Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:13 - ಕನ್ನಡ ಸಮಕಾಲಿಕ ಅನುವಾದ

13 ನಾನು ನನ್ನ ಬಿಲ್ಲನ್ನು ಬಗ್ಗಿಸುವಂತೆ ಯೆಹೂದವನ್ನು ಬಗ್ಗಿಸುತ್ತೇನೆ. ಎಫ್ರಾಯೀಮಿನಿಂದ ಅದನ್ನು ತುಂಬಿಸುತ್ತೇನೆ. ಚೀಯೋನೇ, ನಿನ್ನ ಪುತ್ರರನ್ನು ಗ್ರೀಕ್ ಪುತ್ರರ ವಿರೋಧವಾಗಿ ಎಬ್ಬಿಸಿ, ನಿನ್ನನ್ನು ಶೂರನ ಖಡ್ಗದಂತೆ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ. ಅದರಲ್ಲಿ ಎಫ್ರಾಯೀಮ್ ಎಂಬ ಬಾಣವನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಗ್ಗಿಸಿಕೊಂಡಿರುವೆ ಜುದೇಯ ಎಂಬ ಬಿಲ್ಲನು ಹೂಡಿರುವೆ ಅದರಲಿ ಎಫ್ರಯಿಮೆಂಬ ಬಾಣವನು. ಸಿಯೋನ್, ಎತ್ತಿಕಟ್ಟಿರುವೆ ನಿನ್ನವರನು ಗ್ರೀಕರಿಗಿದಿರಾಗಿ ಮಾಡುವೆ ನಿನ್ನನು ಶೂರನ ಕತ್ತಿಯನ್ನಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ, ಅದರಲ್ಲಿ ಎಫ್ರಾಯೀಮನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೂದನೇ, ನಾನು ನಿನ್ನನ್ನು ಬಿಲ್ಲಿನಂತೆ ಉಪಯೋಗಿಸುವೆನು. ಎಫ್ರಾಯೀಮನೇ, ನಾನು ನಿನ್ನನ್ನು ಬಾಣದಂತೆ ಉಪಯೋಗಿಸುವೆನು. ಇಸ್ರೇಲೇ, ಗ್ರೀಸಿನ ಜನರೊಂದಿಗೆ ಯುದ್ಧಮಾಡಲು ನಾನು ನಿನ್ನನ್ನು ಖಡ್ಗದಂತೆ ಉಪಯೋಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:13
31 ತಿಳಿವುಗಳ ಹೋಲಿಕೆ  

ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ. ನನ್ನನ್ನು ಆತನು ನುಣುಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.


ನಾನು, “ಇವರು ಏನು ಮಾಡುವುದಕ್ಕೆ ಬರುತ್ತಾರೆ?” ಎಂದೆನು. ಅದಕ್ಕೆ ಅವರು, “ಯೆಹೂದ್ಯರಲ್ಲಿ ಯಾರೂ ತಲೆಯೆತ್ತದಂತೆ ಅವುಗಳನ್ನು ಚದರಿಸುವ ಕೊಂಬುಗಳು ಅವು. ಆದರೆ ಇವರು ಯೆಹೂದ ದೇಶವನ್ನು ಚದರಿಸಬೇಕೆಂದು ತಲೆಯೆತ್ತಿದ ರಾಷ್ಟ್ರಗಳನ್ನೇ ಚದರಿಸಿ, ಅದರ ಕೊಂಬುಗಳನ್ನು ಕೆಡವಿ ಹಾಕುವುದಕ್ಕೆ ಬಂದಿದ್ದಾರೆ,” ಎಂದು ಹೇಳಿದರು.


ಪರಾಕ್ರಮಶಾಲಿಯೇ, ನಿಮ್ಮ ಖಡ್ಗವನ್ನು ಸೊಂಟಕ್ಕೆ ಬಿಗಿದುಕೊಳ್ಳಿರಿ. ನಿಮ್ಮ ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಳ್ಳಿರಿ.


ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು ಮತ್ತು ಪಕ್ಷಿಗಳೆಲ್ಲಾ ಅವರ ಮಾಂಸದಿಂದ ಹೊಟ್ಟೆ ತುಂಬಿಸಿಕೊಂಡವು.


ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.


“ಪೆರ್ಗಮದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಹರಿತವಾದ ಇಬ್ಬಾಯಿಕತ್ತಿಯನ್ನು ಹಿಡಿದವರು ಹೇಳುವುದೇನೆಂದರೆ:


ಅವರು ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿದ್ದರು. ಅವರ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಅವರ ಮುಖವು ಸೂರ್ಯನ ತೇಜಸ್ಸಿನಂತೆ ಪ್ರಕಾಶಿಸುವಂತಿತ್ತು.


ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.


ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿರಿ. ದೇವರ ವಾಕ್ಯವೆಂಬ ಪವಿತ್ರಾತ್ಮರ ಖಡ್ಗವನ್ನು ಎತ್ತಿ ಹಿಡಿಯಿರಿ.


ರಕ್ಷಕನು ಏಸಾವಿನ ಪರ್ವತವನ್ನು ಆಳಲು ಚೀಯೋನ್ ಪರ್ವತವನ್ನು ಏರುವನು. ಆಗ ರಾಜ್ಯವು ಯೆಹೋವ ದೇವರದಾಗಿರುವುದು.


“ನಾನು ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸರಿಯಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.


ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಪುತ್ರರು, ಈಗ ಕುಂಬಾರನ ಕೈಕೆಲಸದ ಮಣ್ಣಿನ ಮಡಕೆಯಂತೆ ತಿರಸ್ಕೃತರಾಗಿದ್ದಾರಲ್ಲಾ!


“ನೀನು ನನ್ನ ಗದೆಯೂ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರುಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ.


ಉನ್ನತ ದೇವರ ಸ್ತೋತ್ರವು ಅವರ ಬಾಯಿಯಲ್ಲಿ ಇರಲಿ. ಇಬ್ಬಾಯಿ ಖಡ್ಗ ಅವರ ಕೈಯಲ್ಲಿಯೂ ಇರಲಿ.


ನನ್ನ ಬಲವಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. ದೇವರು ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವಿದ್ಯೆಯನ್ನು ಕಲಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು