ಜೆಕರ್ಯ 9:9 - ಕನ್ನಡ ಸಮಕಾಲಿಕ ಅನುವಾದ9 ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು. ಅಧ್ಯಾಯವನ್ನು ನೋಡಿ |