Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:6 - ಕನ್ನಡ ಸಮಕಾಲಿಕ ಅನುವಾದ

6 ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವುದು; ಆದರೆ ಅಪನಂಬಿಗಸ್ತರು ದುಷ್ಟ ಆಸೆಗಳಿಂದ ಸಿಕ್ಕಿಹಾಕಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಜ್ಜನರ ಬಿಡುಗಡೆ ಸದಾಚಾರದಿಂದ; ವಂಚಕರ ಬಂಧನ ದುರಾಶೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಧರ್ಮವು ಯಥಾರ್ಥವಂತರನ್ನು ಉದ್ಧರಿಸುವದು; ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀತಿಯು ಯಥಾರ್ಥವಂತರನ್ನು ಕಾಪಾಡುತ್ತದೆ. ಆದರೆ ವಂಚಕರು ತಮ್ಮ ಆಸೆಗಳಿಂದಲೇ ಸಿಕ್ಕಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:6
11 ತಿಳಿವುಗಳ ಹೋಲಿಕೆ  

ಗುಂಡಿಯನ್ನು ಅಗೆಯುವವನೇ ಅದರಲ್ಲಿ ಬೀಳುವನು. ಗೋಡೆಯನ್ನು ಒಡೆಯುವವನನ್ನು ಹಾವು ಕಡಿಯುವುದು.


ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ.


ಅರಸನು ಶಿಮ್ಮಿಗೆ, “ನೀನು ನನ್ನ ತಂದೆ ದಾವೀದನಿಗೆ ಮಾಡಿದ ಕೇಡನ್ನು ನಿನ್ನ ಹೃದಯವು ತಿಳಿದಿದೆ. ಯೆಹೋವ ದೇವರು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವರು.


ನೀನು ನನ್ನ ಸಲಕರಣೆಗಳನ್ನೆಲ್ಲಾ ಹುಡುಕಿದ ಮೇಲೆ ನಿನ್ನ ಮನೆಯ ಯಾವ ವಸ್ತುಗಳನ್ನು ಕಂಡುಕೊಂಡೆ? ನನಗೂ, ನಿನಗೂ ಬಂಧುಗಳಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.


ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ, ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿಕೊಡುವುದು. ಮೇಕೆಗಳಲ್ಲಿ ಚುಕ್ಕೆ ಮತ್ತು ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳು ನನ್ನ ಬಳಿಯಲ್ಲಿದ್ದರೆ, ಅವು ಕದ್ದವುಗಳು ಎಂದು ಎಣಿಕೆಯಾಗಿರಲಿ,” ಎಂದನು.


ಇಸ್ರಾಯೇಲರು ತಿರುಗಿಕೊಂಡು ಬಂದಾಗ, ಬೆನ್ಯಾಮೀನನ ಜನರು ತಲ್ಲಣಗೊಂಡರು, ಏಕೆಂದರೆ ಕೇಡು ತಮ್ಮ ಮೇಲೆ ಪ್ರಾಪ್ತವಾಯಿತೆಂದು ಕಂಡರು.


ರಾಷ್ಟ್ರಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲೇ ಅವರ ಕಾಲುಗಳು ಸಿಕ್ಕಿಕೊಂಡಿವೆ.


ಒಬ್ಬ ಭಕ್ತಿಹೀನನು ಬಾಯಿಂದ ತನ್ನ ನೆರೆಯವನನ್ನು ಹಾಳು ಮಾಡುತ್ತಾನೆ, ಆದರೆ ನೀತಿವಂತನು ತಿಳುವಳಿಕೆಯ ಮೂಲಕ ಬಿಡಿಸಲಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು