Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:23 - ಕನ್ನಡ ಸಮಕಾಲಿಕ ಅನುವಾದ

23 ಮೂರ್ಖನಿಗೆ ಕೇಡು ಮಾಡುವುದರಲ್ಲಿ ಆನಂದ; ಆದರೆ ತಿಳುವಳಿಕೆಯ ವ್ಯಕ್ತಿಯು ಜ್ಞಾನದಲ್ಲಿ ಸಂತೋಷಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವಿವೇಕಿಗೆ ಕುಯುಕ್ತಿ ವಿನೋದ ವಿವೇಕಿಗೆ ಜ್ಞಾನ ವಿನೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮೂರ್ಖನಿಗೆ ಕೆಡುಕುಮಾಡುವ ಚಟ; ಬುದ್ಧಿವಂತನಿಗೆ ಜ್ಞಾನಗಳಿಸುವ ಹಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವಿವೇಕಿಗೆ ಕುಯುಕ್ತಿ ವಿನೋದ; ವಿವೇಕಿಗೆ ಜ್ಞಾನ ವಿನೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವಿವೇಕಿಯು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸುತ್ತಾನೆ. ವಿವೇಕಿಯು ಜ್ಞಾನದಲ್ಲಿ ಸಂತೋಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:23
6 ತಿಳಿವುಗಳ ಹೋಲಿಕೆ  

ಬುದ್ಧಿಹೀನನು ಮೂರ್ಖತನದಲ್ಲಿ ಉಲ್ಲಾಸಿಸುವನು. ತಿಳುವಳಿಕೆಯನ್ನು ಹೊಂದಿರುವವನು ನೇರ ಮಾರ್ಗದಲ್ಲಿ ನಡೆಯುತ್ತಾನೆ.


ಬುದ್ಧಿಹೀನರು ಪಾಪಪರಿಹಾರವನ್ನು ಅಪಹಾಸ್ಯ ಮಾಡುವರು, ಆದರೆ ನೀತಿವಂತರಿಗೆ ದಯೆಯಿದೆ.


ಅವರು ಕೆಟ್ಟದ್ದನ್ನು ಮಾಡುವುದಕ್ಕೆ ಸಂತೋಷಿಸುತ್ತಾರೆ. ಕೇಡಿನ ವಕ್ರತನದಲ್ಲಿ ಆನಂದಿಸುತ್ತಾರೆ.


ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.


ಹೃದಯದಲ್ಲಿ ಜ್ಞಾನವಂತರು ವಿವೇಚನೆಯುಳ್ಳವರು ಎಂದು ಕರೆಯಲಾಗುವರು. ತುಟಿಗಳ ಮಾಧುರ್ಯ ಮನವೊಲಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು