ಜ್ಞಾನೋಕ್ತಿಗಳು 11:10 - ಕನ್ನಡ ಸಮಕಾಲಿಕ ಅನುವಾದ10 ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ, ಜಯೋತ್ಸವ ಉಂಟಾಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಜ್ಜನರು ಸುಖಿಗಳಾದರೆ ಊರಿಗೆ ಉಲ್ಲಾಸ; ದುರ್ಜನರು ಹಾಳಾದರೆ ಮಾಡುವರು ಜಯಘೋಷ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ; ದುರ್ಜನರು ಹಾಳಾದರೆ ಜಯಘೋಷ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸಜ್ಜನರಿಗೆ ಜಯವಾದರೆ ನಗರಕ್ಕೆಲ್ಲ ಸಂತಸ. ಕೆಡುಕರು ನಾಶವಾದರೆ ಜನರು ಜಯಘೋಷ ಮಾಡುವರು. ಅಧ್ಯಾಯವನ್ನು ನೋಡಿ |
ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.