ಮೃಗದಂಥವರು ತಗ್ಗಿಸಿಕೊಂಡು ಬೆಳ್ಳಿ ಗಟ್ಟಿಗಳನ್ನು ನಿಮಗೆ ತರಲಿ. ಆದರೆ ಯುದ್ಧದಲ್ಲಿ ಆನಂದಿಸುವ ರಾಷ್ಟ್ರಗಳನ್ನು ಚದರಿಸಿರಿ.


ಅನೇಕ ಜನಾಂಗಗಳು ಬಂದು ಹೀಗೆಂದು ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ಅವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು. ನಾವು ಅವರ ದಾರಿಗಳಲ್ಲಿ ನಡೆಯುವೆವು. ಚೀಯೋನಿನಿಂದ ದೇವರ ನಿಯಮವೂ ಯೆರೂಸಲೇಮಿನಿಂದ ದೇವರ ವಾಕ್ಯವೂ ಹೊರಡುವುವು.”


ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗಗಳಲ್ಲಿ ಉಳಿದವರೆಲ್ಲಾ ವರ್ಷ ವರ್ಷಕ್ಕೆ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೂ ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು