Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:10 - ಕನ್ನಡ ಸಮಕಾಲಿಕ ಅನುವಾದ

10 ಎಫ್ರಾಯೀಮಿನೊಳಗಿಂದ ರಥಗಳನ್ನೂ ಯೆರೂಸಲೇಮಿನೊಳಗಿಂದ ಯುದ್ಧದ ಕುದುರೆಗಳನ್ನೂ ತೆಗೆದುಬಿಡುವೆನು. ಯುದ್ಧದ ಬಿಲ್ಲು ಸಹ ಮುರಿದು ಹಾಕಲಾಗುವುದು. ಇತರ ರಾಷ್ಟ್ರಗಳಿಗೆ ಸಮಾಧಾನಕರವಾಗಿರುವುದು. ಆತನ ದೊರೆತನವು ಸಮುದ್ರದಿಂದ ಸಮುದ್ರಕ್ಕೂ, ನದಿಯಿಂದ ಭೂಮಿಯ ಅಂತ್ಯಗಳವರೆಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಎಫ್ರಾಯೀಮಿನ ರಥಬಲವನ್ನೂ, ಯೆರೂಸಲೇಮಿನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವುದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವುದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಹರಡಿಕೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕಿತ್ತುಹಾಕುವೆನು ಎಫ್ರಯಿಮಿನ ರಥಬಲವನು ನಿಶ್ಶೇಷಮಾಡುವೆನು ಜೆರುಸಲೇಮಿನ ಅಶ್ವಬಲವನು ಮುರಿಯಲಾಗುವುದು ಯುದ್ಧದ ಬಿಲ್ಲುಗಳನು. ಘೋಷಿಸುವೆನು ಶಾಂತಿಯನು ರಾಷ್ಟ್ರಗಳಿಗೆ ಆತನ ರಾಜ್ಯಭಾರ ಸಮುದ್ರದಿಂದ ಸಮುದ್ರದವರೆಗೆ ಯೂಫ್ರೆಟಿಸ್ ನದಿಯಿಂದ ಭುವಿಯ ಕಟ್ಟಕಡೆಯವರೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಎಫ್ರಾಯೀವಿುನ ರಥಬಲವನ್ನೂ ಯೆರೂಸಲೇವಿುನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ [ಯೂಫ್ರೇಟೀಸ್] ನದಿಯಿಂದ ಭೂವಿುಯ ಕಟ್ಟಕಡೆಯವರೆಗೂ ಹರಡಿಕೊಂಡಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅರಸನು ಹೀಗೆನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವಾರೂಢರಾದ ಸೈನಿಕರನ್ನೂ ನಾಶಮಾಡಿದೆನು; ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.” ಆ ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:10
33 ತಿಳಿವುಗಳ ಹೋಲಿಕೆ  

ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ, ಆಕಾಶದ ಪಕ್ಷಿಗಳ ಮತ್ತು ಭೂಮಿಯ ಕ್ರಿಮಿಗಳ ಸಂಗಡ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ, ಖಡ್ಗವನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದುಹಾಕಿ, ಅವರೆಲ್ಲರೂ ಸುರಕ್ಷಿತರಾಗಿ ಮಲಗುವಂತೆ ಮಾಡುವೆನು.


ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಆತನು ಯೆಹೋವ ದೇವರ ಬಲದಲ್ಲಿಯೂ ತನ್ನ ದೇವರಾದ ಯೆಹೋವ ದೇವರ ಹೆಸರಿನ ಘನತೆಯಲ್ಲಿಯೂ ನಿಂತುಕೊಂಡು ತನ್ನ ಮಂದೆಯನ್ನು ಮೇಯಿಸುವನು. ಅವರು ನೆಲೆಯಾಗಿರುವರು, ಆತನ ಘನತೆಯು ಭೂಮಿಯ ಅಂತ್ಯಗಳ ಮಟ್ಟಿಗೂ ತಲುಪುವುದು.


ನಿನ್ನನ್ನು ಸೇವಿಸದ ಜನಾಂಗವೂ, ರಾಜ್ಯವೂ ನಾಶವಾಗುವುದು. ಆ ಜನಾಂಗಗಳು ಸಂಪೂರ್ಣವಾಗಿ ಹಾಳಾಗುವುವು.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.


ಇವೆಲ್ಲವೂ ದೇವರಿಂದಲೇ ಆಯಿತು. ನಮ್ಮನ್ನು ಕ್ರಿಸ್ತ ಯೇಸುವಿನ ಮೂಲಕ ತಮ್ಮೊಂದಿಗೆ ಸಮಾಧಾನ ಮಾಡಿಕೊಂಡ ದೇವರು, ಇತರರನ್ನು ಸಮಾಧಾನಕ್ಕೆ ತರುವ ಸೇವೆಯನ್ನೂ ನಮಗೆ ಕೊಟ್ಟಿರುತ್ತಾರೆ:


ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.


ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.


ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.


ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ.


ಬೆಟ್ಟಗುಡ್ಡಗಳಿಂದ ಸಮೃದ್ಧಿಯೂ ನೀತಿಯ ಫಲವೂ ಜನರಿಗೆ ಬರಲಿ.


ನೀವು ಹೆಜ್ಜೆ ಇಡುವ ಸ್ಥಳವೆಲ್ಲಾ ನಿಮ್ಮದಾಗುವುದು. ಮರುಭೂಮಿಯಿಂದ ಲೆಬನೋನಿನವರೆಗೂ, ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದವರೆಗೂ ನಿಮ್ಮ ಮೇರೆಯಾಗಿರುವುದು.


ಇದಲ್ಲದೆ ಸೊಲೊಮೋನನು ಯೂಫ್ರೇಟೀಸ್ ಮೊದಲುಗೊಂಡು ಫಿಲಿಷ್ಟಿಯರ ದೇಶ ಮತ್ತು ಈಜಿಪ್ಟಿನ ಮೇರೆಯವರೆಗೂ ಇರುವ ಸಮಸ್ತ ರಾಜ್ಯಗಳನ್ನು ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳೆಲ್ಲಾ ಕಪ್ಪಗಳನ್ನು ಕೊಡುವವರಾಗಿ ಅವನಿಗೆ ಅಧೀನರಾಗಿದ್ದರು.


ಯೆಹೋವ ದೇವರು ಏನು ಹೇಳುತ್ತಾರೋ ಅದನ್ನು ನಾನು ಕೇಳುವೆನು. ದೇವರು ತಮ್ಮ ಜನರಿಗೂ ತಮ್ಮ ಭಕ್ತರಿಗೂ ಸಮಾಧಾನವನ್ನು ವಾಗ್ದಾನಮಾಡುವರು. ಆದರೆ ಅವರ ಜನರು ಇನ್ನು ಬುದ್ಧಿಹೀನತೆಗೆ ತಿರುಗಿಕೊಳ್ಳದೆ ಇರಲಿ.


ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವರು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ, ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ಕುರಿಮಂದೆಯ ಬುರುಜೇ, ಚೀಯೋನ್ ಪುತ್ರಿಯ ದುರ್ಗವೇ, ಮೊದಲಿದ್ದ ರಾಜ್ಯಾಧಿಕಾರವೂ ನಿಮಗೆ ಲಭಿಸುವುದು. ಯೆರೂಸಲೇಮಿನ ಪುತ್ರಿಗೆ ರಾಜ್ಯತ್ವವೂ ಬರುವುದು.”


ಅವನು, ‘ನೀವು ನನ್ನ ತಂದೆಯೂ ನನ್ನ ದೇವರೂ ನನ್ನ ರಕ್ಷಣೆಯ ಬಂಡೆಯೂ ಆಗಿದ್ದೀರಿ’ ಎಂದು ನನಗೆ ಮೊರೆಯಿಡುವನು.


ನಾನು ನಿನ್ನನ್ನು ನಂಬಿಗಸ್ತಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ಆಗ ನೀನು ಯೆಹೋವ ದೇವರನ್ನು ತಿಳಿದುಕೊಳ್ಳುವೆ.


ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತವಾಗಿರುವುದು. ನಿನ್ನ ಶತ್ರುಗಳೆಲ್ಲರು ನಾಶಹೊಂದುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು