Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:23 - ಕನ್ನಡ ಸಮಕಾಲಿಕ ಅನುವಾದ

23 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಆ ದಿವಸಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು, ನಾವು ನಿಮ್ಮ ಸಂಗಡ ಬರುತ್ತೇವೆ, ಏಕೆಂದರೆ ನಿಮ್ಮ ಸಂಗಡ ದೇವರು ಇದ್ದಾರೆಂದು ಕೇಳಿದ್ದೇವೆ,” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆ ದಿನದಲ್ಲಿ ವಿವಿಧ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವೂ ನಿಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ’ ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ಜನಾಂಗಗಳ ವಿವಿಧಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು - ನಾವು ನಿಮ್ಮೊಂದಿಗೆ ಬರುವೆವು, ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಬೇರೆಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನೊಬ್ಬನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, ‘ದೇವರು ನಿಮ್ಮೊಂದಿಗಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?’” ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:23
35 ತಿಳಿವುಗಳ ಹೋಲಿಕೆ  

ಇತರ ಜನಾಂಗಗಳು ನಿನ್ನ ಪ್ರಕಾಶಕ್ಕೂ, ಅರಸರು ನಿನ್ನ ಉದಯದ ಕಾಂತಿಗೂ ಬರುವರು.


ನಿನ್ನ ದೇವರಾದ ಯೆಹೋವ ದೇವರ ನಿಮಿತ್ತವೂ, ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆಯುವೆ, ಏಕೆಂದರೆ ಆತನು ನಿನಗೆ ಕೊಟ್ಟ ವೈಭವದಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವುವು.


ಅವನ ಹೃದಯದ ರಹಸ್ಯಗಳು ಬಯಲಾಗುವುವು. ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, “ದೇವರು ನಿಜವಾಗಿಯೂ ನಿಮ್ಮ ಮಧ್ಯದಲ್ಲಿ ಇದ್ದಾರೆ!” ಎಂದು ಪ್ರಕಟಪಡಿಸುವನು.


ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ”


“ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು. ಆಗ ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ಆದರೆ ನಿಮ್ಮ ತಂದೆಯು ನನಗೆ ವಂಚನೆಮಾಡಿ, ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡು ಮಾಡಗೊಡಿಸಲಿಲ್ಲ.


ಹೀಗೆ ಪೌಲನನ್ನು ಮುಟ್ಟಿದ ಕೈವಸ್ತ್ರಗಳನ್ನೂ ಉಡುಪುಗಳನ್ನೂ ತೆಗೆದುಕೊಂಡುಹೋಗಿ ರೋಗಿಗಳಿಗೆ ಮುಟ್ಟಿಸಿದಾಗ ಅವರು ರೋಗಗಳಿಂದ ವಾಸಿಯಾಗುತ್ತಿದ್ದರು ಹಾಗೂ ಅವರಲ್ಲಿಯ ದುರಾತ್ಮಗಳು ಬಿಟ್ಟು ಹೋಗುತ್ತಿದ್ದವು.


ಆ ದಿವಸದಲ್ಲಿ ಏಳುಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದು ಉಣ್ಣುವೆವು, ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು, ನಮ್ಮ ನಿಂದೆಯನ್ನು ನೀಗಿಸುವುದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು,” ಎಂದು ಕೇಳಿಕೊಳ್ಳುವರು.


ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು ಹೀಗೆ ಹೇಳುವನು, “ನಿನಗೆ ವಸ್ತ್ರವಿದೆ, ನಮ್ಮನ್ನು ನೀನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ.”


ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು. ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು.


ಈಗ ಹತ್ತು ಸಾರಿ ನನ್ನನ್ನು ನಿಂದಿಸಿದ್ದೀರಿ; ನಾಚಿಕೆಯಿಲ್ಲದೆ ನೀವು ನನ್ನ ಮೇಲೆ ಆಕ್ರಮಣ ಮಾಡುತ್ತೀರಿ.


ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು.


ಎಲೀಯನು ಅವನಿಗೆ, “ನೀನು ದಯಮಾಡಿ ಇಲ್ಲೇ ಇರು. ಯೆಹೋವ ದೇವರು ನನ್ನನ್ನು ಯೊರ್ದನಿಗೆ ಕಳುಹಿಸುತ್ತಿದ್ದಾರೆ,” ಎಂದನು. ಅದಕ್ಕವನು, “ಯೆಹೋವ ದೇವರ ಜೀವದಾಣೆ, ನನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರಿಬ್ಬರೂ ಮುಂದಕ್ಕೆ ನಡೆದರು.


ಆತನೇ ಅವರ ಸಮಾಧಾನವಾಗಿರುವನು. ಅಸ್ಸೀರಿಯದವನು ನಮ್ಮ ನಾಡಿಗೆ ಮುತ್ತಿಗೆ ಹಾಕುವಾಗ ನಮ್ಮ ಕೋಟೆಗಳ ಮೂಲಕ ಸೈನ್ಯವಾಗಿ ಹೋಗುವಾಗ ನಾವು ಅವನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಸೇನಾಪತಿಗಳನ್ನೂ ಎಬ್ಬಿಸುವೆವು.


ನಿನ್ನ ಇಬ್ಬರು ಪುತ್ರಿಯರಿಗಾಗಿ ಹದಿನಾಲ್ಕು ವರ್ಷ, ನಿನ್ನ ಮಂದೆಗಳಿಗೋಸ್ಕರ ಆರು ವರ್ಷ, ಈ ಪ್ರಕಾರ ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದು, ನಿನ್ನ ಸೇವೆ ಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.


ಅವಳು ಯೇಸುವಿನ ಹಿಂದೆ ಬಂದು ಅವರ ಉಡುಪಿನ ಅಂಚನ್ನು ಮುಟ್ಟಿದಳು, ಕೂಡಲೇ ಆಕೆಯ ರಕ್ತಸ್ರಾವವು ನಿಂತುಹೋಯಿತು.


ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,


ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ, ಮಕ್ಕಳಿಗೂ, ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.


ಯೆಹೋವ ದೇವರಲ್ಲಿ ಮಾತ್ರ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಅವರ ಬಳಿಗೆ ಬರುವರು.” ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಗೆ ಈಡಾಗುವರು, ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.


ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.


ಆ ಕಾಲದಲ್ಲಿ ನಿನ್ನನ್ನು ಪೀಡಿಸುವವರನ್ನೆಲ್ಲಾ ದಂಡಿಸುವೆನು, ಕುಂಟಾದದ್ದನ್ನು ರಕ್ಷಿಸಿ, ಚದರಿಹೋದವರನ್ನು ಕೂಡಿಸುವೆನು; ಅವರು ಅವಮಾನ ಹೊಂದಿದ ದೇಶಗಳಲ್ಲೆಲ್ಲಾ ಅವರಿಗೆ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.


ತರುವಾಯ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ಯೆಹೂದ ದೇಶದಲ್ಲಿ ನೆಲೆಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು. ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದಾರೆಂದು ಇವರು ಕಂಡಾಗ, ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಬಂದಿದ್ದರು.


ಅರಸನ ಆಜ್ಞೆಯು ಪ್ರಕಟವಾದ ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಯೆಹೂದ್ಯರಿಗೆ ಸಂತೋಷವೂ ಆನಂದವೂ ಸಂಭ್ರಮವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಇತರ ದೇಶಗಳ ಅನೇಕ ಜನರು ಯೆಹೂದ್ಯರಾದರು. ಯೆಹೂದ್ಯರ ಭಯವು ಅವರ ಮೇಲೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು