ಜೆಕರ್ಯ 8:9 - ಕನ್ನಡ ಸಮಕಾಲಿಕ ಅನುವಾದ9 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ದೇವಾಲಯವನ್ನು ಕಟ್ಟುವ ಹಾಗೆ ಸೇನಾಧೀಶ್ವರ ಯೆಹೋವ ದೇವರ ಆಲಯದ ಅಸ್ತಿವಾರವು ಹಾಕಲಾದ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸೇನಾಧೀಶ್ವರ ಸರ್ವೇಶ್ವರ ಹೀಗೆಂದಿದ್ದಾರೆ: “ನಿಮ್ಮ ಕೈ ಮುಂದಾಗಲಿ. ಈಗ ನೀವು ಕೇಳುತ್ತಿರುವ ಮಾತುಗಳು ಮಹಾದೇವಾಲಯಕ್ಕೆ ಅಸ್ತಿಭಾರವನ್ನು ಹಾಕಿದ ಕಾಲದಲ್ಲಿ ಪ್ರವಾದಿಗಳು ಆಡಿದ ಮಾತುಗಳೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಬಲಗೊಳ್ಳಿರಿ! ಸರ್ವಶಕ್ತನಾದ ಯೆಹೋವನು ತನ್ನ ಆಲಯವನ್ನು ತಿರುಗಿ ಕಟ್ಟಲು ಅಸ್ತಿವಾರವನ್ನು ಹಾಕುವಾಗ ಪ್ರವಾದಿಗಳು ಕೊಟ್ಟ ಸಂದೇಶವನ್ನೇ ನೀವು ತಿರುಗಿ ಕೇಳುತ್ತಿದ್ದೀರಿ! ಅಧ್ಯಾಯವನ್ನು ನೋಡಿ |