Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:6 - ಕನ್ನಡ ಸಮಕಾಲಿಕ ಅನುವಾದ

6 ಜ್ಞಾನೋಕ್ತಿಗಳನ್ನು, ಸಾಮ್ಯಗಳನ್ನು, ಜ್ಞಾನಿಗಳ ಮಾತು ಹಾಗೂ ಒಗಟುಗಳನ್ನು ಅರ್ಥಮಾಡಿಕೊಳ್ಳಲು ಇವು ಬರೆಯಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಗಾದೆಗಳನ್ನೂ ಗೂಢಾರ್ಥಗಳನ್ನೂ ಜ್ಞಾನಿಯ ನುಡಿ ಹಾಗು ಒಗಟುಗಳನ್ನೂ ತಿಳಿದುಕೊಳ್ಳಲು ಸಹ ಇವು ಸಾಧನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇವು ಗಾದೆ, ಸಾಮ, ಜ್ಞಾನಿಗಳ ನುಡಿ, ಒಗಟು ಇವುಗಳನ್ನು ತಿಳಿಯಲು ಸಾಧನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಅವರು ಗಾದೆಗಳನ್ನು, ಸಾಮತಿಗಳನ್ನು, ಜ್ಞಾನದ ನುಡಿಗಳನ್ನು ಮತ್ತು ಒಗಟುಗಳನ್ನು ಅರ್ಥಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:6
14 ತಿಳಿವುಗಳ ಹೋಲಿಕೆ  

ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು. ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.


ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯವನ್ನು ತಿಳಿದುಕೊಳ್ಳುವ ಜ್ಞಾನ ನಿಮಗೆ ಕೊಡಲಾಗಿದೆ. ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯದ ರೂಪದಲ್ಲಿ ಹೇಳಲಾಗಿದೆ.


ಆದರೆ ಗಟ್ಟಿಯಾದ ಆಹಾರವು, ತಮ್ಮ ಜ್ಞಾನೇಂದ್ರಿಯಗಳನ್ನು ಅಭ್ಯಾಸಿಸಿ, ತರಬೇತುಗೊಂಡದ್ದರಿಂದ ಒಳ್ಳೆಯದನ್ನು ಹಾಗೂ ಕೆಟ್ಟದ್ದನ್ನು ವಿವೇಚಿಸಿ ಪೂರ್ಣ ಬೆಳವಣಿಗೆ ಹೊಂದಿದವರಿಗೆ ಸೇರಿದ್ದಾಗಿದೆ.


ಸಾಮ್ಯಕ್ಕೆ ನನ್ನ ಕಿವಿಗೊಟ್ಟು ಒಗಟನ್ನು ಕಿನ್ನರಿಯಿಂದ ಬಿಚ್ಚುವೆನು.


ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗಿರುತ್ತವೆ. ಅವರು ಸಂಗ್ರಹಿಸಿದ ವಚನಗಳು ಒಬ್ಬ ಆತ್ಮಿಕ ಕುರುಬನಿಂದ ನೆಟ್ಟ ಮೊಳೆಗಳ ಹಾಗೆ ಕೊಡಲಾಗಿವೆ.


ನಾನು ಗೂಢವಾಗಿ ಅಲ್ಲ ಸ್ಪಷ್ಟವಾಗಿ, ಮುಖಾಮುಖಿಯಾಗಿ ಅಂದರೆ, ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವ ದೇವರ ರೂಪವನ್ನು ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?”


ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ವಿಷಯಗಳು ತಿಳಿಯುವುದಕ್ಕೆ ಕಷ್ಟವಾಗಿವೆ. ಪವಿತ್ರ ವೇದದ ಮಿಕ್ಕಾದ ಭಾಗಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ವಿದ್ಯಾಹೀನರೂ ಚಪಲಚಿತ್ತರೂ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.


ಇವು ಜ್ಞಾನಿಗಳ ಹೇಳಿಕೆಗಳಾಗಿವೆ: ನ್ಯಾಯ ವಿಚಾರಣೆಯಲ್ಲಿ ಪಕ್ಷಪಾತವು ಸರಿಯಲ್ಲ.


“ಅವರ ರಾಜ್ಯದ ಕಡೆಯ ಕಾಲದಲ್ಲಿ ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ, ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು