Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:19 - ಕನ್ನಡ ಸಮಕಾಲಿಕ ಅನುವಾದ

19 ಅಕ್ರಮ ಲಾಭದ ಬೆನ್ನಟ್ಟಿ ಹೋಗುವವರೆಲ್ಲರ ಗತಿ ಇದೇ. ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸೂರೆ ಮಾಡುವವರೆಲ್ಲರ ಪಾಡು ಇದುವೆ; ಕೊಳ್ಳೆಯು, ಕೊಳ್ಳೆಗಾರರ ಪ್ರಾಣವನ್ನೇ ಕೊಳ್ಳೆಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸೂರೆಮಾಡುವವರೆಲ್ಲರ ದಾರಿಯೂ ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದುರಾಶೆಯುಳ್ಳವರು ತಾವು ದೋಚಿಕೊಳ್ಳುವ ವಸ್ತುಗಳಿಂದಲೇ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:19
21 ತಿಳಿವುಗಳ ಹೋಲಿಕೆ  

ದುರಾಶೆಯುಳ್ಳವನು ತನ್ನ ಕುಟುಂಬವನ್ನು ಬಾಧಿಸುತ್ತಾನೆ. ಲಂಚವನ್ನು ಹಗೆಮಾಡುವವನು ಬದುಕುವನು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಅನ್ಯಾಯದ ಲಾಭದಿಂದ ತನ್ನ ನಿವಾಸ ಕಟ್ಟಿಕೊಳ್ಳುವವನಿಗೂ, ತನ್ನ ಗೂಡನ್ನು ಉನ್ನತದಲ್ಲಿಡುವವನಿಗೂ, ನಾಶದ ಹಿಡಿತದಿಂದ ತಪ್ಪಿಸಿಕೊಳ್ಳಬಯಸುವವನಿಗೂ ಕಷ್ಟ!


ಸೂರ್ಯನ ಕೆಳಗೆ ವ್ಯಸನಕರವಾದ ಕೇಡನ್ನು ನಾನು ನೋಡಿದೆ. ಅದು ಯಾವುದೆಂದರೆ: ಸಂಗ್ರಹಿಸಿದ ಆಸ್ತಿ ಯಜಮಾನನಿಗೆ ಹಾನಿ.


ಅವನು ಮದ್ಯಪಾನ ಮಾಡುವವನಾಗಿರಬಾರದು, ಹೊಡೆದಾಡುವವನಾಗಿರಬಾರದು. ಆದರೆ ಸಾತ್ವಿಕನೂ ಕುತರ್ಕ ಮಾಡದವನೂ ಹಣದಾಶೆಯಿಲ್ಲದವನೂ ಆಗಿರಬೇಕು.


ಕೂಲಿಕೊಡದೆ ಭೂಮಿಯ ಫಲವನ್ನು ನಾನು ತಿಂದಿದ್ದರೆ, ಅದರ ಯಜಮಾನರ ಪ್ರಾಣಹಾನಿಗೆ ಕಾರಣನಾಗಿದ್ದರೆ,


ಜ್ಞಾನವೆಂಬಾಕೆಯು ಬೀದಿಯಲ್ಲಿ ಕೂಗುತ್ತಾಳೆ, ಬಹಿರಂಗ ಸ್ಥಳಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.


ನಾನು ಕೊಳ್ಳೆಯಲ್ಲಿ ಒಂದು ಶಿನಾರ್ ದೇಶದ ಒಳ್ಳೆಯ ವಸ್ತ್ರವನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಒಂದು ಬಂಗಾರದ ಗಟ್ಟಿಯನ್ನು ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ, ಬೆಳ್ಳಿಯೂ ಅದರ ಕೆಳಗೆ ಇದೆ,” ಎಂದನು.


ಆಗ ಯೆಹೋಶುವನು ಅವನಿಗೆ, “ನೀನು ನಮ್ಮನ್ನು ಸಂಕಷ್ಟಪಡಿಸಿದ್ದೇನು? ಇಂದು ಯೆಹೋವ ದೇವರು ನಿನ್ನನ್ನು ಸಂಕಷ್ಟಪಡಿಸುವರು,” ಎಂದನು. ಆಗ ಇಸ್ರಾಯೇಲರೆಲ್ಲರೂ ಅವನ ಮೇಲೆ ಕಲ್ಲೆಸೆದರು. ಕಲ್ಲೆಸೆದ ತರುವಾಯ ಉಳಿದವರನ್ನು ಬೆಂಕಿಯಿಂದ ಸುಟ್ಟುಬಿಟ್ಟು,


ಅಂಥವರ ಕೇಡು ಅವರ ಮೇಲೆಯೇ ತಿರುಗುವುದು; ಅವರ ತಲೆಯ ಮೇಲೆ ಅವರ ಬಲಾತ್ಕಾರವೇ ಇಳಿಯುವುದು.


ಕಳ್ಳರ ಸಹವಾಸ ಮಾಡುವವರು ತಮಗೆ ತಾವೇ ಶತ್ರುಗಳು. ಅವರು ಆಣೆ ಇಟ್ಟರೂ ಅವರಲ್ಲಿ ಬದಲಾವಣೆ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು