Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:26 - ಕನ್ನಡ ಸಮಕಾಲಿಕ ಅನುವಾದ

26 ಧಾನ್ಯವನ್ನು ಬಚ್ಚಿಟ್ಟುಕೊಳ್ಳುವವನನ್ನು ಜನರು ಶಪಿಸುವರು; ಆದರೆ ಅದನ್ನು ಮಾರುವವನ ಮೇಲೆ ಆಶೀರ್ವಾದವು ನೆಲೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ, ಮಾರುವವನ ತಲೆಯ ಮೇಲೆ ಆಶೀರ್ವಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಧಾನ್ಯವನ್ನು ಕೊಡದೆ ತುಂಬಿಟ್ಟುಕೊಳ್ಳುವವನ ಮೇಲೆ ಜನರ ಶಾಪ; ಧಾನ್ಯವನ್ನು ಮಾರುವವನ ತಲೆಯ ಮೇಲೆ ಆಶೀರ್ವಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ; ಮಾರುವವನ ತಲೆಯ ಮೇಲೆ ಆಶೀರ್ವಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಧಾನ್ಯವನ್ನು ಮಾರದೆ ಕೂಡಿಟ್ಟುಕೊಳ್ಳುವವನನ್ನು ಜನರು ಶಪಿಸುವರು. ಧಾನ್ಯ ಮಾರುವವನನ್ನು ಜನರು ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:26
7 ತಿಳಿವುಗಳ ಹೋಲಿಕೆ  

ಸಾಯುತ್ತಿದ್ದವರ ಆಶೀರ್ವಾದವು ನನ್ನ ಮೇಲೆ ಬರುತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ಮಾಡುತ್ತಿದ್ದೆನು.


ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರುವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು, ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.


ಯಾವನು ದುಷ್ಟನಿಗೆ, “ನೀನು ನೀತಿವಂತನು” ಎಂದು ಹೇಳುತ್ತಾನೋ ಅವನನ್ನು ಜನರು ಶಪಿಸುವರು; ಜನಾಂಗಗಳು ಅವನನ್ನು ದೂಷಿಸುವರು.


ಆಗ ಯೋಸೇಫನು ಈಜಿಪ್ಟ್ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ, ಅದನ್ನು ಫರೋಹನ ಮನೆಗೆ ತಂದನು.


ನೀತಿವಂತರ ತಲೆಯ ಮೇಲೆ ಆಶೀರ್ವಾದವಿದೆ; ಆದರೆ ದುಷ್ಟರ ಬಾಯಲ್ಲಿ ಕ್ರೌರ್ಯ ಅಡಗಿದೆ.


ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ; ಆದರೆ ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುವವನಿಗೆ ಅನೇಕ ಶಾಪಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು