Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:7 - ಕನ್ನಡ ಸಮಕಾಲಿಕ ಅನುವಾದ

7 ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; ಆದರೆ ದುಷ್ಟನ ಹೆಸರು ಕೊಳೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ; ದುಷ್ಟರ ನಾಮವು ನಿರ್ನಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀತಿವಂತರ ನೆನಪು ಆಶೀರ್ವಾದದಾಯಕ. ಕೆಡುಕರಾದರೋ ಬಹುಬೇಗನೆ ಮರೆಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:7
20 ತಿಳಿವುಗಳ ಹೋಲಿಕೆ  

ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು; ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು.


ದೇವರು ತಮ್ಮ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾರೆ. ಇಂದಿನಿಂದ ತಲತಲಾಂತರದವರೆಲ್ಲರೂ ನನ್ನನ್ನು ಧನ್ಯಳೆಂದು ಕರೆಯುವರು,


ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು.


ಅವನ ಸಂತಾನವು ಮುಗಿದು ಹೋಗಲಿ; ಎರಡನೆಯ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.


ಅವನು ದೇವರಿಗೋಸ್ಕರವಾಗಿಯೂ, ಆತನ ಆಲಯಕ್ಕೋಸ್ಕರವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೆಯದನ್ನು ಮಾಡಿದ್ದರಿಂದ, ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅರಸರ ಬಳಿಯಲ್ಲಿ ಹೂಳಿಟ್ಟರು.


ಅವು ಯಾವಾಗಲೂ ಯೆಹೋವ ದೇವರ ಮುಂದೆ ಇರಲಿ; ದೇವರು ಅವರ ನೆನಪನ್ನು ಭೂಮಿಯೊಳಗಿಂದ ತೆಗೆದುಬಿಡಲಿ.


ಅವನ ಸ್ಮರಣೆಯು ಭೂಮಿಯಿಂದ ಅಳಿದುಹೋಗುವುದು; ನಾಡಿನಲ್ಲಿ ಅವನ ಹೆಸರು ಇಲ್ಲದೆ ಹೋಗುವುದು.


ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.’ ”


ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಎಂದಿಗೂ ಬೆಳಕು ಆರಿಹೋಗದ ಹಾಗೆ, ಅವನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು.


ಇದಲ್ಲದೆ ದುರ್ಜನರು ಸತ್ತು ಸಮಾಧಿಯಾಗುವುದನ್ನೂ ನಾನು ನೋಡಿದ್ದೇನೆ. ಆದರೆ ಜನರು ಪರಿಶುದ್ಧ ಸ್ಥಳಕ್ಕೆ ಹೋಗಿ ಬಂದ ಆ ದುಷ್ಟರನ್ನು ಅವರಿದ್ದ ಪಟ್ಟಣದಲ್ಲಿ ಹೊಗಳುತ್ತಾರೆ. ಇದೂ ಸಹ ನಿರರ್ಥಕವಾದದ್ದು.


ಕೊನೆಗೆ ಜನರು ದುಷ್ಟರ ಕಡೆಗೆ ಅಪಹಾಸ್ಯದಿಂದ ಚಪ್ಪಾಳೆ ತಟ್ಟುವರು; ಅನಂತರ ಅವರ ಸ್ಥಳದೊಳಗಿಂದ ಅವರನ್ನು ಹೊರಹಾಕುವರು.”


ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ.


ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದುದರಲ್ಲಿ ಅವನನ್ನು ಹೂಳಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ, ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು.


ಹೆತ್ತ ಕರುಳು ಅಂಥವರನ್ನು ಮರೆತು ಬಿಡುವುದು; ಹುಳವು ಅಂಥವರ ಹೆಣವನ್ನು ರುಚಿಯಿಂದ ತಿಂದುಬಿಡುವುದು; ಇನ್ನು ಅವರ ನೆನಪು ಇರುವುದಿಲ್ಲ; ಮರದ ಹಾಗೆ ದುಷ್ಟರು ಮುರಿದುಹೋಗುವರು.


ಆದರೆ ಕೆಟ್ಟದ್ದನ್ನು ಮಾಡುವವರಿಗೆ ಯೆಹೋವ ದೇವರು ವಿಮುಖರಾಗಿದ್ದಾರೆ, ಅಂಥವರ ಹೆಸರನ್ನು ಭೂಮಿಯೊಳಗಿಂದ ತೆಗೆದುಹಾಕುವರು.


ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ; ಬೆಳ್ಳಿಬಂಗಾರಕ್ಕಿಂತಲೂ ಗೌರವದಿಂದಿರುವುದು ಉತ್ತಮ.


“ಅವರಿಗೆ ವಿರುದ್ಧವಾಗಿ ಏಳುತ್ತೇನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಬಾಬಿಲೋನಿನಿಂದ ಆಕೆಯ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಮಕ್ಕಳನ್ನೂ ಅದರ ಸಂತತಿಯವರನ್ನೂ ನಿರ್ಮೂಲ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನೀತಿವಂತರ ಕೂಗನ್ನು ಯೆಹೋವ ದೇವರು ಕೇಳಿ, ಅವರನ್ನು ಎಲ್ಲಾ ಇಕ್ಕಟ್ಟುಗಳೊಳಗಿಂದ ಬಿಡಿಸುತ್ತಾರೆ.


“ಅವನು ಸತ್ತು ಅವನ ಹೆಸರು ನಾಶವಾಗುವುದು ಯಾವಾಗ?” ಎಂದು ನನ್ನ ಶತ್ರುಗಳು ನನ್ನ ಕೇಡನ್ನು ಬಯಸಿ ಮಾತನಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು