ಜೆಕರ್ಯ 9:16 - ಕನ್ನಡ ಸಮಕಾಲಿಕ ಅನುವಾದ16 ಅವರ ದೇವರಾದ ಯೆಹೋವ ದೇವರು ಆ ದಿವಸದಲ್ಲಿ, ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು, ಅವರು ಕಿರೀಟದ ರತ್ನಗಳಂತೆ ಆತನ ದೇಶದಲ್ಲಿ ಹೊಳೆಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸ್ವಜನರನು ದೇವ ಸರ್ವೇಶ್ವರ ಕಾಪಾಡುವನು ಮೇಷಪಾಲನಂತೆ ನಾಡಿನೊಳು ಥಳಥಳಿಸುವರವರು ಕಿರೀಟದ ರತ್ನಗಳಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ಸಮಯಗಳಲ್ಲಿ ದೇವರಾದ ಯೆಹೋವನು, ಕುರುಬನು ತನ್ನ ಕುರಿಗಳನ್ನು ಸಂರಕ್ಷಿಸುವ ರೀತಿಯಲ್ಲಿ ತನ್ನ ಜನರನ್ನು ರಕ್ಷಿಸುವನು. ಅವರು ಆತನಿಗೆ ಅಮೂಲ್ಯರಾಗಿರುವರು. ಆತನ ಕೈಯಲ್ಲಿ ಹೊಳೆಯುವ ಆಭರಣದಂತಿರುವರು. ಅಧ್ಯಾಯವನ್ನು ನೋಡಿ |