Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:3 - ಕನ್ನಡ ಸಮಕಾಲಿಕ ಅನುವಾದ

3 ಟೈರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು, ಬೆಳ್ಳಿಯನ್ನು ಧೂಳಿನಂತೆಯೂ, ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ, ಬಂಗಾರವನ್ನು ಬೀದಿಯ ಬದಿಯ ಕಸದ ರಾಶಿಯಂತೆ ಮಾಡಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಟೈರ್ ಪಟ್ಟಣವು ತನ್ನ ಸುತ್ತಲೂ ಗೋಡೆಯನ್ನು ಕಟ್ಟಿಕೊಂಡಿದೆ. ಬೆಳ್ಳಿಯನ್ನು ಮಣ್ಣುಮಸಿಯಂತೆ, ಬಂಗಾರವನ್ನು ಕಡ್ಡಿಕಸದಂತೆ ರಾಶಿಮಾಡಿಟ್ಟುಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ದೂಳಿನಂತೆಯೂ ಬಂಗಾರವನ್ನು ಬೀದಿಯ ಬದಿಯಂತೆಯೂ ರಾಶಿರಾಶಿ ಮಾಡಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತೂರ್ ಒಂದು ಕೋಟೆಯಂತೆ ಕಟ್ಟಲ್ಪಟ್ಟಿದೆ. ಅಲ್ಲಿರುವ ಜನರು ಬೆಳ್ಳಿಯನ್ನು ಧೂಳಿನಂತೆ ಸಂಗ್ರಹಿಸಿರುತ್ತಾರೆ. ಬಂಗಾರವಂತೂ ಮಣ್ಣಿನ ತರಹ ಸಾಮಾನ್ಯವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:3
16 ತಿಳಿವುಗಳ ಹೋಲಿಕೆ  

ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ. ನಿನ್ನ ಅಪಾರವಾದ ಐಶ್ವರ್ಯದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದೆ.


ದುಷ್ಟರು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ, ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿಕೊಂಡಿದ್ದರೂ,


ಅವರು ಟೈರಿನ ಭದ್ರಸ್ಥಳಕ್ಕೂ, ಹಿವ್ವಿಯರ, ಕಾನಾನ್ಯರ ಸಕಲ ಪಟ್ಟಣಗಳಿಗೂ, ಅಲ್ಲಿಂದ ಯೆಹೂದದ ದಕ್ಷಿಣಕ್ಕೂ, ಬೇರ್ಷೆಬಕ್ಕೂ ಬಂದರು.


ಅಲ್ಲಿಂದ ರಾಮಾ, ಟೈರ್ ಎಂಬ ಕೋಟೆಪಟ್ಟಣದವರೆಗೂ ಹೋಗುತ್ತದೆ. ಅಲ್ಲಿಂದ ಹೋಸಾ ಕಡೆ ಹೊರಟು ಮೆಡಿಟೆರಿಯನ್ ಸಮುದ್ರದ ಬಳಿ ಅಕ್ಜೀಬ್ ಮೇರೆಯ ಅಂಚಿಗೆ ಮುಗಿಯುತ್ತದೆ.


ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರಾದ ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ಟೈರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?


ನೀನು ಬಂಗಾರವನ್ನು ಧೂಳಿನಂತೆಯೂ, ಓಫೀರ್ ದೇಶದ ಬಂಗಾರವನ್ನು ನದಿಯ ಕಲ್ಲುಗಳಂತೆಯೂ ಎಣಿಸು.


ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.


ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ, ಆದುದರಿಂದ ಅವನಲ್ಲಿ ಬೆಳ್ಳಿಯ ವಸ್ತು ಒಂದಾದರೂ ಕಾಣಿಸಲಿಲ್ಲ.


ಯೆಹೋವ ದೇವರು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಅವರು ವ್ಯಾಪಾರದ ಪಟ್ಟಣವನ್ನು ಕಾನಾನಿನ ದುರ್ಗಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾರೆ.


ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಒಡೆದು, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ ನಿನ್ನ ಮರಗಳನ್ನೂ ಧೂಳನ್ನೂ ನೀರಿನಲ್ಲಿ ಹಾಕುವರು.


ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಆಗಾಧಜಲದಲ್ಲಿ ಮುಳುಗಿ ಹೋದರು.


ಬಂಗಾರವನ್ನು ಕೂಡಿಸಿಟ್ಟು, ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡ ವಿಶ್ರಮಿಸಿಕೊಳ್ಳುತ್ತಿದ್ದೆನು.


ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಿನ್ನ ನಾವಿಕರೂ ನಿನ್ನ ಅಂಬಿಗರೂ ನಿನ್ನ ಒಡಕುಗಳನ್ನು ಮುಚ್ಚುವವರೂ ನಿನ್ನ ವ್ಯಾಪಾರಿಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು