Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:18 - ಕನ್ನಡ ಸಮಕಾಲಿಕ ಅನುವಾದ

18 ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ, ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹವಾದ ಬಹುಮಾನವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದುರುಳನು ಪಡೆವ ಸಂಬಳ ಜೊಳ್ಳು ಸಂಬಳ; ನೀತಿಯನ್ನು ಬಿತ್ತುವವನು ಪಡೆವನು ಸತ್ಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಧರ್ಮಿಯ ಸಂಬಳವು ಜೊಳ್ಳು; ಧರ್ಮವನ್ನು ಬಿತ್ತುವವನ ಲಾಭವು ಗಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಕೆಡುಕನು ತಾತ್ಕಾಲಿಕವಾದ ಲಾಭವನ್ನು ಮಾಡಿಕೊಳ್ಳುತ್ತಾನೆ. ಆದರೆ ನೀತಿವಂತನು ಯೋಗ್ಯವಾದ ಪ್ರತಿಫಲವನ್ನು ಹೊಂದಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:18
15 ತಿಳಿವುಗಳ ಹೋಲಿಕೆ  

ಗುಂಡಿಯನ್ನು ಅಗೆಯುವವನೇ ಅದರಲ್ಲಿ ಬೀಳುವನು. ಗೋಡೆಯನ್ನು ಒಡೆಯುವವನನ್ನು ಹಾವು ಕಡಿಯುವುದು.


ಸಮಾಧಾನ ಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುತ್ತಾರೆ.


ಕೆಟ್ಟತನವನ್ನು ಬಿತ್ತುವವನು ಕೇಡನ್ನು ಕೊಯ್ಯುವನು; ಅವನ ಕೋಪದ ಬೆತ್ತವು ಮುರಿದು ಹೋಗುವುದು.


ಈ ಜನರು ಒಳಸಂಚು ಮಾಡುವುದು ತಮ್ಮ ಸ್ವಂತ ರಕ್ತಕ್ಕೆ. ಅವರು ಮಾಡುವ ದುರಾಲೋಚನೆ ಅವರನ್ನೇ ನಾಶಮಾಡುವುದು.


ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ.


ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು.


ಕೊಯ್ಯುವವನು ಕೂಲಿಯನ್ನು ಪಡೆದು ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳುತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಿಸುವರು.


ಆದ್ದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದರು. ಇದಲ್ಲದೆ ಇಸ್ರಾಯೇಲರು ಸಂಖ್ಯೆಯಲ್ಲೂ ಹೆಚ್ಚಾಗಿ ಬಹು ಬಲಗೊಂಡರು.


ನೀತಿವಂತರ ದುಡಿತವು ಜೀವವಾಗುವುದು; ಆದರೆ, ದುಷ್ಟರ ಆದಾಯವು ಪಾಪ ಹಾಗು ಮರಣ.


ಅವರ ಹೃದಯವು ವಂಚಕವಾದದ್ದು. ಈಗ ಅವರು ಅಪರಾಧಗಳನ್ನು ಹೊರಬೇಕು. ಯೆಹೋವ ದೇವರು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು