Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:8 - ಕನ್ನಡ ಸಮಕಾಲಿಕ ಅನುವಾದ

8 ನಾನು ಅವರನ್ನು ತರುವೆನು. ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು. ನಾನು ಅವರಿಗೆ ನಂಬಿಗಸ್ತನೂ, ನೀತಿವಂತನೂ ಆದ ದೇವರಾಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಯೆರೂಸಲೇವಿುನೊಳಗೇ ವಾಸವಾಗಿರುವರು; ಸತ್ಯಸಂಧತೆಯಿಂದಲೂ ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಅವರನ್ನು ಇಲ್ಲಿಗೆ ಕರೆತರುವೆನು. ಅವರು ಜೆರುಸಲೇಮಿನಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು; ನಾನು ಅವರಿಗೆ ಒಳ್ಳೆಯವನಾದ ನಂಬಿಗಸ್ತನಾದ ದೇವರಾಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:8
30 ತಿಳಿವುಗಳ ಹೋಲಿಕೆ  

ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿಸುವಿರಿ; ನೀವು ನನ್ನ ಜನರಾಗಿರುವಿರಿ. ನಾನು ನಿಮ್ಮ ದೇವರಾಗಿರುವೆನು.


ಆಗ ಅವರು ನನ್ನ ನಿಯಮಗಳನ್ನು ಕೈಗೊಂಡು ಜಾಗರೂಕತೆಯಿಂದ ಪಾಲಿಸುವರು. ನನ್ನ ನಿಯಮಗಳನ್ನು ಕೈಗೊಳ್ಳುವರು. ಅವರು ನನ್ನ ಜನರಾಗುವರು, ನಾನು ಅವರ ದೇವರಾಗುವೆನು.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.


“ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”


ಜಯಹೊಂದುವವರು ಇವುಗಳಿಗೆ ಬಾಧ್ಯನಾಗುವರು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಮಕ್ಕಳಾಗಿರುವರು.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ನನ್ನ ಗುಡಾರವು ಸಹ ಅವರೊಂದಿಗಿರುವುದು. ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.


ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.


ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವರಾಗಿರುವೆನು. ನೀವು ನನ್ನ ಜನರಾಗಿರುವಿರಿ.


“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.


ಯೆಹೂದವು ಎಂದೆಂದಿಗೂ ಜನಭರಿತವಾಗುವುದು. ಯೆರೂಸಲೇಮು ಸಹ ತಲತಲಾಂತರಕ್ಕೂ ನಿಲ್ಲುವುದು.


‘ನೀವು ನನಗೆ ಪ್ರಜೆಯಾಗಿರುವಿರಿ. ನಾನು ನಿಮಗೆ ದೇವರಾಗಿರುವೆನು.’ ”


ಈಜಿಪ್ಟ್ ದೇಶದೊಳಗಿಂದ ಸಹ ಅವರನ್ನು ತಿರುಗಿ ತರುವೆನು. ಅಸ್ಸೀರಿಯದೊಳಗಿಂದ ಅವರನ್ನು ಕೂಡಿಸುವೆನು. ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು. ಅವರಿಗೆ ಸ್ಥಳ ಸಾಲದೆ ಇರುವುದು.


ಹೌದು, ಅವರಿಗೆ ಒಳ್ಳೆಯದನ್ನು ಮಾಡುವುದಕ್ಕೆ ಅವರೊಂದಿಗೆ ಆನಂದಪಡುವೆನು. ನಿಜವಾಗಿ ನನ್ನ ಪೂರ್ಣಹೃದಯದಿಂದಲೂ, ನನ್ನ ಪೂರ್ಣಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.


“ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು,” ಎಂದು ಯೆಹೋವ ದೇವರು ಸಾರುತ್ತಾರೆ.


ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.”


ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ, ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ, ನನ್ನ ಪ್ರಜೆಯಾಗುವಿರಿ; ನಾನು ನಿಮ್ಮ ದೇವರಾಗಿರುವೆನು.


ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು. ಹಾಳಾಗಿರುವ ಸ್ಥಳಗಳಲ್ಲಿಯೂ ಕಟ್ಟಡಗಳು ಪುನಃ ಏಳುವುವು.


“ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.


ಈಜಿಪ್ಟಿನಿಂದ ಪಕ್ಷಿಯಗಳಂತೆಯೂ ಅಸ್ಸೀರಿಯದಿಂದ ಪಾರಿವಾಳಗಳಂತೆಯೂ ಅವರು ಬರುವರು. ನಾನು ಅವರ ಮನೆಗಳಲ್ಲಿ ಇರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು