Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:30 - ಕನ್ನಡ ಸಮಕಾಲಿಕ ಅನುವಾದ

30 ನನ್ನ ಬುದ್ಧಿವಾದವನ್ನು ಸ್ವೀಕರಿಸದೆ, ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನನ್ನ ಆಲೋಚನೆಯನ್ನು ಅವರು ಕೇಳಲಿಲ್ಲ, ನನ್ನ ಪ್ರತಿಯೊಂದು ಎಚ್ಚರಿಕೆಯ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನನ್ನ ಆಲೋಚನೆಯನ್ನು ಕೇಳಲೊಲ್ಲದೆ ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನೀವು ನನ್ನ ಗದರಿಕೆಯ ಮಾತುಗಳನ್ನು ತಿರಸ್ಕರಿಸಿದಿರಿ. ನಾನು ನಿಮಗೆ ಸರಿಯಾದ ದಾರಿಯನ್ನು ತೋರಿಸಿದಾಗ ನೀವು ನನಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:30
9 ತಿಳಿವುಗಳ ಹೋಲಿಕೆ  

ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ; ನನ್ನ ಗದರಿಕೆಯನ್ನು ನೀವು ಬೇಡವೆಂದು ತಳ್ಳಿಬಿಟ್ಟಿದ್ದರಿಂದ


“ಆದರೆ ನನ್ನ ಜನರು ನನ್ನ ಮಾತನ್ನು ಕೇಳಲಿಲ್ಲ; ಇಸ್ರಾಯೇಲು ನನಗೆ ಅಧೀನವಾಗಲಿಲ್ಲ.


ಜ್ಞಾನಿಗಳು ನಾಚಿಕೊಂಡಿದ್ದಾರೆ. ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವ ದೇವರ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಯಾವ ಜ್ಞಾನವಿದೆ.


ನಾನು ನಿಮ್ಮ ಸೂತ್ರಗಳನ್ನು ಆರಿಸಿಕೊಂಡಿರುವುದರಿಂದ, ನಿಮ್ಮ ಕೈ ನನಗೆ ನೆರವಾಗಲಿ.


ನಿಮ್ಮ ಶಾಸನಗಳನ್ನು ನಿತ್ಯ ಸೊತ್ತಾಗಿ ತೆಗೆದುಕೊಂಡಿದ್ದೇನೆ; ಏಕೆಂದರೆ ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿದೆ.


ಆಗ ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿಯಿಂದ ಕೊಯ್ದು, ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರುಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟುಹೋಗುವವರೆಗೂ ಹಾಕಿಬಿಟ್ಟನು.


ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು.


ಆಗ ನೀನು, “ಶಿಸ್ತನ್ನು ನಾನು ಎಷ್ಟೋ ಹಗೆ ಮಾಡಿದೆ; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು