Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:4 - ಕನ್ನಡ ಸಮಕಾಲಿಕ ಅನುವಾದ

4 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ವೃದ್ಧರೂ, ಮುದುಕಿಯರೂ ವಾಸವಾಗಿರುವರು. ವೃದ್ದಾಪ್ಯದಿಂದ ಒಬ್ಬೊಬ್ಬರ ಕೈಯಲ್ಲಿ ಅವರವರ ಕೋಲು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುದುಕ ಮತ್ತು ಮುದುಕಿಯರು ಸೇರುವರು. ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಮುದುಕರು, ಮುದುಕಿಯರು ಮತ್ತೆ ಜೆರುಸಲೇಮಿನ ಚೌಕಗಳಲ್ಲಿ ಕುಳಿತುಕೊಳ್ಳುವರು. ವೃದ್ಧಾಪ್ಯದ ಪ್ರಯುಕ್ತ ಒಬ್ಬೊಬ್ಬರ ಕೈಯಲ್ಲಿ ಊರುಗೋಲು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇನ್ನು ಮುಂದೆ ಯೆರೂಸಲೇವಿುನ ಚೌಕಗಳಲ್ಲಿ ಮುದುಕ ಮುದುಕಿಯರು ಕೂಡ್ರುವರು; ಅತಿವೃದ್ಧಾಪ್ಯದ ನಿವಿುತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ವೃದ್ಧವೃದ್ಧೆಯರು ಜೆರುಸಲೇಮಿನ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಿ ಕಾಣಸಿಗುವರು. ಅವರು ಬಹು ದೀರ್ಘ ಆಯುಷ್ಯವನ್ನು ಹೊಂದುವದರಿಂದ ಅವರಿಗೆ ಕೈಕೋಲು ಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:4
12 ತಿಳಿವುಗಳ ಹೋಲಿಕೆ  

ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


ಅನಂತರ ಯೋಬನು, ದಿನತುಂಬಿದ ಮುದುಕನಾಗಿ ಸತ್ತನು.


ಸಿವುಡು ತನ್ನ ಕಾಲದಲ್ಲಿ ಮನೆಗೆ ಸೇರುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿ ಸೇರುವೆ.


ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟದಹಾಗೆ, ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿನಗಳು ಬರುವುವು.


ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವುಗಳಿಗೆ ಬದಲಾಗಿ, ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವೆ. ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ವೃದ್ಧನೂ ಇರುವುದಿಲ್ಲ.


ಆಗ ಕನ್ನಿಕೆಯರೂ, ಪ್ರಾಯದವರೂ, ವೃದ್ಧರ ಸಹಿತವಾಗಿ ನಾಟ್ಯವಾಡುತ್ತಾ ಹರ್ಷಿಸುವರು. ಏಕೆಂದರೆ ನಾನು ಅವರ ದುಃಖವನ್ನು ಆನಂದಕ್ಕೆ ಬದಲಾಯಿಸುವೆನು. ನಾನು ಅವರನ್ನು ಆಧರಿಸಿ, ಅವರ ದುಃಖದಿಂದ ಬಿಡಿಸಿ, ಅವರಿಗೆ ಸಂತೋಷವನ್ನುಂಟು ಮಾಡುವೆನು.


ಯೆಹೂದದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ, ಮಂದೆಯ ಸಂಗಡ ಹೊರಡುವವರೂ ವಾಸವಾಗುವರು.


“ಓಡಿಹೋಗಿ ಈ ಯೌವನಸ್ಥನಿಗೆ, ‘ಯೆರೂಸಲೇಮು, ಅದರಲ್ಲಿರುವ ಮನುಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾಗಿರುವುದು. ಯೆರೂಸಲೇಮು ಗೋಡೆ ಇಲ್ಲದ ಊರುಗಳಂತೆ ಇರುವುದು.


ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ, ಅವನನ್ನು ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಪೆಟ್ಟು ತಿಂದವನು ಗುಣಹೊಂದುವವರೆಗೆ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನನ್ನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು