Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:20 - ಕನ್ನಡ ಸಮಕಾಲಿಕ ಅನುವಾದ

20 ಜ್ಞಾನವೆಂಬಾಕೆಯು ಬೀದಿಯಲ್ಲಿ ಕೂಗುತ್ತಾಳೆ, ಬಹಿರಂಗ ಸ್ಥಳಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ಧ್ವನಿಮಾಡುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಜ್ಞಾನವೆಂಬಾಕೆ ಹಾದಿಗಳಲ್ಲಿ ಕೂಗುತ್ತಾ ಇದ್ದಾಳೆ; ಬೀದಿಚೌಕಗಳಲ್ಲಿ ದನಿಗೈಯುತ್ತಾ ಇದ್ದಾಳೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ದನಿಗೈಯುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜ್ಞಾನವು ಬೀದಿಗಳಲ್ಲಿ ಕೂಗುವ ಸ್ತ್ರೀಯಂತಿದೆ. ಆಕೆಯು ಬಹಿರಂಗ ಸ್ಥಳಗಳಲ್ಲಿ ಕೂಗಿ ಕರೆಯುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:20
11 ತಿಳಿವುಗಳ ಹೋಲಿಕೆ  

ಆಕೆಯು ತನ್ನ ದಾಸಿಯರನ್ನು ಕಳುಹಿಸುತ್ತಾಳೆ; ಆಕೆಯು ಪಟ್ಟಣದ ಅತಿ ಉನ್ನತ ಸ್ಥಳದಿಂದ ಕೂಗುತ್ತಾಳೆ,


ಏಕೆಂದರೆ, ಜ್ಞಾನ ಮತ್ತು ತಿಳುವಳಿಕೆಯ ಎಲ್ಲಾ ನಿಕ್ಷೇಪಗಳೂ ಕ್ರಿಸ್ತ ಯೇಸುವಿನಲ್ಲಿಯೇ ಮರೆಯಾಗಿವೆ.


ಆದರೆ ದೇವರಿಂದ ರಕ್ಷಣೆಗೆ ಕರೆಹೊಂದಿದ ಯೆಹೂದ್ಯರಿಗಾಗಲಿ, ಯೆಹೂದ್ಯರಲ್ಲದವರಿಗಾಗಲಿ ಕ್ರಿಸ್ತ ಯೇಸು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾರೆ.


ಈ ಕಾರಣದಿಂದ, ದೇವರ ಜ್ಞಾನವು ಸಹ ಹೇಳಿರುವುದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸೆಪಡಿಸುವರು.’


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ಯೇಸು ತಮ್ಮ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಅವರಿಗೆ ಬೋಧನೆ ಮಾಡಲು ಪ್ರಾರಂಭಿಸಲು, ಅವರು ವಿಸ್ಮಯಗೊಂಡು, “ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದವು?


ಹಬ್ಬದ ಆ ಮಹಾದಿವಸವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು, “ಯಾರಿಗಾದರೂ ಬಾಯಾರಿಕೆಯಾಗಿದ್ದರೆ ಅವರು ನನ್ನ ಬಳಿಗೆ ಬಂದು ಕುಡಿಯಲಿ.


ಜನಭರಿತ ಬೀದಿಗಳಲ್ಲಿ ಆಕೆ ಕರೆಯುತ್ತಾಳೆ, ಪಟ್ಟಣದ ಹೆಬ್ಬಾಗಿಲುಗಳಲ್ಲಿ ಹೀಗೆಂದು ಭಾಷಣ ಮಾಡುತ್ತಾಳೆ:


ಮುರಿದ ಪಾತ್ರೆಗಳ ಪ್ರವೇಶದ್ವಾರದ ಮೂಲಕ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.


ಜ್ಞಾನ ಎಂಬಾಕೆಯು ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬಗಳನ್ನು ಕೆತ್ತಿಸಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು