Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:10 - ಕನ್ನಡ ಸಮಕಾಲಿಕ ಅನುವಾದ

10 ಮಗನೇ, ಪಾಪಿಗಳು ನಿನ್ನನ್ನು ಸೆಳೆದರೆ ನೀನು ಒಪ್ಪಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮಗನೇ, ಪಾಪಿಗಳ ಪ್ರೇರಣೆಗೆ ಒಪ್ಪಿಗೆ ಕೊಡಲೇಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಮಗನೇ, ಪಾಪ ಮಾಡಬಯಸುವವರು ನಿನಗೆ ದುಷ್ಪ್ರೇರಣೆ ಮಾಡಿದರೆ ಅವರನ್ನು ಹಿಂಬಾಲಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:10
14 ತಿಳಿವುಗಳ ಹೋಲಿಕೆ  

ನಿಷ್ಪ್ರಯೋಜಕವಾದ ಕತ್ತಲೆಯ ಕಾರ್ಯಗಳೊಂದಿಗೆ ಪಾಲುಗಾರರಾಗಿರದೆ ಅವುಗಳನ್ನು ಬೆಳಕಿಗೆ ತನ್ನಿರಿ.


ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುತ್ತಾನೆ.


ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಿಗಳ ಮಾರ್ಗದಲ್ಲಿ ನಿಲ್ಲದೆ, ಅಪಹಾಸ್ಯಗಾರರ ಕೂಟದಲ್ಲಿ ಕೂತುಕೊಳ್ಳದೆ,


ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.


ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ನೀವು ಅವರಿಗೆ ಸಮ್ಮತಿಸಬಾರದು. ಅವರ ಮಾತನ್ನು ಕೇಳಬಾರದು. ನೀವು ಅವರನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.


ಕಳ್ಳನನ್ನು ಕಂಡರೆ ಅವನೊಂದಿಗೆ ಸೇರಿಕೊಳ್ಳುತ್ತೀರಿ. ವ್ಯಭಿಚಾರಿಗಳ ಸಂಗಡ ನಿಮಗೆ ಪಾಲು ಇದೆ.


ಚಾಡಿಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ; ಆದಕಾರಣ ಹರಟೆ ಹೊಡೆಯುವವನ ಸಹವಾಸ ಮಾಡಬೇಡ.


ಬನ್ನಿರಿ, ಈಗ ಅವನನ್ನು ಕೊಂದು, ಯಾವುದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ. ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ಏಕೆಂದರೆ ಅವರ ಹೃದಯವು ಹಿಂಸೆಯನ್ನು ಯೋಜಿಸುತ್ತದೆ; ಅವರ ತುಟಿಗಳು ಹಾನಿಯನ್ನು ಪ್ರಸ್ತಾಪಿಸುತ್ತವೆ.


ನೀತಿಯಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈಚಾಚಿದೆ. ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ಕಾಣದಂತೆ ಕಣ್ಣು ಮುಚ್ಚಿಕೊಳ್ಳುವವರೇ ಉನ್ನತ ಸ್ಥಳದಲ್ಲಿ ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು