Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:21 - ಕನ್ನಡ ಸಮಕಾಲಿಕ ಅನುವಾದ

21 ದುಷ್ಟನಿಗೆ ಶಿಕ್ಷೆ ತಪ್ಪುವುದಿಲ್ಲ; ನೀತಿವಂತರ ವಂಶವು ಬಿಡುಗಡೆ ಹೊಂದುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದುಷ್ಟನಿಗೆ ದಂಡನೆ ಕಟ್ಟಿಟ್ಟ ಬುತ್ತಿ; ಶಿಷ್ಟ ಸಂತಾನಕ್ಕೆ ಸಿಗುವುದು ಮುಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದುಷ್ಟನಿಗೆ ದಂಡನೆ ಖಂಡಿತ; ಶಿಷ್ಟವಂಶಕ್ಕೆ ರಕ್ಷಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದುಷ್ಟರಿಗೆ ದಂಡನೆ ಖಂಡಿತ. ಶಿಷ್ಟರಿಗೆ ಬಿಡುಗಡೆ ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:21
15 ತಿಳಿವುಗಳ ಹೋಲಿಕೆ  

ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.


ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.


ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಯೆಹೋವ ದೇವರಿಗೆ ಅಸಹ್ಯ. ದುಷ್ಟನಿಗೆ ಶಿಕ್ಷೆಯು ತಪ್ಪುವುದಿಲ್ಲ.


ಅವರು ಯಾವಾಗಲೂ ಧಾರಾಳವಾಗಿ ಸಾಲ ಕೊಡುತ್ತಾರೆ; ನೀತಿವಂತನ ಸಂತತಿಯವರು ಆಶೀರ್ವಾದ ಹೊಂದುವರು.


ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ.


“ಕೆಟ್ಟದ್ದನ್ನು ಮಾಡುವವರು ಬಹುಮಂದಿ ಆದರೂ ನೀವು ಅವರನ್ನು ಹಿಂಬಾಲಿಸಬೇಡ. ಬಹುಮಂದಿಯೊಂದಿಗೆ ನ್ಯಾಯಕ್ಕೆ ವಿರುದ್ಧವಾಗಿ ವ್ಯಾಜ್ಯದಲ್ಲಿ ಸಾಕ್ಷಿಕೊಡಬೇಡ.


ರೌದ್ರವು ನನ್ನಲ್ಲಿ ಇಲ್ಲ. ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ, ನಾನು ಅವುಗಳನ್ನು ಹಾದು ಹೋಗಿ, ಅವುಗಳನ್ನು ಒಟ್ಟಿಗೆ ಸುಡುವೆನು.


ವಕ್ರ ಹೃದಯವುಳ್ಳವರು ಯೆಹೋವ ದೇವರಿಗೆ ಅಸಹ್ಯವಾದವರು, ಆದರೆ, ಸನ್ಮಾರ್ಗದಲ್ಲಿ ಯಥಾರ್ಥವಾಗಿ ಇರುವವರಲ್ಲಿ ಅವರು ಆನಂದಿಸುತ್ತಾರೆ.


ಹಂದಿಯ ಮೂಗಿಗೆ ಬಂಗಾರದ ಮೂಗುತಿಯು ಹೇಗೋ, ಹಾಗೆಯೇ ವಿವೇಕವಿಲ್ಲದ ಸ್ತ್ರೀಗೆ ಸೌಂದರ್ಯವು.


ಆಗ ತಮ್ಮ ಹೆಂಡತಿಯರು ಅನ್ಯ ದೇವತೆಗಳಿಗೆ ಧೂಪ ಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು:


ಸುಳ್ಳಿನ ವಿಷಯಗಳಿಂದ ನೀವು ದೂರವಿರಬೇಕು. ನಿರಪರಾಧಿ, ನೀತಿವಂತ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಬಾರದು. ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.


ಆದರೆ ಈಗ ನೀನು ದುಷ್ಟರಿಗೆ ಬರಬೇಕಾದ ತೀರ್ಪಿನಿಂದ ತುಂಬಿರುವೆ. ನ್ಯಾಯವಿಚಾರಣೆಯೂ, ತೀರ್ಪೂ ನಿನ್ನನ್ನು ಹಿಡಿದಿರುತ್ತವೆ.


ನೀತಿವಂತನಿಗೆ ಯಾವ ಕೇಡೂ ಸಂಭವಿಸದು, ಆದರೆ ದುಷ್ಟರು ಕೇಡಿನಿಂದ ತುಂಬಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು