Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:16 - ಕನ್ನಡ ಸಮಕಾಲಿಕ ಅನುವಾದ

16 ದಯೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಸಂಪಾದಿಸಿಕೊಳ್ಳುತ್ತಾಳೆ, ನಿಷ್ಕರುಣ ವ್ಯಕ್ತಿ ಸಂಪತ್ತನ್ನು ಮಾತ್ರ ಪಡೆದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಯಾಳುವಾದ ಹೆಂಗಸು ಗೌರವವನ್ನು ಪಡೆಯುವಳು, ಬಲಾತ್ಕಾರಿಗಳು ಧನವನ್ನು ಮಾತ್ರ ಕೂಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸದ್ಗುಣಸ್ತ್ರೀ ಕಾಪಾಡಿಕೊಳ್ಳುತ್ತಾಳೆ ಸನ್ಮಾನವನ್ನು; ಬಲವಂತವ್ಯಕ್ತಿ ಕಾಪಾಡಿಕೊಳ್ಳುತ್ತಾನೆ ಆಸ್ತಿಪಾಸ್ತಿಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದಯಾಳುವಾದ ಹೆಂಗಸು ಮಾನವನ್ನು ಪಡೆಯುವಳು; ಬಲಾತ್ಕಾರಿಗಳು ಧನವನ್ನು ಮಾತ್ರ ಆರ್ಜಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದಯೆಯುಳ್ಳ ಸ್ತ್ರೀಯು ಗೌರವವನ್ನು ಪಡೆಯುವಳು. ಬಲಾತ್ಕಾರಿಗಳಾದ ಗಂಡಸರು ಕೇವಲ ಹಣವನ್ನು ಗಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:16
18 ತಿಳಿವುಗಳ ಹೋಲಿಕೆ  

ಆದರೆ ಬೇಕಾದದ್ದು ಕೆಲವೇ, ಅವಶ್ಯವಾಗಿರುವುದು. ಮರಿಯಳು ಆ ಉತ್ತಮ ಭಾಗವನ್ನೇ ಆರಿಸಿಕೊಂಡಿದ್ದಾಳೆ ಅದು ಆಕೆಯಿಂದ ಯಾರೂ ತೆಗೆಯಲಾಗುವುದಿಲ್ಲ,” ಎಂದು ಹೇಳಿದರು.


ಅವರೊಂದಿಗೆ ಪೇತ್ರನು ಹೊರಟನು. ಅವನು ಬಂದಾಗ ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರು ಅವನ ಸುತ್ತಲೂ ನಿಂತುಕೊಂಡು ದೊರ್ಕಳು ಜೀವದಿಂದ ಇದ್ದಾಗ ಆಕೆ ಸಿದ್ಧಪಡಿಸಿದ ನಿಲುವಂಗಿಗಳನ್ನು ಇತರ ಬಟ್ಟೆಗಳನ್ನು ಅವನಿಗೆ ತೋರಿಸುತ್ತಾ ಕಣ್ಣೀರಿಟ್ಟರು.


ಸಭಾಹಿರಿಯನಾದ ನಾನು, ನಮ್ಮಲ್ಲಿ ವಾಸಿಸುವ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿ ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ


ಹೆರೋದನ ಅರಮನೆಯ ಗೃಹ ನಿರ್ವಾಹಕನಾದ ಕೂಜನ ಪತ್ನಿ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕರು ತಮ್ಮ ಆಸ್ತಿಯಿಂದ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರಮಾಡುತ್ತಿದ್ದರು.


ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು.


ಆದರೆ ಈ ಒಳಸಂಚು ಅರಸನಿಗೆ ತಿಳಿದುಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವಂತೆ ಅರಸನು ಆಜ್ಞೆಯನ್ನು ಹೊರಡಿಸಿದನು. ಅದರೊಂದಿಗೆ ಅವನ ಮಕ್ಕಳನ್ನೂ ಗಲ್ಲಿಗೇರಿಸಲು ಅರಸನು ಆಜ್ಞಾಪಿಸಿದ್ದನು;


ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆಗಳು.


ಆಕೆಯ ಮಕ್ಕಳು ಎದ್ದು, ಆಕೆಯನ್ನು ಧನ್ಯಳೆಂದು ಕರೆಯುವರು. ಆಕೆಯ ಪತಿಯು ಸಹ ಆಕೆಯನ್ನು,


ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನು,” ಎಂದು ಹೇಳಿದರು.


ಅಷ್ಡೋದಿನ ಕೋಟೆಗಳಲ್ಲಿ ಮತ್ತು ಈಜಿಪ್ಟ್ ದೇಶದ ಕೋಟೆಗಳಲ್ಲಿ ಹೀಗೆ ಸಾರಿ ಹೇಳಿರಿ: “ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು, ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರೊಳಗಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.”


“ತಮ್ಮ ಕೋಟೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರಿಗೆ, ನ್ಯಾಯ ನೀತಿಯನ್ನು ಮಾಡುವುದಕ್ಕೆ ತಿಳಿಯುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು