Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:15 - ಕನ್ನಡ ಸಮಕಾಲಿಕ ಅನುವಾದ

15 ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ರಕ್ಷಿಸುವನು ಸೇನಾಧೀಶ್ವರ ಸರ್ವೇಶ್ವರ ತನ್ನ ಜನರನು ನಸುಕಿ ನಾಶಮಾಡುವರವರು ಕವಣೆಗಾರ ಶತ್ರುಗಳನು. ಭೋರ್ಗರೆಯುವರು ಕುಡಿದು ಅಮಲೇರಿದವರಂತೆ ಇರುವರು ತುಂಬಿ ತುಳುಕುವ ಬೋಗುಣಿಗಳಂತೆ ರಕ್ತತೋಯ್ದ ವೇದಿಯ ಮೂಲೆಮೂಲೆಗಳಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೇನಾಧೀಶ್ವರ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು [ಶತ್ರುಗಳನ್ನು] ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; [ರಕ್ತವನ್ನು] ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ ಯಜ್ಞವೇದಿಯ ಮೂಲೆಗಳ ಹಾಗೂ ರಕ್ತಪೂರ್ಣರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸರ್ವಶಕ್ತನಾದ ದೇವರು ಅವರನ್ನು ಕಾಪಾಡುವನು. ಸೈನಿಕರು ಶತ್ರುವನ್ನು ಜಯಿಸಲು ಕವಣೆ ಮತ್ತು ಕಲ್ಲುಗಳನ್ನು ಉಪಯೋಗಿಸುವರು. ಶತ್ರುಗಳ ರಕ್ತವನ್ನು ಚೆಲ್ಲುವರು. ಅದು ದ್ರಾಕ್ಷಾರಸದಂತೆ ಹರಿಯುವದು. ಅದು ಯಜ್ಞವೇದಿಕೆಯ ಮೂಲೆಗಳಲ್ಲಿ ರಕ್ತವನ್ನು ಹೊಯಿದಂತೆ ಕಾಣುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:15
25 ತಿಳಿವುಗಳ ಹೋಲಿಕೆ  

“ಆ ದಿವಸದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ, ಸಿವುಡುಗಳಲ್ಲಿರುವ ಬೆಂಕಿಯ ಪಂಜಿನ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ, ಎಡಗಡೆಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನೂ ನುಂಗಿಬಿಡುವರು. ಆದರೆ ಯೆರೂಸಲೇಮಿನವರು ತಿರುಗಿ ತನ್ನ ಸ್ಥಳದಲ್ಲಿ ಯೆರೂಸಲೇಮಿನಲ್ಲಿಯೇ ಸುರಕ್ಷಿತವಾಗಿ ವಾಸಿಸುವರು.


ಎಫ್ರಾಯೀಮಿನವರು ಶೂರರಂತೆ ಇರುವರು. ಅವರ ಹೃದಯವು ದ್ರಾಕ್ಷಾರಸ ಕುಡಿದವರಂತೆ ಸಂತೋಷಪಡುವುದು. ಅವರ ಮಕ್ಕಳು ಇದನ್ನು ಕಂಡು ಸಂತೋಷಿಸುವರು. ಅವರ ಹೃದಯವು ಯೆಹೋವ ದೇವರಲ್ಲಿ ಆನಂದಿಸುವುದು.


ಆ ದಿನದಲ್ಲಿ ಯೆಹೋವ ದೇವರು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವರು. ಆ ದಿವಸಗಳಲ್ಲಿ ಅವರಲ್ಲಿ ಅತ್ಯಂತ ಬಲಹೀನನು ದಾವೀದನಂತೆ ಬಲಾಢ್ಯನಾಗುವನು. ದಾವೀದನ ವಂಶವು ದೇವರ ಹಾಗೆಯೂ, ಮುಂದಾಳಾಗಿ ಯೆಹೋವ ದೇವರ ದೂತನ ಹಾಗೆಯೂ ಇರುವುದು.


ಅವರು ಯುದ್ಧದಲ್ಲಿ ಶತ್ರುವನ್ನು ಕೆಸರಿನ ಬೀದಿಗಳಲ್ಲಿ ತುಳಿಯುವ ಶೂರರ ಹಾಗಿರುವರು. ಯೆಹೋವ ದೇವರು ಅವರ ಸಂಗಡ ಇರುವುದರಿಂದ ಯುದ್ಧಮಾಡುವರು. ಕುದುರೆಗಳ ಮೇಲೆ ಸವಾರಿ ಮಾಡುವ ಶತ್ರುವನ್ನು ನಾಚಿಕೆ ಪಡಿಸುವರು.


ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಆ ಬಲಿಪೀಠಕ್ಕೆ ಏಕವಾಗಿರಬೇಕು. ಅವುಗಳನ್ನು ಕಂಚಿನಿಂದ ಹೊದಿಸಬೇಕು.


ಆಗ ಯೆಹೋವ ದೇವರು ಪ್ರತಿಕ್ರಿಯೆಯನ್ನು ಪ್ರಕಟಿಸಿದರು. ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆ ಸಂರಕ್ಷಿಸಲಾದರು.


ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಮೇಲೆ ಅಡಿಯಲ್ಲಿ ಹೊಯ್ಯಬೇಕು.


ಇದಲ್ಲದೆ ಅವನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಎದುರಿನಲ್ಲಿ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,


ಶಿಲುಬೆಯ ಸಂದೇಶವು ವಿನಾಶದ ಮಾರ್ಗದಲ್ಲಿರುವವರಿಗೆ ಬುದ್ದಿಹೀನವಾಗಿದೆ. ರಕ್ಷಣೆ ಹೊಂದುತ್ತಿರುವ ನಮಗಾದರೋ, ಅದು ದೇವರ ಶಕ್ತಿಯಾಗಿದೆ.


ಆ ದಿವಸದಲ್ಲಿ, ಕುದುರೆಗಳ ಘಂಟೆಗಳ ಮೇಲೆ ಯೆಹೋವ ದೇವರಿಗೆ ಪರಿಶುದ್ಧವು ಎಂದಿರುವುದು. ಯೆಹೋವ ದೇವರ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವುವು.


ಅವರ ಒಳ್ಳೆಯತನವು ಎಷ್ಟೋ ದೊಡ್ಡದು. ಅವರು ಸೌಂದರ್ಯವು ಎಷ್ಟು ಮಹತ್ತಾದದ್ದು! ಧಾನ್ಯವು ಯೌವನಸ್ಥರನ್ನೂ, ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವುವು.


ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,


ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನೂ ಬರಲಿ. ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ. ಬನ್ನಿರಿ, ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡುಕೊಳ್ಳಿರಿ.


“ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.”


ನಿನ್ನ ಬಾಯಿಯ ಮುದ್ದುಗಳು ಉತ್ತಮ ದ್ರಾಕ್ಷಾರಸದ ಹಾಗಿರಲಿ. ನನ್ನ ಪ್ರಿಯಕರನ ತುಟಿ, ಹಲ್ಲುಗಳಲ್ಲಿ ದ್ರಾಕ್ಷಾರಸವು ನೇರವಾಗಿ ಹರಿದು ಇಂಪಾಗಿ ರುಚಿಸಲಿ.


ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ.


ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಲು ಅವಸರಪಡು! ಅರಸನು ನನ್ನನ್ನು ತನ್ನ ಕೊಠಡಿಯೊಳಗೆ ಕರೆದುಕೊಂಡು ಬರಲಿ. ನಾವು ನಿನ್ನಲ್ಲಿ ಉಲ್ಲಾಸಪಟ್ಟು, ಸಂತೋಷ ಪಡುತ್ತೇವೆ. ದ್ರಾಕ್ಷಾರಸಕ್ಕಿಂತ ಹೆಚ್ಚಾಗಿ ನಿನ್ನ ಪ್ರೀತಿಯನ್ನು ಹೊಗಳುತ್ತೇವೆ. ಅವರು ಯಥಾರ್ಥವಾಗಿ ನಿನ್ನನ್ನು ಮೆಚ್ಚುತ್ತಾರೆ!


ದಾವೀದನು ಫಿಲಿಷ್ಟಿಯನಿಗೆ, “ನೀನು ಖಡ್ಗ, ಈಟಿ ಮತ್ತು ಗುರಾಣಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ. ಆದರೆ ನಾನು, ನೀನು ನಿಂದಿಸಿದ ಇಸ್ರಾಯೇಲಿನ ಸೈನ್ಯಗಳ ದೇವರಾದ ಸೇನಾಧೀಶ್ವರ ಯೆಹೋವ ದೇವರ ಹೆಸರಿನಲ್ಲಿ ನಿನ್ನ ಬಳಿಗೆ ಬರುತ್ತೇನೆ.


ಯಾಜಕನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಸುವಾಸನೆಯುಳ್ಳ ಧೂಪವನ್ನು ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಮುಂದೆ ಹಚ್ಚಬೇಕು. ಅಲ್ಲದೆ ಆ ಹೋರಿಯ ಎಲ್ಲಾ ರಕವನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.


ಲಿವ್ಯಾತಾನ್ ಮೊಸಳೆಯನ್ನು ಬಿಲ್ಲುಬಾಣಗಳು ಓಡಿಸಲು ಅಸಾಧ್ಯ; ಕವಣೆಯ ಕಲ್ಲು ಅದಕ್ಕೆ ಹೊಟ್ಟಿಗೆ ಸಮಾನ.


ಆಗ ಯೆಹೋವ ದೇವರು ಹೊರಟು, ಯುದ್ಧದ ದಿವಸದಲ್ಲಿ ಹೋರಾಟ ಮಾಡಿದ ಪ್ರಕಾರವೇ, ಆ ಜನಾಂಗಗಳ ಸಂಗಡ ಅವರು ಹೋರಾಟ ಮಾಡುವರು.


ನಾನು ನನ್ನ ಕೈಯನ್ನು ಅವರ ಮೇಲೆ ಎತ್ತುವೆನು. ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ಕಳುಹಿಸಿದರೆಂದು ನೀವು ತಿಳಿಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು